ETV Bharat / state

ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: ಕೇರಳದಲ್ಲಿ ಆರೋಪಿ ಬಂಧನ - HARASSMENT CASE

ರಸ್ತೆಯಲ್ಲಿ ಬರುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ಧಾರೆ.

bengaluru-police-arrested-harassment-case-accused-in-kerala
ಘಟನಾ ಸ್ಥಳ (ETV Bharat)
author img

By ETV Bharat Karnataka Team

Published : April 14, 2025 at 11:10 AM IST

1 Min Read

ಬೆಂಗಳೂರು: ರಸ್ತೆಯಲ್ಲಿ ತೆರಳುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ನಗರದ ಸದ್ದುಗುಂಟೆಪಾಳ್ಯ ಠಾಣೆ ಪೊಲೀಸರು ಕೇರಳದಲ್ಲಿ ಬಂಧನ ಮಾಡಿದ್ದಾರೆ.

ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಸಂತೋಷ್ ಎಂಬಾತನನ್ನು ಬಂಧನ ಮಾಡಲಾಗಿದ್ದು, ಬೆಂಗಳೂರಿಗೆ ಕರೆತರಲಾಗಿದೆ. ಈತ ಬೆಂಗಳೂರಿನ ತಿಲಕನಗರದ ಗುಲ್ಬರ್ಗಾ ಕಾಲೋನಿಯ ನಿವಾಸಿಯಾಗಿದ್ದು, ವೈಟ್‌ಫೀಲ್ಡ್ ವ್ಯಾಪ್ತಿಯ ಕಾರು ಶೋರೂಮ್‌ವೊಂದರಲ್ಲಿ ಕಾರು ಚಾಲಕನಾಗಿದ್ದ. ಕೃತ್ಯವೆಸಗಿರುವುದು ತಾನೇ ಎಂದು ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದಾನೆ. ಇಂದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ.

ಪ್ರಕರಣದ ಬಗ್ಗೆ ಡಿಸಿಪಿ ಮಾಹಿತಿ (ETV Bharat)

ಏಪ್ರಿಲ್ 3ರಂದು ಮುಂಜಾನೆ ಸುಮಾರು 1.55ಕ್ಕೆ ಇಬ್ಬರು ಯುವತಿಯರು ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಸಾಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಏಕಾಏಕಿ ಓರ್ವ ಯುವತಿಯನ್ನು ಹಿಡಿದುಕೊಂಡು ಗೋಡೆಗೆ ಒರಗಿಸಿ, ಆಕೆಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದ.

ಇದನ್ನೂ ಓದಿ: ಬೆಂಗಳೂರು: ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸಿಸಿಟಿವಿಯಲ್ಲಿ ಕಾಮುಕನ ದುಷ್ಕೃತ್ಯ ಸೆರೆ

ಈ ವೇಳೆ ಯುವತಿಯರು ಜೋರಾಗಿ ಕಿರುಚಿಕೊಂಡ ಪರಿಣಾಮ ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದ. ಆರೋಪಿಯ ವಿಕೃತಿ ಘಟನಾ ಸ್ಥಳದ ಪಕ್ಕದಲ್ಲಿದ್ದ ಕಟ್ಟಡವೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಕಿರುಕುಳ ಅನುಭವಿಸಿದ ಯುವತಿಯರು ಘಟನೆ ಸಂಬಂಧ ಯಾವುದೇ ದೂರು ನೀಡಿರಲಿಲ್ಲ. ಆದರೆ, ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಅನ್ವಯ ಸದ್ದುಗುಂಟೆಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಪೊಲೀಸರ ತಂಡ ಆರೋಪಿಯ ಪತ್ತೆಗಾಗಿ ಸುಮಾರು 700ಕ್ಕೂ ಅಧಿಕ ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಜಾಲಾಡಿತ್ತು.

ಇದನ್ನೂ ಓದಿ: ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಪತ್ತೆಗಾಗಿ 300ಕ್ಕೂ ಅಧಿಕ ಸಿಸಿಟಿವಿ ದೃಶ್ಯಗಳ ವಿಶ್ಲೇಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.