ETV Bharat / state

ಮಾ.4 ರಂದು ಬೆಂಗಳೂರು ಕೃಷಿ ವಿವಿಯ 58ನೇ ಘಟಿಕೋತ್ಸವ: ಎಂ.ಸಿ. ರಂಗಸ್ವಾಮಿಗೆ ಗೌರವ ಡಾಕ್ಟರೇಟ್

author img

By ETV Bharat Karnataka Team

Published : Mar 2, 2024, 4:18 PM IST

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದ ಎಂ.ಸಿ.ರಂಗಸ್ವಾಮಿ ಅವರಿಗೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಡಾ.ಎಸ್​.ವಿ.ಸುರೇಶ್ ಮಾಹಿತಿ ನೀಡಿದರು.

Etv Bharat
Etv Bharat

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವವನ್ನು ಮಾರ್ಚ್ 4 ರಂದು ಜಿಕೆವಿಕೆ ಆವರಣದಲ್ಲಿ ಹಮ್ಮಿಕೊಂಡಿರುವುದಾಗಿ ಕೃಷಿ ವಿವಿ ಕುಲಪತಿ ಡಾ. ಎಸ್.ವಿ. ಸುರೇಶ್ ಮಾಹಿತಿ ನೀಡಿದರು. ನಗರದ ಪ್ರೆಸ್ ಕ್ಲಬ್ ಆವರಣದಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಅವಧಿಯಲ್ಲಿ 1,244 ವಿದ್ಯಾರ್ಥಿಗಳಿಗೆ ಪದವಿಗಳನ್ನು ಪ್ರದಾನ ಮಾಡುತ್ತಿರುವುದಾಗಿ ತಿಳಿಸಿದರು. ಅಲ್ಲದೆ, ಡಾಕ್ಟರ್ ಆಫ್ ಫಿಲಾಸಫಿಯಲ್ಲಿ 29 ಚಿನ್ನದ ಪದಕ, ಮಾಸ್ಟರ್ ಪದವಿಯಲ್ಲಿ 39 ಚಿನ್ನದ ಪದಕ, ಸ್ನಾತಕ ಪದವಿಯಲ್ಲಿ 59 ಚಿನ್ನದ ಪದಕ ಪ್ರದಾನ ಮಾಡುತ್ತಿರುವುದಾಗಿ ಹೇಳಿದರು.

ವಿಶ್ವವಿದ್ಯಾಲಯದಿಂದ 134 ಹಾಗೂ ದಾನಿಗಳಿಂದ 22 ಚಿನ್ನದ ಪದಕಗಳು ಸೇರಿ ಒಟ್ಟು 154 ಪದಕಗಳನ್ನು ನೀಡಲಾಗುತ್ತಿದೆ. ಇಡೀ ವಿವಿ ಅಧೀನದ ಕಾಲೇಜುಗಳಲ್ಲಿ 49 ವಿದ್ಯಾರ್ಥಿನಿಯರು ಹಾಗೂ 14 ವಿದ್ಯಾರ್ಥಿಗಳು ಸೇರಿ ಒಟ್ಟು 63 ವಿದ್ಯಾರ್ಥಿಗಳು ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ ಎಂದು ಅವರು ವಿವರಿಸಿದರು.

ಕುವೆಂಪು ವಿವಿ ನೂತನ ಪ್ರಭಾರ ಕುಲಪತಿಯಾಗಿ ಪ್ರೊ.‌ ಎಸ್.ವಿ.ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ
ಕುವೆಂಪು ವಿವಿ ನೂತನ ಪ್ರಭಾರ ಕುಲಪತಿಯಾಗಿ ಪ್ರೊ.‌ ಎಸ್.ವಿ.ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

ಗೌರವ ಡಾಕ್ಟರೇಟ್: 600 ಎಕರೆ ಜಮೀನಿನಲ್ಲಿ ಪಶು ಸಂಗೋಪನೆ ಜೊತೆಗೆ ವೈಜ್ಞಾನಿಕವಾಗಿ ಕೃಷಿ ಕಾರ್ಯದಲ್ಲಿ ತೊಡಗಿರುವ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದ ಎಂ.ಸಿ. ರಂಗಸ್ವಾಮಿ ಅವರಿಗೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುತ್ತಿರುವುದಾಗಿ ಅವರು ಇದೇ ವೇಳೆ ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ವಿವಿಯ ಶಿಕ್ಷಣ ನಿರ್ದೇಶಕ ಡಾ.ಕೆ.ಸಿ. ನಾರಾಯಣಸ್ವಾಮಿ, ಕುಲಸಚಿವ ಡಾ. ಬಸವೇಗೌಡ, ವಿಸ್ತರಣಾ ನಿರ್ದೇಶಕರಾದ ಡಾ.ವಿ.ಎಲ್. ಮಧುಪ್ರಸಾದ್ ಉಪಸ್ಥಿತರಿದ್ದರು.

ಕುವೆಂಪು ವಿವಿ ನೂತನ ಪ್ರಭಾರ ಕುಲಪತಿಯಾಗಿ ಪ್ರೊ.‌ ಎಸ್.ವಿ. ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ಪ್ರೊ.‌ ಎಸ್.ವಿ. ಕೃಷ್ಣಮೂರ್ತಿ ಅಧಿಕಾರ ಸ್ವೀಕರಿಸಿದರು. ಪ್ರೊ.‌ಎಸ್.ವೆಂಕಟೇಶ್ ಅವರ ಡೀನ್ ಅವಧಿ ಮಾರ್ಚ್ 01ಕ್ಕೆ ಮುಕ್ತಾಯಗೊಂಡ‌ ಹಿನ್ನೆಲೆಯಲ್ಲಿ ನಂತರದ ಹಿರಿಯ ಡೀನರಾದ ಪ್ರೊ. ಎಸ್. ವಿ. ಕೃಷ್ಣಮೂರ್ತಿ ಅವರನ್ನು ಪ್ರಭಾರ ಕುಲಪತಿಯನ್ನಾಗಿ‌ ನೇಮಕಗೊಳಿಸಿ‌ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಮೂಲತಃ ಪರಿಸರ ವಿಜ್ಞಾನ ಪ್ರಾಧ್ಯಾಪಕರಾದ ಪ್ರೊ.‌ ಕೃಷ್ಣಮೂರ್ತಿ ಅವರ ಡೀನ್ ಅವಧಿ 2025ರ ಮಾರ್ಚ್​ವರೆಗೆ ಇದ್ದು, ಪೂರ್ಣಾವಧಿ ಕುಲಪತಿ ನೇಮಕಗೊಳ್ಳುವವರೆಗೆ ಕಾರ್ಯನಿರ್ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರೊ. ಎಸ್ ವೆಂಕಟೇಶ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ ಎಸ್ ಗೋಪಿನಾಥ್, ಹಣಕಾಸು ಅಧಿಕಾರಿ ಜಿ.‌ ಬಂಗಾರಪ್ಪ, ಡಾ. ಕೆ.‌ ಆರ್. ಮಂಜುನಾಥ್ ಸೇರಿದಂತೆ ವಿವಿಧ ಆಡಳಿತಾಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಿ: ವಿದ್ಯಾರ್ಥಿಗಳಿಗೆ ರಾಜ್ಯಪಾಲ ಗೆಹ್ಲೋಟ್ ಸಲಹೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.