ETV Bharat / state

ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ರಾಜ್ಯಸಭಾ ಚುನಾವಣೆ ರಣನೀತಿ ಕುರಿತು ಚರ್ಚೆ

author img

By ETV Bharat Karnataka Team

Published : Feb 22, 2024, 10:05 AM IST

ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

Etv Bharat
Etv Bharat

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಗುರುವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಎನ್​ಡಿಎ ಅಭ್ಯರ್ಥಿ ಗೆಲುವಿನ ಕುರಿತು ರಣತಂತ್ರ ರೂಪಿಸಲಾಗುತ್ತದೆ ಎನ್ನಲಾಗಿದೆ.

ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಸಂಜೆ ಏಳು ಗಂಟೆಗೆ ನಡೆಯಲಿರುವ ಸಭೆಯಲ್ಲಿ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಸಂಬಂಧ ಸಮಾಲೋಚನೆ ನಡೆಸಲಾಗುತ್ತದೆ. ಬಿಜೆಪಿ ಅಭ್ಯರ್ಥಿ ಗೆಲುವಿಗೆ ಬೇಕಾದ ಮತಗಳಿಗೂ ಹೆಚ್ಚಿನ ಮತಗಳನ್ನು ಪಕ್ಷ ಹೊಂದಿದ್ದು, ಹೆಚ್ಚುವರಿ ಮತಗಳನ್ನು ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿರುವ ಜೆಡಿಎಸ್​​ನ ಕುಪೇಂದ್ರ ರೆಡ್ಡಿಗೆ ಹಾಕಬೇಕಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಕಾದ ಶಾಸಕರು ಮತ್ತು ಕುಪೇಂದ್ರ ರೆಡ್ಡಿಗೆ ಮತ ಹಾಕಬೇಕಾದ ಶಾಸಕರ ಪಟ್ಟಿಯನ್ನು ಸಿದ್ಧಪಡಿಸಿ ಶಾಸಕರಿಗೆ ವಿವರ ನೀಡಲಾಗುತ್ತದೆ.

ಈಗಾಗಲೇ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ಅಧಿಕೃತವಾಗಿ ಎನ್​​ಡಿಎ ಸೇರಿದೆ. ಹಾಗಾಗಿ ಬಿಜೆಪಿಯ ಹೆಚ್ಚುವರಿ ಮತಗಳ ಆಧಾರದಲ್ಲಿ ಬಿಜೆಪಿ ಹೈಕಮಾಂಡ್ ಸಮ್ಮತಿ ಪಡೆದು ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಹಾಗಾಗಿ ರಾಜ್ಯ ನಾಯಕರು ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕಿದ್ದು, ಅದರಂತೆ ಕಾರ್ಯತಂತ್ರ ರೂಪಿಸುವ ಕುರಿತು ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲಾಗುತ್ತದೆ.

ಇದನ್ನೂ ಓದಿ: ಪಕ್ಷೇತರರಿಗೆ 100 ಕೋಟಿ ರೂ‌. ವರೆಗೆ ಆಮಿಷ: ಕಾಂಗ್ರೆಸ್​ ಆರೋಪಕ್ಕೆ ಕುಪೇಂದ್ರ ರೆಡ್ಡಿ ತಿರುಗೇಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.