ETV Bharat / state

ಅಂತಿಮ ಹಂತ ತಲುಪಿದ ಕಾವೇರಿ 5ನೇ ಹಂತದ ಕಾಮಗಾರಿ, ನೀರು ಸರಬರಾಜಿಗೆ ಸಿದ್ಧತೆ - Cauvery 5th Stage

ಕಾವೇರಿ 5ನೇ ಹಂತದ ಕಾಮಗಾರಿ ಅಂತಿಮ ಹಂತದಲ್ಲಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್​​ ಪ್ರಸಾತ್​ ಮನೋಹರ್​ ಹೇಳಿದರು.

ಕಾವೇರಿ-5ನೇ ಹಂತದ ಕಾಮಗಾರಿ ಪರಿಶೀಲನೆ
ಕಾವೇರಿ-5ನೇ ಹಂತದ ಕಾಮಗಾರಿ ಪರಿಶೀಲನೆ (ETV Bharat)
author img

By ETV Bharat Karnataka Team

Published : May 16, 2024, 8:38 AM IST

ಬೆಂಗಳೂರು: ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಳ್ಳುವ ಅಂತಿಮ ಹಂತದಲ್ಲಿದ್ದು, ಜಲಮಂಡಳಿ ನೀರು ಸರಬರಾಜು ಮಾಡಲು ಸಿದ್ಧತೆ ನಡೆಸಿದೆ. 110 ಗ್ರಾಮಗಳಿಗೆ ಕಾವೇರಿ ಸಂಪರ್ಕ ನೀಡಲು ಜನರ ಮನೆಬಾಗಿಲಿಗೆ ಜಲಮಂಡಳಿ ತೆರಳಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್​ ಪ್ರಸಾತ್​ ಮನೋಹರ್‌ ತಿಳಿಸಿದರು.

ಕಾವೇರಿ-5ನೇ ಹಂತದ ಕಾಮಗಾರಿಯನ್ನು ಹಾರೋಹಳ್ಳಿ ಬಳಿ ಬುಧವಾರ ಅವರು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡುತ್ತಾ, "ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿವೆ. ಇನ್ನು ಕೆಲವೇ ವಾರಗಳಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು ನೀರು ಸರಬರಾಜು ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ನೀರಿನ ಸಮರ್ಪಕ ಸರಬರಾಜು ಮಾಡುವ ವ್ಯವಸ್ಥೆ ಕಲ್ಪಿಸುವುದು ಹಾಗೂ ಹೊಸ ಕನೆಕ್ಷನ್‌ಗಳನ್ನು ನೊಂದಾಯಿಸಿಕೊಳ್ಳುವ ಪ್ರಕ್ರಿಯೆ ನಡೆಸಬೇಕಾಗಿದೆ" ಎಂದರು.

"5ನೇ ಹಂತದ ಯೋಜನೆಯಿಂದ ಬೆಂಗಳೂರು ನಗರಕ್ಕೆ 750 ಎಂ.ಎಲ್‌.ಡಿಯಷ್ಟು ಹೆಚ್ಚು ನೀರು ಲಭ್ಯವಾಗಲಿದೆ. ಇದನ್ನು ಸಮರ್ಪಕವಾಗಿ ಬಳಕೆ ಮಾಡುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು 110 ಗ್ರಾಮಗಳಲ್ಲಿ ಎಲ್ಲರೂ ಕಾವೇರಿ ನೀರಿನ ಸಂಪರ್ಕ ಪಡೆಯಲು ಪ್ರೋತ್ಸಾಹಿಸಬೇಕು" ಎಂದರು.

ಕಾವೇರಿ 5ನೇ ಹಂತದ ಕಾಮಗಾರಿ ಪರಿಶೀಲನೆ
ಕಾವೇರಿ 5ನೇ ಹಂತದ ಕಾಮಗಾರಿ ಪರಿಶೀಲನೆ (ETV Bharat)

"110 ಗ್ರಾಮಗಳಲ್ಲಿ ಕೆಲವೆಡೆ ಅನಧಿಕೃತವಾಗಿ ಸಂಪರ್ಕಗಳನ್ನು ನೀಡಿರುವ ಬಗ್ಗೆ ದೂರುಗಳು ಬಂದಿವೆ. ಇವುಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಇವುಗಳನ್ನು ಸಕ್ರಮಗೊಳಿಸಿ ಜಲಮಂಡಳಿಗೆ ಆದಾಯ ಬರುವಂತೆ ಕ್ರಮವಹಿಸಬೇಕು" ಎಂದು ಇದೇ ವೇಳೆ ಸೂಚಿಸಿದರು.

"ಸಮರ್ಪಕವಾಗಿ ಹೊಸ ಸಂಪರ್ಕಗಳನ್ನು ನೋಂದಾಯಿಸುವ ಮೂಲಕ ನೀರಿನ ಸದ್ಬಳಕೆ ಆಗುತ್ತದೆ. ಹಾಗೆಯೇ, ಜಲಮಂಡಳಿಗೆ ಅಗತ್ಯವಾದ ಆದಾಯ ದೊರೆಯಲಿದ್ದು ಸಾಲದ ಮರುಪಾವತಿಗೆ ಸಹಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಜನರ ಮನೆಬಾಗಿಲಿಗೆ ತೆರಳಿ ನೀರಿನ ಸಂಪರ್ಕ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರೋತ್ಸಾಹಿಸಬೇಕು. ಹೆಚ್ಚಿನ ಜನರು ಕಾವೇರಿ ನೀರಿನ ಸಂಪರ್ಕ ಪಡೆದುಕೊಳ್ಳುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದು ಹೇಳಿದರು.

ಇದನ್ನೂ ಓದಿ: ರಾಜಕಾಲುವೆ, ಪಾದಚಾರಿ ಮಾರ್ಗದಲ್ಲಿ ಬಡಾವಣೆ ನಿರ್ಮಾಣ: ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.