ETV Bharat / state

ಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿ ರಘುಪತಿ ಭಟ್ 6 ವರ್ಷ ಬಿಜೆಪಿಯಿಂದ ಉಚ್ಚಾಟನೆ - BJP Expels Raghupati Bhat

author img

By ETV Bharat Karnataka Team

Published : May 25, 2024, 8:06 PM IST

ಬಂಡಾಯ ಅಭ್ಯರ್ಥಿಯಾಗಿ ಪರಿಷತ್ ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಶಾಸಕ ರಘುಪತಿ ಭಟ್​ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಆದೇಶ ಹೊರಡಿಸಿದೆ.

ರಘುಪತಿ ಭಟ್
ರಘುಪತಿ ಭಟ್ (ETV Bharat)

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಪರವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ.

ಆರು ವರ್ಷಗಳ ಕಾಲ ಪಕ್ಷದಿಂದ ರಘುಪತಿ ಭಟ್ ಅವರನ್ನು ಉಚ್ಚಾಟಿಸಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂದು ತಿಳಿಸಲಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶಿಸಲಾಗಿದೆ.

ಜೂ.3ರಂದು ನಡೆಯುವ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೀರಿ. ಇದು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದಂತಾಗಿದೆ. ಈ ಪತ್ರ ತಲುಪಿದ ಎರಡು ದಿನದ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಟೀಕರಣ ನೀಡಬೇಕು ಎಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಸೂಚಿಸಿದ್ದರು. ಇದೀಗ ರಘುಪತಿ ಭಟ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ರಘುಪತಿ ಭಟ್ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಹೈ ಕಮಾಂಡ್ ರಘುಪತಿ ಭಟ್​ಗೆ ಟಿಕೆಟ್ ನೀಡಿರಲಿಲ್ಲ. ಡಾ.ಧನಂಜಯ ಸರ್ಜಿಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಇದರಿಂದ ತೀವ್ರ ಅಸಮಾಧಾನಗೊಂಡ ರಘಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: ರಘುಪತಿ ಭಟ್​ಗೆ ಈಶ್ವರಪ್ಪನವರ ರಾಷ್ಟ್ರಭಕ್ತ ಬಳಗದ ಬೆಂಬಲ - Raghupathi bhat

1994 ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ತರಗಳಲ್ಲಿ ಕೆಲಸ ಮಾಡಿರುವ ರಘುಪತಿ ಭಟ್, ವಿಧಾನಸಭೆಗೆ ಸ್ಪರ್ಧಿಸಿ 3 ಬಾರಿ ಗೆದ್ದಿದ್ದರು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಘುಪತಿ ಭಟ್​​​ಗೆ ಟಿಕೆಟ್ ನೀಡಿರಲಿಲ್ಲ. ವಿಧಾನ ಪರಿಷತ್ ಚುನಾವಣೆಗೂ ಟಿಕೆಟ್ ನೀಡಿರಲಿಲ್ಲ. ಇದರಿಂದ ರಘುಪತಿ ಭಟ್ ಬಂಡಾಯ ಎದ್ದಿದ್ದರು.

ಜೊತೆಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಪಕ್ಷದ ವಿರುದ್ಧ ರಘುಪತಿ ಭಟ್ ಅಸಮಾಧಾನ ಹೊರಹಾಕಿದ್ದರು. ಇನ್ನು ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಇವರಿಗೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: ಬಂಡಾಯ ಅಭ್ಯರ್ಥಿ ರಘುಪತಿ ಭಟ್​​ಗೆ ನೋಟಿಸ್ ಜಾರಿ ಮಾಡಿದ ಬಿಜೆಪಿ ಶಿಸ್ತು ಸಮಿತಿ - BJP Notice To Raghupati Bhat

ETV Bharat Logo

Copyright © 2024 Ushodaya Enterprises Pvt. Ltd., All Rights Reserved.