ETV Bharat / state

ಹೈಕೋರ್ಟ್​ ಜಡ್ಜ್​ ಮುಂದೆ ಕತ್ತಿಗೆ ಗಾಯ ಮಾಡಿಕೊಂಡ ವ್ಯಕ್ತಿಯ ವಿರುದ್ಧ ಕೇಸ್​ ದಾಖಲು - KARNATAKA HIGH COURT

author img

By ETV Bharat Karnataka Team

Published : Apr 4, 2024, 10:31 AM IST

ಪ್ರಕರಣ ವಿಚಾರಣೆಯ ವೇಳೆ ಹೈಕೋರ್ಟ್​ ಜಡ್ಜ್​ ಮುಂದೆಯೇ ಕತ್ತಿಗೆ ಗಾಯ ಮಾಡಿಕೊಂಡ ವ್ಯಕ್ತಿಯ ವಿರುದ್ಧ ಕೇಸ್​ ದಾಖಲಿಸಲಾಗಿದೆ.

ಕತ್ತಿಗೆ ಗಾಯ ಮಾಡಿಕೊಂಡ ವ್ಯಕ್ತಿಯ ವಿರುದ್ಧ ಕೇಸ್​ ದಾಖಲು
ಕತ್ತಿಗೆ ಗಾಯ ಮಾಡಿಕೊಂಡ ವ್ಯಕ್ತಿಯ ವಿರುದ್ಧ ಕೇಸ್​ ದಾಖಲು

ಬೆಂಗಳೂರು: ಪ್ರಕರಣದ ವಿಚಾರಣೆಯ ವೇಳೆ ಹೈಕೋರ್ಟ್ ಪೀಠದ ಮುಂದೆಯೇ ಹರಿತವಾದ ವಸ್ತುವಿನಿಂದ ಕುತ್ತಿಗೆಗೆ ಗಾಯ ಮಾಡಿಕೊಂಡ ವ್ಯಕ್ತಿಯ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೈಸೂರಿನ ಶ್ರೀನಿವಾಸ್ ಚಿನ್ನಂ ಎಂಬುವರು ನಿನ್ನೆ (ಬುಧವಾರ) ಹೈಕೋರ್ಟ್​ನಲ್ಲಿ ವಿಚಾರಣೆಯ ವೇಳೆ ಕತ್ತಿಗೆ ಗಾಯ ಮಾಡಿಕೊಂಡಿದ್ದರು.

ಹೈಕೋರ್ಟ್ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್​ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಶ್ರೀನಿವಾಸ್​ ವಿರುದ್ಧ ಭದ್ರತಾ ಲೋಪದ ಆರೋಪದ ಮೇಲೆ ಐಪಿಸಿ ಸೆಕ್ಷನ್​ 309 ಅಡಿ ಎಫ್ಐಆರ್ ದಾಖಲಾಗಿದೆ. ಸದ್ಯ ಗಾಯಾಳು ಶ್ರೀನಿವಾಸ್ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಬಳಿಕ ಹೇಳಿಕೆ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆ: ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾ.ಎಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಶ್ರೀನಿವಾಸ್ ಅವರ ವ್ಯಾಜ್ಯದ ಕುರಿತು ವಿಚಾರಣೆ ನಡೆಯುತ್ತಿದ್ದಾಗ, ಏಕಾಏಕಿ ಅವರು 'ನನಗೆ ನ್ಯಾಯ ಕೊಡಿಸಿ' ಎಂದು ಹೇಳುತ್ತ ಕುತ್ತಿಗೆಗೆ ಗಾಯ ಮಾಡಿಕೊಂಡಿದ್ದರು.

ಅನಿರೀಕ್ಷಿತ ಘಟನೆಯಿಂದ ಹೈಕೋರ್ಟ್​ನ ಹಾಲ್​-1ರಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಶ್ರೀನಿವಾಸ್​ ಅವರ ನಡೆಯಿಂದಾಗಿ ಅಲ್ಲಿದ್ದ ವಕೀಲರು ದಿಗ್ಭ್ರಮೆಗೊಂಡು, ತಕ್ಷಣವೇ ಅವರನ್ನು ತಡೆದಿದ್ದರು. ಆದರೆ, ಕುತ್ತಿಗೆಗೆ ತೀವ್ರ ಗಾಯವಾಗಿತ್ತು. ಬಳಿಕ ಶ್ರೀನಿವಾಸ್​ರನ್ನು ನ್ಯಾಯಮೂರ್ತಿಗಳ ಸೂಚನೆ ಮೇರೆಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಸಿವಿಲ್​ ವ್ಯಾಜ್ಯದ ಪ್ರಕರಣ ಇದಾಗಿದ್ದು, ಶ್ರೀನಿವಾಸ್​ ಅವರಿಗೆ ಬೇರೊಬ್ಬ ವ್ಯಕ್ತಿಗಳು ವಂಚನೆ ಮಾಡಿದ ಆರೋಪ ಇದಾಗಿದೆ. ಈ ಹಿಂದೆಯೂ ಅವರು ವಿಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ವಿಚಾರಣೆ ನಿನ್ನೆ ನಡೆಯುತ್ತಿದ್ದಾಗ ಅವರು ಜಡ್ಜ್​ ಮುಂದೆಯೇ ಕುತ್ತಿಗೆಗೆ ಗಾಯ ಮಾಡಿಕೊಂಡು ಆಸ್ಪತ್ರೆ ಪಾಲಾಗಿದ್ದಾರೆ. ಚೇತರಿಸಿಕೊಂಡ ಬಳಿಕ ಅವರ ಹೇಳಿಕೆ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹೈಕೋರ್ಟ್‌ ಪೀಠದ ಮುಂದೆ ಗಾಯ ಮಾಡಿಕೊಂಡ ವ್ಯಕ್ತಿ, ಆಸ್ಪತ್ರೆಗೆ ದಾಖಲು - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.