ETV Bharat / state

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು - BJP Complaint To EC

author img

By ETV Bharat Karnataka Team

Published : Apr 18, 2024, 3:22 PM IST

ಬಿಜೆಪಿ ನಿಯೋಗ
ಬಿಜೆಪಿ ನಿಯೋಗ

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಬೆಂಗಳೂರು: ಕಲಬುರಗಿಯಲ್ಲಿ 39 ಕೋಟಿ ರೂ ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ಮಾಡುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹಾಗಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಬಿಜೆಪಿ, ಇಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತು.

ಮತದಾರರಿಗೆ ಬೆದರಿಕೆ ಹಾಕಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಹೇಳುತ್ತಿದ್ದಾರೆ ಎಂದು ಆರೋಪಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಇನ್ನೊಂದು ದೂರು ನೀಡಲಾಗಿದೆ. ಡಿಕೆಶಿ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಕಾಂಗ್ರೆಸ್‍ನ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅವರ ಹೆಸರನ್ನು ತೆಗೆಯುವಂತೆ ಸೂಚಿಸಲು ಬಿಜೆಪಿ ಆಗ್ರಹಿಸಿದೆ.

ಕುಣಿಗಲ್ ತಾಲೂಕಿನ ಚಿಕ್ಕಅರ್ಜೇನಹಳ್ಳಿ ಗ್ರಾಮದ ಪ್ರೇಮ್ ಕುಮಾರ್ ಬಿನ್ ಪಿ.ಜಿ.ರಾಮಯ್ಯನವರ ತೋಟಕ್ಕೆ ರಾಜಕೀಯ ವೈಷಮ್ಯದ ಕಾರಣಕ್ಕೆ ಬೆಂಕಿ ಹಚ್ಚಲಾಗಿದೆ. ಈ ಘಟನೆಗೆ ಕಾರಣಕರ್ತರಾದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ನೊಂದಿರುವ ಪ್ರೇಮ್ ಕುಮಾರ್ ಅವರಿಗೆ ಭದ್ರತೆ ನೀಡಬೇಕು. ಸುಳ್ಳು ಹೇಳಿಕೆಗೆ ಸಹಿ ಹಾಕಿಸಿಕೊಂಡ ಪೊಲೀಸ್ ಅಧಿಕಾರಿಗಳನ್ನು ಅಮಾನತುಪಡಿಸುವಂತೆಯೂ ದೂರಿನಲ್ಲಿ ಒತ್ತಾಯಿಸಲಾಗಿದೆ.

ಕುಣಿಗಲ್ ವಿಧಾನಸಭಾ ಕ್ಷೇತ್ರದ ಎಲ್ಲ ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಬೇಕು. ಬೆಂಗಳೂರು ಗ್ರಾಮಾಂತರ ಮತ ಕ್ಷೇತ್ರಕ್ಕೆ ಅರೆ ಸೇನಾಪಡೆ ನಿಯೋಜಿಸಬೇಕು ಎಂದು ತಿಳಿಸಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್‌ನಾರಾಯಣ್, ರಾಜ್ಯ ವಕ್ತಾರ ಮೋಹನ್ ವಿಶ್ವ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್, ಸದಸ್ಯ ಯಶವಂತ್ ಮತ್ತು ಪಕ್ಷದ ಪ್ರಮುಖರು ನಿಯೋಗದಲ್ಲಿದ್ದರು.

ಇದನ್ನೂ ಓದಿ: 'ದೇವೇಗೌಡರ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ದಾಳಿ ಯತ್ನ': ಚು.ಆಯೋಗಕ್ಕೆ ಜೆಡಿಎಸ್-ಬಿಜೆಪಿ ದೂರು - BJP JDS Plaint To EC

ETV Bharat Logo

Copyright © 2024 Ushodaya Enterprises Pvt. Ltd., All Rights Reserved.