ETV Bharat / state

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ: ಸಿದ್ದರಾಮಯ್ಯ - CM SIDDARAMAIAH

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಅನುದಾನ ತರಲು ಪ್ರಯತ್ನಿಸಲಿ ಎಂದು ಒತ್ತಾಯಿಸಿದರು.

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆ ನಡೆಯಿತು.
ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆ ನಡೆಯಿತು. (ETV Bharat)
author img

By ETV Bharat Karnataka Team

Published : May 14, 2025 at 5:16 PM IST

2 Min Read

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಸುಮಾರು 4,195 ಕೋಟಿ ರೂ.ಗಳ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನ ತರಲು ಪ್ರಯತ್ನಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಇಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆ ನಂತರ ಅವರು ಮಾತನಾಡಿದರು.

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಅನುದಾನವನ್ನು ಒದಗಿಸುವಂತೆ ಪ್ರಧಾನಮಂತ್ರಿಯವರನ್ನು, ಕೇಂದ್ರ ವಿತ್ತಸಚಿವರನ್ನೂ ಈಗಾಗಲೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದರ ಬಗ್ಗೆ ಮುಖ್ಯಮಂತ್ರಿಗಳು ವಿವರಿಸಿದರು.

ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಲು ರಚಿಸಲಾದ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯನ್ನು ಇಂದು ನಡೆಸಲಾಗಿದೆ. ಸುಮಾರು 67 ಕೇಂದ್ರ ಪುರಸ್ಕೃತ ಯೋಜನೆಗಳಿದ್ದು, ಅವುಗಳ ಪ್ರಗತಿಪರಿಶೀಲನೆ ನಡೆಸಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಕೇಂದ್ರ ಹಾಗೂ ರಾಜ್ಯದ ಪಾಲು 50:50, 60:40, 70:30 ರಷ್ಟಿರುತ್ತದೆ. ಕರ್ನಾಟಕದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ 46859 ಕೋಟಿ ಖರ್ಚು ಮಾಡಲಾಗುತ್ತಿದೆ. 2024-25ರ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ರಾಜ್ಯದ ಅನುದಾನ 24,960 ಕೋಟಿ ರೂಪಾಯಿಗಳು, ಕೇಂದ್ರದ ಅನುದಾನ 22,758 ಕೋಟಿ ರೂಪಾಯಿಗಳಿದ್ದು ಕೇಂದ್ರದಿಂದ 18,561 ಕೋಟಿ ಮಾತ್ರ ಬಿಡುಗಡೆ ಆಗಿದೆ. 4,195 ಕೋಟಿ ರೂಪಾಯಿಗಳು ಬಿಡುಗಡೆ ಆಗಿಲ್ಲ ಎಂದರು.

ಶೇ.100ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ: ರಾಜ್ಯದ ಪಾಲು ಹೆಚ್ಚಿರುವ ಕೇಂದ್ರ ಪುರಸ್ಕೃತ ಯೋಜನೆಗಳಡಿ ಶೇ.83ರಷ್ಟು ಅನುದಾನ ಖರ್ಚಾಗಿದ್ದು, ಕೇಂದ್ರದಿಂದ ತಡವಾಗಿ ಅನುದಾನ ಬಿಡುಗಡೆಯೂ ಸೇರಿದಂತೆ ಹಲವು ಸಮಸ್ಯೆಗಳನ್ನು ವಿಷಯಗಳನ್ನು ಅಧಿಕಾರಿಗಳು ವಿವರಿಸಿದ್ದಾರೆ. ಆದ್ದರಿಂದ 2025-26ರ ಸಾಲಿನಿಂದ ಶೇ.100ರಷ್ಟು ಅನುದಾನವನ್ನು ಖರ್ಚು ಮಾಡಬೇಕಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಅನುದಾನ ಬಿಡುಗಡೆ ಮಾಡಲು ಕೇಂದ್ರವನ್ನು ಕೋರುವಂತೆ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರಿಗೂ ಸೂಚಿಸಲಾಗಿದೆ ಎಂದು ವಿವರ ನೀಡಿದರು.

ಬಾಕಿ ಅನುದಾನ ಬಿಡುಗಡೆಗಾಗಿ ಕೇಂದ್ರಕ್ಕೆ ಪತ್ರ: ಅಭಿವೃದ್ಧಿ ಯೋಜನೆಗಳಿಗೆ ಸೂಕ್ತ ಅನುದಾನ ನೀಡದೇ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ತನ್ನ ಪಾಲನ್ನು ನೀಡಲೇಬೇಕು. ಕೇಂದ್ರದ ಪಾಲು ನೀಡಲು ರಾಜ್ಯ ಸರ್ಕಾರ ಪತ್ರ ಬರೆದಿದೆ ಎಂದು ತಿಳಿಸಿದರು.

ಇದನ್ನೂ ಓದಿ: ದೇಶದಲ್ಲೇ ಅತ್ಯಂತ ಸುರಕ್ಷಿತ ನಗರ ಬೆಂಗಳೂರು: ಯೂನಿವರ್ಸಿಟಿ ಆಫ್ ಹೈದರಾಬಾದ್ ಸಮೀಕ್ಷೆಯಲ್ಲಿ ಬಹಿರಂಗ - BANGALURU SAFEST CITY IN COUNTRY

ಇದನ್ನೂ ಓದಿ: ವಿಶೇಷಚೇತನರ ಆರೈಕೆಗೆ ರಾಜ್ಯ ಸರ್ಕಾರದಿಂದ ಮಾಸಿಕ ಭತ್ಯೆ: ಇದು ದೇಶದಲ್ಲೇ ಮೊದಲು - ALLOWANCE FOR SPECIALLY ABLED KIDS

ETV Bharat Logo

Copyright © 2025 Ushodaya Enterprises Pvt. Ltd., All Rights Reserved.