ETV Bharat / state

'ಬಿಹಾರದ ದೇವರಾಜ ಅರಸು': ಕರ್ಪೂರಿ ಠಾಕೂರ್​ಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಸ

author img

By ETV Bharat Karnataka Team

Published : Jan 24, 2024, 8:32 PM IST

ಭಾರತ ರತ್ನ ಪ್ರಶಸ್ತಿಗೆ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರು ಅತ್ಯಂತ ಅರ್ಹರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

cm-siddaramaiah-expressed-happiness-over-awarding-bharat-ratna-to-karpuri-thakur
ಕರ್ಪೂರಿ ಠಾಕೂರ್​ಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಸ

ಬೆಂಗಳೂರು: ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಭಾರತ ರತ್ನ ಪ್ರಶಸ್ತಿಗೆ ಅವರು ಅತ್ಯಂತ ಅರ್ಹರು ಎಂದು ತಿಳಿಸಿದ್ದಾರೆ.

  • ಸಾಮಾಜಿಕ ನ್ಯಾಯದ ಪ್ರಬಲ ಪ್ರತಿಪಾದಕರಾಗಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿರುವುದು ನನಗೆ ಅತೀವ ಸಂತಸ ಉಂಟುಮಾಡಿದೆ. ಎಪ್ಪತ್ತರ ದಶಕದಲ್ಲಿಯೇ ಕರ್ನಾಟಕದ ಮಾದರಿಯಲ್ಲಿ ಬಿಹಾರದಲ್ಲಿ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ಕಲ್ಪಿಸಿದ್ದ ಕರ್ಪೂರಿ ಠಾಕೂರ್ ಅವರನ್ನು ‘’ಬಿಹಾರದ… pic.twitter.com/vJhhEhI9ap

    — Siddaramaiah (@siddaramaiah) January 24, 2024 " class="align-text-top noRightClick twitterSection" data=" ">

ಇಂದು ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ನಾಯಕರಾದ ಕರ್ಪೂರಿ ಠಾಕೂರ್ ಅವರ ಜನ್ಮ ಶತಮಾನೋತ್ಸವ ಆಚರಿಸಲಾಗುತ್ತಿದೆ. ಇದಕ್ಕೂ ಮುನ್ನ ದಿನವಾದ ಮಂಗಳವಾರ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಪ್ರಕಟಿಸಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್​'ನಲ್ಲಿ ಸಿಎಂ ಸಿದ್ದರಾಮಯ್ಯ ಪೋಸ್ಟ್​ ಮಾಡಿದ್ದು, ಸಾಮಾಜಿಕ ನ್ಯಾಯದ ಪ್ರಬಲ ಪ್ರತಿಪಾದಕರಾಗಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿರುವುದು ನನಗೆ ಅತೀವ ಸಂತಸ ಉಂಟುಮಾಡಿದೆ ಎಂದು ಹೇಳಿದ್ದಾರೆ.

ಎಪ್ಪತ್ತರ ದಶಕದಲ್ಲಿಯೇ ಕರ್ನಾಟಕದ ಮಾದರಿಯಲ್ಲಿ ಬಿಹಾರದಲ್ಲಿ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ಕಲ್ಪಿಸಿದ್ದ ಕರ್ಪೂರಿ ಠಾಕೂರ್ ಅವರನ್ನು 'ಬಿಹಾರದ ದೇವರಾಜ ಅರಸು' ಎಂದು ಬಣ್ಣಿಸಲಾಗುತ್ತದೆ. ಹಿಂದುಳಿದ ಸವಿತಾ ಸಮಾಜಕ್ಕೆ ಸೇರಿರುವ ಕರ್ಪೂರಿ ಠಾಕೂರ್ ಅವರು ಜಾತಿಗ್ರಸ್ತ ಬಿಹಾರ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇ ಅವರ ಜನಪ್ರಿಯತೆಗೆ ಸಾಕ್ಷಿ. ಭಾರತ ರತ್ನ ಪ್ರಶಸ್ತಿಗೆ ಅವರು ಅತ್ಯಂತ ಅರ್ಹರು. ಅವರಿಗೆ ನನ್ನ ಗೌರವಪೂರ್ವಕ ನಮನಗಳು ಎಂದು ಸಿಎಂ ಬರೆದುಕೊಂಡಿದ್ದಾರೆ.

ಮತ್ತೊಂದೆಡೆ, ಮಹಾನ್ ಜನನಾಯಕ ಕರ್ಪೂರಿ ಠಾಕೂರ್ ಅವರ ಜನ್ಮ ಶತಮಾನೋತ್ಸವ ಆಚರಿಸುತ್ತಿರುವ ಈ ಸಮಯದಲ್ಲಿ 'ಭಾರತ ರತ್ನ' ಪ್ರಶಸ್ತಿ ನೀಡಲು ಭಾರತ ಸರ್ಕಾರ ನಿರ್ಧರಿಸಿರುವುದು ನನಗೆ ಸಂತೋಷ ತಂದಿದೆ ಎಂದು ಪ್ರಧಾನಿ ಮೋದಿ ಮಂಗಳವಾರ ಹೇಳಿದ್ದರು. ಸಾಮಾಜಿಕ ನ್ಯಾಯದ ದಾರಿದೀಪ ಎಂದೂ ಬಣ್ಣಿಸಿದ್ದ ಮೋದಿ, ಈ ಪ್ರಶಸ್ತಿ ಅವರ ಗಮನಾರ್ಹ ಕೊಡುಗೆಗಳನ್ನು ಗೌರವಿಸುವುದು ಮಾತ್ರವಲ್ಲದೇ ನ್ಯಾಯಯುತ ಮತ್ತು ಸಮಾನ ಸಮಾಜವನ್ನು ನಿರ್ಮಿಸುವ ಅವರ ಧ್ಯೇಯವನ್ನು ಮುಂದುವರಿಸಲು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದ್ದರು.

ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಕರ್ಪೂರಿ ಠಾಕೂರ್ ಜೈಲಿನಲ್ಲಿ ತಿಂಗಳುಗಳ ಕಾಲ ಕಳೆದಿದ್ದರು. ದೇಶದ ಸ್ವಾತಂತ್ರ್ಯ ನಂತರ 1952ರಲ್ಲಿ ಬಿಹಾರದ ತಾಜ್‌ಪುರ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಶಿಕ್ಷಣ ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದ ಅವರು ಬಿಹಾರದ ಮೊದಲ ಕಾಂಗ್ರೆಸ್ಸೇತರ ಸಮಾಜವಾದಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದರು.

ಇದನ್ನೂ ಓದಿ: ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್​ಗೆ ಭಾರತ ರತ್ನ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.