ಬೆಂಗಳೂರು: ಐಪಿಎಲ್ 18ನೇ ಆವೃತ್ತಿಯನ್ನು ಗೆದ್ದಿರುವ ಆರ್ಸಿಬಿ ತಂಡವನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಇಂದು ಸಂಜೆ ಅಭಿನಂದಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂಡದ ಆಟಗಾರರಾದ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಕುನಾಲ್ ಪಾಂಡೆ, ಮಾಯಾಂಕ್ ಅಗರ್ವಾಲ್ ಸೇರಿದಂತೆ ಎಲ್ಲ ಆಟಗಾರರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು. ಅಷ್ಟರಲ್ಲೇ ಮಳೆ ಬಂದ ಕಾರಣ ತರಾತುರಿಯಲ್ಲಿ ಕಾರ್ಯಕ್ರಮ ಮುಗಿಸಿ ಆಟಗಾರರನ್ನು ಬಸ್ನಲ್ಲಿ ಕಳುಹಿಸಲಾಯಿತು.
ಖಾಸಗಿ ಹೋಟೆಲ್ನಿಂದ ಬಸ್ಗಳಲ್ಲಿ ಆರ್ಸಿಬಿ ತಂಡ ಗೆದ್ದ ಟ್ರೋಫಿ ಸಮೇತ ವಿಧಾನಸೌಧಕ್ಕೆ ಆಗಮಿಸಿತು. ರಾಷ್ಟ್ರಗೀತೆ ಹಾಗೂ ನಾಡಗೀತೆ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು.
ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.
ಇದನ್ನೂ ಓದಿ: ವಿಧಾನಸೌಧದಲ್ಲಿ ಆರ್ಸಿಬಿ ಟೀಂಗೆ ಸನ್ಮಾನ: ತಂಡವನ್ನು ಖುದ್ದು ಸ್ವಾಗತಿಸಿದ ಡಿಸಿಎಂ