ETV Bharat / state

ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್‌ ಬಂದಿದೆ, ಅದಕ್ಕೆ ಎಲೆಕ್ಷನ್​ಗೆ ಸ್ಪರ್ಧಿಸಿದ್ದಾರೆ: ಬಸನಗೌಡ ಪಾಟೀಲ್‌ ಯತ್ನಾಳ್‌ - basanagouda patil yatnal

author img

By ETV Bharat Karnataka Team

Published : Apr 20, 2024, 5:17 PM IST

Updated : Apr 20, 2024, 7:12 PM IST

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ಬಿಜೆಪಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಹೇಳಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್‌ ಬಂದಿದೆ ಅದಕ್ಕೆ ಎಲೆಕ್ಷನ್​ಗೆ ಸ್ಪರ್ಧಿಸಿದ್ದಾರೆ: ಬಸನಗೌಡ ಪಾಟೀಲ್‌ ಯತ್ನಾಳ್‌
ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್‌ ಬಂದಿದೆ ಅದಕ್ಕೆ ಎಲೆಕ್ಷನ್​ಗೆ ಸ್ಪರ್ಧಿಸಿದ್ದಾರೆ: ಬಸನಗೌಡ ಪಾಟೀಲ್‌ ಯತ್ನಾಳ್‌

ಬಸನಗೌಡ ಪಾಟೀಲ್‌ ಯತ್ನಾಳ್‌

ಹುಬ್ಬಳ್ಳಿ: ''ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ, ಅದಕ್ಕೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಆರೋಪಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವರು ಹಿಂದೆ ಯಾರಿಂದ ಪೇಮೆಂಟ್​ ತೆಗೆದುಕೊಂಡು ಎಲ್ಲೆಲ್ಲಿ ಪ್ರತಿಭಟನೆ, ಹೋರಾಟ ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಇವರು ದಿಂಗಾಲೇಶ್ವರ ಅಲ್ಲ, ದಂಗಾಲೇಶ್ವರ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ.7ರ ನಂತರ ಬಹಿರಂಗಪಡಿಸುವೆ'' ಎಂದು ವಾಗ್ದಾಳಿ ನಡೆಸಿದರು.

''ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿಯಿಂದ ಬಿಜೆಪಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಹಿಂದೆ ಮಾತೆ ಮಹಾದೇವಿ ಚುನಾವಣೆಗೆ ಸ್ಪರ್ಧಿಸಿ 10 ಸಾವಿರ ಮತ ಪಡೆದಿದ್ದರು, ಅದೇ ರೀತಿ ಇವರು ಐದು ಸಾವಿರ ಮತ ಪಡೆಯುತ್ತಾರೆ. ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ತೆಗಳುತ್ತಿದ್ದರು. ಇದೀಗ ಒಳ್ಳೆಯ ಸ್ವಾಮೀಜಿ ಎಂದು ಹೇಳುತ್ತಿರುವುದನ್ನು ಗಮನಿಸಿದರೆ ಸ್ವಾಮೀಜಿಗೆ ಪೇಮೆಂಟ್ ಆಗಿದೆ ಎಂಬುದು ಖಚಿತ'' ಎಂದು ಹೇಳಿದರು.

''ರಾಜ್ಯದಲ್ಲಿ ಸೃಷ್ಟಿಯಾಗುತ್ತಿರುವ ತಾಲಿಬಾನ್ ಮಾದರಿಯ ಸಂಸ್ಕೃತಿಯನ್ನು ರಾಜ್ಯಪಾಲರು ಗಮನಿಸುತ್ತಿದ್ದಾರೆ. ಎಲ್ಲಾ ಘಟನಾವಳಿಗಳನ್ನು ಕ್ರೋಢಿಕರಿಸಿ ರಾಷ್ಟ್ರಪತಿಯವರಿಗೆ ವರದಿ ಸಲ್ಲಿಸಬೇಕು. ಈ ಕುರಿತು ರಾಜ್ಯಪಾಲರನ್ನು ಭೇಟಿಯಾಗಲು ನಾವು ಮಾತನಾಡುತ್ತಿದ್ದೇವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ ಕೆ ಶಿವಕುಮಾರ್ ಮತದಾರರನ್ನು ಬೆದರಿಸುತ್ತಿದ್ದಾರೆ. ಇಂತಹ ವಿಚಾರಗಳನ್ನು ಚುನಾವಣಾ ಆಯೋಗ ಗಂಭೀರವಾಗಿ ತೆಗೆದುಕೊಳ್ಳಬೇಕು'' ಎಂದು ಆಗ್ರಹಿಸಿದರು.

ಶಿವಮೊಗ್ಗದಲ್ಲಿ ಹಿರಿಯ ನಾಯಕರಿದ್ದಾರೆ: ಇನ್ನು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಅಲ್ಲಿ ಮೂವರು ಹಿರಿಯ ನಾಯಕರಿದ್ದಾರೆ. ಅಷ್ಟೊಂದು ದೂರ ಕಾಲು ಚಾಚುವಂತಹ ವ್ಯಕ್ತಿ ನಾನಲ್ಲ, ಎನ್ನುವ ಮೂಲಕ ಪುನಃ ಯಡಿಯೂರಪ್ಪ ಅವರ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಕೆ ಎಸ್‌ ಈಶ್ವರಪ್ಪ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸಿದ ಯತ್ನಾಳ, ಅಲ್ಲಿನ ಚುನಾವಣೆಯ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ಇದನ್ನೂ ಓದಿ: ಪ್ರಕರಣದ ತನಿಖೆ ದಾರಿ ತಪ್ಪಿಸುವ ಪ್ರಯತ್ನ ಆಡಳಿತ ಪಕ್ಷದವರಿಂದಲೇ ನಡೆಯುತ್ತಿದೆ: ನಿರಂಜನಯ್ಯ ಹಿರೇಮಠ - Neha murder case

Last Updated :Apr 20, 2024, 7:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.