ETV Bharat / state

ಇಂದು ಬೆಂಗಳೂರು ವಿವಿ ಘಟಿಕೋತ್ಸವ: ಗುರುಕಿರಣ್, ಕೆ.ಎಸ್‌.ರಾಜಣ್ಣಗೆ ಗೌರವ ಡಾಕ್ಟರೇಟ್ - Bengaluru University Convocation

ಬೆಂಗಳೂರು ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಹಿನ್ನೆಲೆಯಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ಹಾಗೂ ರಾಜ್ಯ ವಿಕಲಚೇತನ ವ್ಯಕ್ತಿಗಳ ಅಧಿನಿಯಮದ ಮಾಜಿ ಆಯುಕ್ತರಾದ ಕೆ.ಎಸ್.ರಾಜಣ್ಣರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುತ್ತಿದೆ.

author img

By ETV Bharat Karnataka Team

Published : Sep 9, 2024, 10:31 PM IST

Updated : Sep 10, 2024, 6:56 AM IST

bengaluru university DOCTORATE
ಗುರುಕಿರಣ್, ಕೆ.ಎಸ್‌.ರಾಜಣ್ಣ (ETV Bharat)

ಬೆಂಗಳೂರು: ಕಲೆ, ಸಂಗೀತ ಕ್ಷೇತ್ರದ ಸಾಧನೆಗೆ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಹಾಗೂ ಕ್ರೀಡೆ, ಸಮಾಜ ಸೇವೆ ಕ್ಷೇತ್ರದಲ್ಲಿನ ಸಾಧನೆಗೆ ರಾಜ್ಯ ವಿಕಲಚೇತನ ವ್ಯಕ್ತಿಗಳ ಅಧಿನಿಯಮದ ಮಾಜಿ ಆಯುಕ್ತರಾದ ಕೆ.ಎಸ್.ರಾಜಣ್ಣ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಎಸ್.ಎಂ.ಡಾ.ಜಯಕರ ತಿಳಿಸಿದರು.

ಸೋಮವಾರ ಬೆಂಗಳೂರು ವಿಶ್ವವಿದ್ಯಾಲಯ 59ನೇ ಘಟಿಕೋತ್ಸವದ ಕುರಿತು ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಗಳವಾರ ನಡೆಯಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ಉನ್ನತ ಶಿಕ್ಷಣ ಸಚಿವ ಸಹ - ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ವಹಿಸಲಿದ್ದಾರೆ. ವಿಶ್ವವಿದ್ಯಾಲಯದ ಧನಸಹಾಯ ಆಯೋಗದ ಉಪಾಧ್ಯಕ್ಷ ಮತ್ತು ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಸೋಷಿಯಲ್ ಸೈನ್ಸ್ ರಿಸರ್ಚ್ ಅಧ್ಯಕ್ಷ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವದಲ್ಲಿ 26,210 ವಿದ್ಯಾರ್ಥಿಗಳು ಪದವಿಗೆ ಅರ್ಹರಾಗಿದ್ದಾರೆ. 158 ವಿದ್ಯಾರ್ಥಿಗಳು 308 ಚಿನ್ನದ ಪದಕಗಳನ್ನು ಸ್ವೀಕರಿಸಲಿದ್ದಾರೆ, 79 ನಗದು ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. 140 ವಿದ್ಯಾರ್ಥಿಗಳು ಪಿಹೆಚ್‌ಡಿ ಪದವಿ ಸ್ವೀಕರಿಸಲಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. 14,063 ವಿದ್ಯಾರ್ಥಿನಿಯರು ಹಾಗೂ 12,007 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ ಎಂದು ತಿಳಿಸಿದರು.

9 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ: ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಎಸ್.ಅನ್ನಪೂರ್ಣ ಒಟ್ಟು 9 ಚಿನ್ನದ ಪದಕ ಗಳಿಸುವ ಮೂಲಕ ಅತಿ ಹೆಚ್ಚು ಪದಕ ಗಳಿಸಿದ್ದಾರೆ. ಸ್ನಾತಕ ಪದವಿ ವಿಭಾಗದಲ್ಲಿ ಎಂ.ಅನುರಾಧ 9 ಚಿನ್ನದ ಪದಕ ಗಳಿಸಿದ್ದಾರೆ ಎಂದರು.

ಜೆ.ರಮ್ಯ, ಎಂ.ಪಿ. ರಮ್ಯ, ವೈ.ಬಿ.ವಿಶಾಲಾಕ್ಷಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಚಿನ್ನದ ಪದಕ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಾಗಿದ್ದಾರೆ. ವಿ.ಪ್ರೀತಾ ಮತ್ತು ಪೂಜಾ ಪಿ. ವರ್ಷದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಕುಲಪತಿ ಎಸ್.ಎಂ.ಡಾ.ಜಯಕರ ಹೇಳಿದರು.

ರಾಜ್ಯಪಾಲರು ಗೈರು: ಘಟಿಕೋತ್ಸವ ಸಮಾರಂಭಕ್ಕೆ ರಾಜ್ಯಪಾಲರು ಮತ್ತು ಕುಲಪತಿಗಳಾದ ಥಾವರ್‌ ಚಂದ್ ಗೆಹ್ಲೋಟ್ ಗೈರಾಗಲಿದ್ದಾರೆ. ಈ ಕುರಿತು ರಾಜಭವನದಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಸಿಂಡಿಕೇಟ್ ಸದಸ್ಯರಿಗೆ ಹೈಕೋರ್ಟ್ ತಡೆ: ಬೆಂಗಳೂರು ವಿಶ್ವವಿದ್ಯಾಲಯದ ಮೂರು ಜನ ಸಿಂಡಿಕೇಟ್ ಸದಸ್ಯರಿಗೆ ವಿಶ್ವವಿದ್ಯಾಲಯದ ಕಾರ್ಯಕ್ರಮಗಳಲ್ಲಿ ಭಾಗಿಯಾಗದಂತೆ ಹೈಕೋರ್ಟ್ ತಡೆ ನೀಡಿದ್ದು, ವಿಶ್ವವಿದ್ಯಾಲಯಕ್ಕೂ ಸೂಚನೆ ನೀಡಲಾಗಿದೆ. ಹೈಕೋರ್ಟ್ ಆದೇಶವನ್ನು ಪಾಲಿಸುತ್ತಿದ್ದೇವೆ. ತಡೆ ಹಿಡಿಯಲಾದ ಮೂವರು ಸಿಂಡಿಕೇಟ್ ಸದಸ್ಯರು ಘಟಿಕೋತ್ಸವದಲ್ಲಿ ಭಾಗಿಯಾಗುವುದಿಲ್ಲ ಎಂದು ಡಾ. ಜಯಕರ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಶೇಕ್ ಲತೀಫ್ ಹಾಗೂ ಮೌಲ್ಯಮಾಪನ ಕುಲಸಚಿವ ಡಾ.ಸಿ.ಶ್ರೀನಿವಾಸ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶಮೂರ್ತಿ ಅದ್ಧೂರಿ ವಿಸರ್ಜನೆ: ಕುಣಿದು ಕುಪ್ಪಳಿಸಿದ ಜನ - ganesha idol lavishly dissolved

Last Updated : Sep 10, 2024, 6:56 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.