ಬೆಂಗಳೂರು: ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬುಧವಾರ ಮತ್ತು ಗುರುವಾರ ನಡೆಸಿದ ಸಿಇಟಿ ಪರೀಕ್ಷೆಯ ನಾಲ್ಕೂ ಪ್ರಶ್ನೆಪತ್ರಿಕೆಗಳ ''ಕೀ ಉತ್ತರ'' ಗಳನ್ನು ಇಂದು ಪ್ರಕಟಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಇದೇ ತಿಂಗಳ 16 ಮತ್ತು 17 ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳ ಯುಜಿಸಿಇಟಿ - 2025 ರ ಪರೀಕ್ಷೆ ನಡೆಸಲಾಗಿತ್ತು. ಈ ಎಲ್ಲಾ ನಾಲ್ಕೂ ಪ್ರಶ್ನೆ ಪತ್ರಿಕೆಗಳ ''ಕೀ ಉತ್ತರಗಳನ್ನು'' ಕೆಇಎ ತನ್ನ ವೆಬ್ ಸೈಟ್ನಲ್ಲಿ ಪ್ರಕಟಿಸಿದೆ.
ಸಿಇಟಿ ಪರೀಕ್ಷೆಯ ಕೀ ಉತ್ತರಗಳನ್ನು 16 ವರ್ಷನ್ಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ನಲ್ಲಿ ಸಿಇಟಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಮಾದ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಕ್ಷೇಪಣೆ ಸಲ್ಲಿಸಲು ಅವಕಾಶ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿರುವ ಕೀ ಉತ್ತರಗಳಿಗೆ ಸಿಇಟಿ ವಿದ್ಯಾರ್ಥಿಗಳು ಆಕ್ಷೇಪಣೆ ಸಲ್ಲಿಸಲು ಸಹ ಅವಕಾಶ ಮಾಡಿಕೊಡಲಾಗಿದೆ. ಕೆಇಎ ಪ್ರಾಧಿಕಾರದ ವೆಬ್ ಸೈಟ್ನಲ್ಲಿ ಒದಗಿಸಲಾಗಿರುವ ಆನ್ಲೈನ್ ಪೋರ್ಟಲ್ (https://cetonline.karnataka.gov.in/keaobjections/forms/login.aspf) ಈ ಲಿಂಕ್ ಮೂಲಕವೇ ಈ ತಿಂಗಳ 22 ರೊಳಗೆ ಸಲ್ಲಿಸಬಹುದಾಗಿರುತ್ತದೆ.
ಸಿಇಟಿ ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸುವಾಗ ಅಭ್ಯರ್ಥಿಗಳು ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಮತ್ತು ಪೂರಕ ದಾಖಲೆಗಳನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ ಅಥವಾ ಆಧಾರ ರಹಿತವಾಗಿರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆಗಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವ ಎಂ.ಸಿ.ಸುಧಾಕರ್
ಇದನ್ನೂ ಓದಿ: ಏನಿವು IIT - NIT - IIIT: ಇವುಗಳ ನಡುವಿನ ವ್ಯತ್ಯಾಸಗಳೇನು?; ಪ್ರವೇಶ ಪಡೆಯುವುದು ಹೇಗೆ? , ಎಷ್ಟಿರುತ್ತೆ ಶುಲ್ಕ?
ಇದನ್ನೂ ಓದಿ: ಪದವಿ ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಪರೀಕ್ಷೆ ಬರೆದು ಕನಸು ನನಸು ಮಾಡಿಕೊಳ್ಳಿ