ETV Bharat / state

ರಾಜ್ಯ ಸರ್ಕಾರದ ಉದ್ಧಟತನ, ಸಿಎಂ - ಡಿಸಿಎಂ ಸ್ವಪ್ರತಿಷ್ಠೆಗೆ 11 ಜೀವಗಳು ಬಲಿ; ಹೆಚ್​ಡಿಕೆ ಕಿಡಿ - KUMARASWAMY SLAMS

ರಾಜ್ಯ ಸರ್ಕಾರದ ಉದ್ಧಟತನ , ಸಿಎಂ ಹಾಗೂ ಡಿಸಿಎಂ ಅವರ ಸ್ವಪ್ರತಿಷ್ಠೆಗೆ 11 ಜೀವಗಳು ಬಲಿಯಾಗಿದ್ದು, ಕಂಡೋರ ಮಕ್ಕಳ ಸಾವು ಇವರಿಗೆ ಸತ್ಯಮೇವ ಜಯತೇಯೇ? ಎಂದು ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

KUMARASWAMY SLAMS
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : June 6, 2025 at 4:22 PM IST

4 Min Read

ಬೆಂಗಳೂರು: ರಾಜ್ಯ ಸರ್ಕಾರದ ಉದ್ಧಟತನಕ್ಕೆ, ಸಿಎಂ ಹಾಗೂ ಡಿಸಿಎಂ ಅವರ ಸ್ವಪ್ರತಿಷ್ಠೆಗೆ 11 ಜೀವಗಳು ಬಲಿಯಾಗಿವೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್‌ನಿಂದ ಹೊರ ಹಾಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಖಾಸಗಿ ಹೋಟೆಲ್​ನಲ್ಲಿಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಮಾಡಿರುವ ತಪ್ಪನ್ನು ಮುಚ್ಚಿಕೊಳ್ಳಲು ಪೊಲೀಸ್ ಆಯುಕ್ತ ದಯಾನಂದ್ ಸೇರಿ ಐದು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಇದು ರಾಜ್ಯಕ್ಕೆ ಕೆಟ್ಟ ಹೆಸರು. ಹೊಸ ವರ್ಷ ಆಚರಣೆ ವೇಳೆ ಇದೇ ಪೊಲೀಸ್ ಆಯುಕ್ತರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಈಗ ಅವರನ್ನು ಹೇಗೆ ಅಮಾನತು ಮಾಡುತ್ತೀರಿ? ಎಂದರು.

ಪೊಲೀಸ್ ಆಯುಕ್ತರು ವಿಧಾನಸೌಧದ ಮುಂದೆ ಸ್ಟೇಡಿಯಂ ಎರಡೂ ಕಡೆ ಭದ್ರತಾ ಕಾರಣಕ್ಕೆ ಸಮಾರಂಭ ಬೇಡ ಎನ್ನುತ್ತಾರೆ. ಆದರೆ, ಮುಖ್ಯಮಂತ್ರಿಗಳ ಜೊತೆ 24 ಗಂಟೆ ಗೋವಿಂದ ಗೋವಿಂದ ಎಂದು ಹೇಳುವ ವ್ಯಕ್ತಿ ಪೊಲೀಸ್ ಕಮಿಷನರ್‌ಗೆ ದೂರವಾಣಿ ಕರೆ ಮಾಡಿ ಒತ್ತಡ ಹಾಕುತ್ತಾರೆ ಎಂದು ಕಿಡಿಕಾರಿದರು.

ನಾನು ಬಿ. ದಯಾನಂದ್​ ಪರ ವಕಾಲತ್ತು ಮಾಡುತ್ತಿಲ್ಲ. ಅಮಾನತಾದ ಡಿಸಿಪಿ ಒಬ್ಬರು ‘ಅಪ್ಪಯ್ಯ’ನ ಆತ್ಮೀಯರು ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರು ಕಾಲ್ತುಳಿತ ಸಂಬಂಧ ಪೊಲೀಸರ ಅಮಾನತು ಮಾಡಿರುವುದು ನಾಟಕವಷ್ಟೇ. ‘ಹದಿನೈದು ದಿನ ಸಸ್ಪೆಂಡ್ ಅಂತ ನಾಟಕ ಮಾಡುತ್ತೇವೆ, ಬೇಸರ ಮಾಡಿಕೊಳ್ಳಬೇಡಿ’ ಎಂಬುದಾಗಿ ಮೊದಲೇ ಹೇಳಿರುತ್ತಾರೆ ಅಷ್ಟೇ ಎಂದು ಟೀಕಿಸಿದರು.

ಈ ಮುಖ್ಯಮಂತ್ರಿಯಿಂದ ಈ ರೀತಿ ಆಡಳಿತವನ್ನು ಊಹೆ ಮಾಡಿರಲಿಲ್ಲ. ನಿಮ್ಮ ಪ್ರತಿಷ್ಠೆ ಹಿನ್ನೆಲೆಯಲ್ಲಿ ಈ ಸಾವು ನೋವುಗಳಿಗೆ ನೀವೇ ಕಾರಣ. ಆದರಿಂದ ಏನಾದರೂ ಸರ್ಕಾರಕ್ಕೆ ಮರ್ಯಾದೆ ಕೊಡಬೇಕಾದರೆ ಮೊದಲು ಸಿಎಂ, ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ವರ್ಚಸ್ಸು ಹೆಚ್ಚಿಸಿಕೊಳ್ಳುವ, ಪ್ರಚಾರದ ಹಪಾಹಪಿಗೆ ಸಿಕ್ಕಿ ಸಿಎಂ, ಡಿಸಿಎಂ ಇಬ್ಬರೂ ಈ ದುರ್ಘಟನೆಗೆ ಕಾರಣರಾಗಿದ್ದಾರೆ ಎಂದು ದೂರಿದ ಕುಮಾರಸ್ವಾಮಿ, ಶೋ ಮಾಡಲು ಹೋಗಿ ಡಿಸಿಎಂ ತಗುಲಿಕೊಂಡಿದ್ದಾರೆ ಎಂದರು.

ಸಿಎಂ, ಡಿಸಿಎಂ ಅವರ ತಪ್ಪು ಹೆಜ್ಜೆ: ಒಂದು ಕೇಸಿನ ನಿಮಿತ್ತ ಡಿಸಿಎಂ ಕನಕಪುರದ ಕೋರ್ಟ್​ನಲ್ಲಿದ್ದರು. ಬೆಂಗಳೂರಿಗೆ ಬರುತ್ತಿದ ಆರ್​ಸಿಬಿ ತಂಡವನ್ನು ಸ್ವಾಗತಿಸಲು ಸಿಎಂ ಹಾಗೂ ಮತ್ತವರ ಪಟಾಲಂ ಸಜ್ಜಾಗಿತ್ತು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ತಂಡಕ್ಕೆ ಸನ್ಮಾನ ಮಾಡಲು ಸಿಎಂ ಟೀಂ ನಿರ್ಧಾರಿಸಿದೆ ಅಂತಾ ಡಿಸಿಎಂಗೆ ಮಾಹಿತಿ ಹೋಗುತ್ತದೆ. ಇದರಿಂದ ಡಿಕೆಶಿ, ಅಲ್ಲಿಂದಲೇ ನೇರವಾಗಿ ಕೈಯ್ಯಲ್ಲಿ ಆರ್​ಸಿಬಿ ಬಾವುಟ ಹಿಡಿದು ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬರುತ್ತಾರೆ ಎಂದು ಸಿಎಂ, ಡಿಸಿಎಂ ಅವರ ತಪ್ಪು ಹೆಜ್ಜೆಗಳನ್ನು ಕೇಂದ್ರ ಸಚಿವರು ಎಳೆಎಳೆಯಾಗಿ ಬಿಡಿಸಿಟ್ಟರು.

ಕಪ್ ಗೆದ್ದವರು ಆಟಗಾರರು. ಆದರೇ ಡಿಕೆಶಿಗೆ ತಾನೇ ಕಪ್ ಗೆದ್ದಷ್ಟು ಉಮೇದು. ಅಲ್ಲಿಂದಲೇ ಕಪ್​ಗೆ ಅವರಿಂದ ಮುತ್ತಿನ ಸುರಿಮಳೆ ಶುರುವಾಯಿತು. ಅಲ್ಲಿ ಡಿಸಿಎಂ ಅವರು ವಿರಾಟ್ ಕೊಹ್ಲಿಗೆ ಕನ್ನಡದ ಬಾವುಟ ಕೊಟ್ಟರು. ಆದರೆ, ಡಿಸಿಎಂ ಅವರು ಕನ್ನಡ ಶಾಲು ಹಾಕಿಕೊಳ್ಳದೆ ಕುತ್ತಿಗೆಯ ಸುತ್ತ ವಿದೇಶಿ ಮಫ್ಲರ್ ಹಾಕಿದ್ದರು. ಆದರೆ, ಕೊಹ್ಲಿ ಪುನಃ ಆ ಕನ್ನಡ ಬಾವುಟವನ್ನು ಡಿಕೆಶಿಗೆ ವಾಪಸ್​ ಕೊಟ್ಟರು. ಇಷ್ಟೆಲ್ಲಾ ನಾಟಕ ಆಡುವ ಅಗತ್ಯ ಇದೆಯಾ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ವಿಧಾನಸೌಧ ಮೆಟ್ಟಿಲು ಮೇಲಿನ ವೇದಿಕೆಯಲ್ಲಿ ನಡೆದ ವಿಜಯೋತ್ಸವ ಸರ್ಕಾರಿ ಕಾರ್ಯಕ್ರಮ ಆಗಿರಲಿಲ್ಲ. ಮಂತ್ರಿಗಳ ಮಕ್ಕಳು, ಮೊಮ್ಮಕ್ಕಳು ಸೇರಿ ಕುಟುಂಬದ ಕಾರ್ಯಕ್ರಮ ಆಗಿತ್ತು. ಸನ್​ ಗ್ಲಾಸ್ ಹಾಕಿಕೊಂಡು ಎಲ್ಲರೂ ಪೋಸ್ ಕೊಟ್ಟಿದ್ದೇ ಕೊಟ್ಟಿದ್ದು. ವೇದಿಕೆಯ ಮೇಲೆಯೇ ಡಿಕೆಶಿ ಒಬ್ಬರ ಮೇಲೆ ಹಲ್ಲೆ ನಡೆಸಿ ಕುತ್ತಿಗೆ ಹಿಡಿದು ಆಚೆ ತಳ್ಳಿದರು. ಇದೆಲ್ಲಾ ಏನು? ಅಸಹ್ಯ ಅಲ್ಲವೇ? ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲಿದೆ ಸತ್ಯಮೇವ ಜಯತೆ? ಕಾಲುತುಳಿತದಲ್ಲಿ ಮೊದಲ ಸಾವು ಅಪರಾಹ್ನ 3.10ಕ್ಕೆ ಸಂಭವಿಸಿದೆ. ಆದರೆ, ಡಿ.ಕೆ.ಶಿವಕುಮಾರ್ ಮೈದಾನಕ್ಕೆ ಹೋಗಿ ಅಲ್ಲಿ ಕಪ್‌ಗೆ ಮುತ್ತಿಕ್ಕುತ್ತಿದ್ದರು. ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ ತಮ್ಮ ಮೊಮ್ಮಗನನ್ನು ಕರೆದುಕೊಂಡು ಹೋಗಿ ಜನಾರ್ದನ ಹೋಟಲ್​ಗೆ ತೆರಳಿ ಮಸಾಲೆ ದೋಸೆ, ಹಲ್ವಾ ತಿನ್ನುತ್ತಿದ್ದರು. ಸತ್ಯಮೇವ ಜಯತೆ ಅಂತಾರೆ. ಕಂಡೋರ ಮಕ್ಕಳ ಸಾವು ಇವರಿಗೆ ಸತ್ಯಮೇವ ಜಯತೇಯೇ? ಇವರಿಗೆ ನಾಚಿಕೆ ಆಗಬೇಕು. ಕೋರ್ಟ್ ಛೀಮಾರಿ ಹಾಕಿದ ಮೇಲೆ ಇವರಿಗೆ ಎಚ್ಚರವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮುಖಸ್ಥರನ್ನು ಸಸ್ಪೆಂಡ್ ಮಾಡಿಲ್ಲ ಯಾಕೆ?: ಗೃಹ ಸಚಿವ ಜಿ.ಪರಮೇಶ್ವರ್ ಓರ್ವ ನಿಷ್ಕ್ರಿಯ ಸಚಿವರು. ಅವರು ಕೀಲುಗೊಂಬೆ ಇದ್ದಂತೆ. ಕೀ ಕೊಟ್ಟರೆ ಮಾತ್ರ ಮೇಲೆ ಏಳುತ್ತಾರೆ. ಇಲ್ಲವಾದರೆ ಇಲ್ಲ. ಅವರನ್ನು ನೋಡಿದರೆ ಪಾಪ ಎನಿಸುತ್ತದೆ ಎಂದು ಕುಟುಕಿದ ಕೇಂದ್ರ ಸಚಿವ ಕುಮಾರಸ್ವಾಮಿ, ಎಷ್ಟು ಜನ ಸೇರುತ್ತಾರೆ? ಎಂಬುದು ಸರ್ಕಾರಕ್ಕೆ ಗೊತ್ತಿಲ್ಲವೇ? ಗುಪ್ತದಳ ಏನು ಮಾಡುತ್ತಿತ್ತು. ಈ ಘಟನೆಯಲ್ಲಿ ಇಂಟಲಿಜೆನ್ಸ್ ತಪ್ಪಿದೆ ಎಂದು ಸರ್ಕಾರ ಒಪ್ಪಿಕೊಂಡರೂ ಅದರ ಮುಖಸ್ಥರನ್ನು ಸಸ್ಪೆಂಡ್ ಮಾಡಿಲ್ಲ ಯಾಕೆ? ಅವರು ಪ್ರಭಾವಶಾಲಿ ಎಂದಾ? ಅಥವಾ ಹೈಕಮಾಂಡ್​ಗೆ ಕೇಳಬೇಕಾ? ಎಂದು ಖಾರವಾಗಿ ಪ್ರಶ್ನಿಸಿದರು.

ಐಎಫ್‌ಎಸ್ ಅಧಿಕಾರಿಯ ಅಮಾನತು: ಹೆಚ್‌ಎಂಟಿಗೆ ಕಾಯಕಲ್ಪ ‌ನೀಡಲು ಪ್ರಯತ್ನ ಮಾಡುತ್ತಿದ್ದೇನೆ. ವೈಝಾಗ್ ಸ್ಟೀಲ್ ನಂತರ, ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ಸೇಲಂ ಉಕ್ಕು ಕಾರ್ಖಾನೆಯನ್ನು ಪುನಶ್ಚೇತನ ಮಾಡುವ ಪ್ರಯತ್ನ ನಡೆಯುತ್ತಿದೆ. ಕುಮಾರಸ್ವಾಮಿ ಎಲ್ಲಿ ಹೆಚ್​ಎಂಟಿಯನ್ನು ಉಳಿಸಿಬಿಡುತ್ತಾನೋ ಎಂದು ಆ ಕಾರ್ಖಾನೆಯ ಒಳಿತಿಗಾಗಿ ಪ್ರಯತ್ನಿಸಿದ ಐಎಫ್‌ಎಸ್ ಅಧಿಕಾರಿಯನ್ನು ಅಮಾನತು ಮಾಡಿದೆ ಈ ಸರ್ಕಾರ. ನನ್ನ ಅನುಭವದಲ್ಲಿ ಇಂತಹ ಕೆಟ್ಟ ಸರ್ಕಾರವನ್ನು ನಾನು ನೋಡಿಲ್ಲ. ಇಂತಹ ಕೆಟ್ಟ ಮುಖ್ಯಮಂತ್ರಿಯನ್ನು ಎಂದೂ ಕಂಡಿಲ್ಲ ಎಂದು ಹರಿಹಾಯ್ದರು.

ಕಾಂಗ್ರೆಸ್ ಸರ್ಕಾರ ಮಾಡುವ ಕೆಲಸ ಬಿಟ್ಟು ಜೆಡಿಎಸ್ ಬಿಜೆಪಿ ನಂಟು ಕಿತ್ತು ಹೋಗಲಿ ಎಂದು ಬಯಸುತ್ತಿದೆ. ಅದು ಎಂದಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಒಳ್ಳೆಯ ಹೊಂದಾಣಿಕೆ ಇದೆ. ಬಿಜೆಪಿ ಹಾಗೂ ಜೆಡಿಎಸ್ ಚೆನ್ನಾಗಿ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿವೆ. ಈ ಸರ್ಕಾರದ ಅದಕ್ಷತೆಯ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಎರಡು ಪಕ್ಷಗಳು ಕಾನೂನು ಹೋರಾಟ ಮಾಡುತ್ತೇವೆ ಎಂದು ಅವರು ಹೇಳಿದರು.

ರೀಲ್ಸ್ ಮಿನಿಸ್ಟರ್: ಜೆಪಿ ನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಪೊಲೀಸರನ್ನು ಅಮಾನತು ಮಾಡಿದೆ. ಖುದ್ದು ಪೊಲೀಸರೇ ಎರಡೆರಡು ಕಡೆ ಕಾರ್ಯಕ್ರಮ ಬೇಡ ಅಂದರೂ ಸಿಎಂ ಮತ್ತು ಡಿಸಿಎಂ ಕ್ರೆಡಿಟ್ ಪಡೆಯೋಕೆ ಈ ಕಾರ್ಯಕ್ರಮ ಮಾಡಿ ಅನಾಹುತಕ್ಕೆ ಕಾರಣರಾಗಿದ್ದಾರೆ. ಡಿ.ಕೆ. ಶಿವಕುಮಾರ್ ಡಿಸಿಎಂ ಅಲ್ಲ, ಅವರು ರೀಲ್ಸ್ ಮಿನಿಸ್ಟರ್. ಆರ್​ಸಿಬಿ ಅಭಿಮಾನಿಗಳ ಸಾವಿನ ಸುದ್ದಿ ತಿಳಿದ ಮೇಲೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಪ್​ಗೆ ಮುತ್ತು ಕೊಟ್ಟು ಸಾವಿನಲ್ಲೂ ಸಂಭ್ರಮ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ - CM SIDDARAMAIAH

ETV Bharat Logo

Copyright © 2025 Ushodaya Enterprises Pvt. Ltd., All Rights Reserved.