ETV Bharat / state

ಬುದ್ಧ ಪೂರ್ಣಿಮೆ: ನಂಜನಗೂಡು ಸ್ವಾಮಿ ದೇವಾಲಯಕ್ಕೆ ಹರಿದುಬಂದ ಭಕ್ತ ಸಾಗರ - Buddha purnima

author img

By ETV Bharat Karnataka Team

Published : May 23, 2024, 3:51 PM IST

Updated : May 23, 2024, 8:19 PM IST

ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಧಾರ್ಮಿಕ ಪೂಜೆ ನೆರವೇರಿತು. ಹರಕೆ ಹೊತ್ತಿದ್ದ ಭಕ್ತರು ಉರುಳು ಸೇವೆ ಮುಡಿ ಸೇವೆ ಹಾಗೂ ತುಲಾಭಾರ ಸೇವೆಗಳನ್ನು ದೇವರಿಗೆ ಸಮರ್ಪಿಸುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.

Nanjundeshwar Temple
ನಂಜನಗೂಡಿನ ನಂಜುಂಡೇಶ್ವರ ದೇವಾಲಯ (ETV Bharat)

ನಂಜನಗೂಡಿನ ನಂಜುಡೇಶ್ವರ ದೇವಾಲಯ (ETV Bharat)

ಮೈಸೂರು: ಬುದ್ಧ ಪೂರ್ಣಿಮೆ ಹಿನ್ನೆಲೆ ಇಂದು ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿತು.

ಗುರುವಾರ ಬೆಳಗಿನಜಾವ 5 ಗಂಟೆಯಿಂದ ಭಕ್ತರು ಕಪಿಲಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಸರತಿ ಸಾಲಿನಲ್ಲಿ ದೇವಾಲಯ ಪ್ರವೇಶಿಸಿ ಪುನೀತರಾದರು. ಹರಕೆ ಹೊತ್ತ ಭಕ್ತಾಧಿಗಳು ಉರುಳು ಸೇವೆ, ಮುಡಿ ಸೇವೆ ಹಾಗೂ ತುಲಾಭಾರ ಸೇವೆಗಳನ್ನು ಸಮರ್ಪಿಸುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.

ಇನ್ನು, ಬುದ್ಧ ಹುಣ್ಣಿಮೆ ಅಂಗವಾಗಿ ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಧಾರ್ಮಿಕ ಪೂಜೆ ನೆರವೇರಿಸಲಾಯಿತು. ಬೆಳಗ್ಗೆ 8ರ ನಂತರ ದೇವಾಲಯಕ್ಕೆ ಆಗಮಿಸುವ ಜನರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ನೂರು ರೂಪಾಯಿ ವಿಶೇಷ ಟಿಕೆಟ್ ಮೂಲಕ ದೇವಾಲಯದ ಪ್ರವೇಶ ಪಡೆದುಕೊಳ್ಳುವವರು ಸುಮಾರು ಎರಡು ಗಂಟೆ ಸರತಿ ಸಾಲಿನಲ್ಲಿ ನಿಂತು ದೇವಾಲಯ ಪ್ರವೇಶ ಪಡೆದುಕೊಳ್ಳಬೇಕಾಯಿತು.

ಭಕ್ತರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಒಳಪ್ರವೇಶಿಸಿದರು. ದಾಸೋಹ ಭವನದಲ್ಲಿ ಅನ್ನ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿತ್ತು. ನಗರದ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ಕಂಡುಬಂದಿತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂಓದಿ:ಹುಲಿಗೂ ಇಲ್ಲಿ ದೈವದ ರೂಪ: ತುಳುನಾಡಿನ ವಿಶೇಷ ಈ 'ಪಿಲಿಚಾಮುಂಡಿ' - Pilichamundi Daivaradhane

Last Updated : May 23, 2024, 8:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.