ಮೈಸೂರು: ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ತಾಯಿ ನದಿಗೆ ಬಿದ್ದಿರುವ ಘಟನೆ ತಿ.ನರಸೀಪುರ ತಾಲೂಕಿನ ಬನ್ನೂರು ಸೇತುವೆ ಮೇಲೆ ಸೋಮವಾರ ಮಧ್ಯಾಹ್ನ ನಡೆಯಿತು.
ಮೈಸೂರಿನ ಮೇಟಗಳ್ಳಿ ನಿವಾಸಿ ಶಂಕರ್(22) ಮೃತಪಟ್ಟರೆ, ಎಂ.ಪಾರ್ವತಿ(50) ನದಿಯಲ್ಲಿ ನಾಪತ್ತೆಯಾಗಿದ್ದಾರೆ.
ಇಬ್ಬರೂ ಬನ್ನೂರು ಹೋಬಳಿಯ ಮಲಿಯೂರು ಗ್ರಾಮದ ಬೀರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ಸ್ಕೂಟರ್‌ನಲ್ಲಿ ವಾಪಸಾಗುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಂಕರ್ ಅವರ ಮೃತದೇಹವನ್ನು ಬನ್ನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಪಾರ್ವತಿ ಅವರ ಮೃತದೇಹ ಮಂಗಳವಾರ ನದಿಯಲ್ಲಿ ಪತ್ತೆಯಾಗಿದೆ. ಬನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣ(ನೆಲಮಂಗಲ): ಬೆಂಗಳೂರು ಮತ್ತು ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ಏ.10ರಂದು ನಡೆದಿತ್ತು. ಕಾರು ಚಾಲಕ ಗೋಪಾಲ್ (45) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದರು.
ಬೆಂಗಳೂರು ಮಾರ್ಗವಾಗಿ ತುಮಕೂರು ಕಡೆಗೆ ಚಲಿಸುತ್ತಿದ್ದ ಕಾರು ಡಿವೈಡರ್ಗೆ ರಭಸವಾಗಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿತ್ತು. ಕಾರಿನಲ್ಲಿದ್ದವರು ತುಮಕೂರಿನ ಸಂಬಂಧಿಗಳ ಮನೆಯಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ತೆರಳುತಿದ್ದರು.
ಇದನ್ನೂ ಓದಿ: ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಭೀಕರ ಅಪಘಾತ: ಇಬ್ಬರು ಪಾದಚಾರಿಗಳಿಗೆ ಗಂಭೀರ ಗಾಯ
ಇದನ್ನೂ ಓದಿ: ನಿಡಗುಂದಿಯಲ್ಲಿ ಭೀಕರ ರಸ್ತೆ ಅಪಘಾತ: ಬಿಎಸ್ಎಫ್ ಯೋಧ, ಆಂಬ್ಯುಲೆನ್ಸ್ ಚಾಲಕ ಸಾವು