ಬೆಂಗಳೂರು: ರೋಹಿತ್ ವೆಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದು ತಿಳಿಸಿದ್ದಾರೆ.
ದಲಿತರು, ಆದಿವಾಸಿಗಳು ಹಾಗೂ ಹಿಂದುಳಿದ ವರ್ಗದವರನ್ನು ಮುಖ್ಯವಾಹಿನಿ ತರಲು ನಾವೆಲ್ಲ ಕೈಜೋಡಿಸಬೇಕು ಎಂಬ ತಮ್ಮ ನಿಲುವಿಗೆ ನನ್ನ ಸಂಪೂರ್ಣ ಸಹಮತವಿದೆ. ಶಿಕ್ಷಣ ಸಂಸ್ಥೆಗಳಲ್ಲಿ ದಮನಿತ ವರ್ಗದವರು ಯಾವುದೇ ರೀತಿಯ ತಾರತಮ್ಯ ಎದುರಿಸಬಾರದು. ನಮ್ಮ ಸರ್ಕಾರ ಸಮ ಸಮಾಜ ಸೃಷ್ಟಿಸಲು ಬದ್ಧವಾಗಿದೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
ರೋಹಿತ್ ವೆಮುಲಾ ಕಾಯ್ದೆ ಶಿಕ್ಷಣ ಸಂಸ್ಥೆಗಳಲ್ಲಿ ತಾರತಮ್ಯವನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ. ಕಾಯ್ದೆಯ ಕರಡು ರೂಪಿಸಲು ನನ್ನ ಕಾನೂನು ಸಲಹೆಗಾರರು ಹಾಗೂ ತಂಡಕ್ಕೆ ನಿರ್ದೇಶನ ನೀಡಿದ್ದೇನೆ ಎಂದು ಸಿಎಂ ವಿವರಿಸಿದ್ದಾರೆ.
ಏ.16, 2025ರಂದು ತಾವು ಬರೆದ ಪತ್ರದಲ್ಲಿ ಉಲ್ಲೇಖಿಸಿದಂತೆ ಡಾ.ಬಿ.ಆರ್.ಅಂಬೇಡ್ಕರ್ ಎದುರಿಸಿದ ಘಟನೆ ಇಂದಿಗೂ ಕಹಿ ವಾಸ್ತವವಾಗಿದೆ. ಯಾವುದೇ ಮಗು, ವಯಸ್ಕರು ಬಾಬಾ ಸಾಹೇಬ್ ಅಂಬೇಡ್ಕರ್ ಎದುರಿಸಿದ ಸಂಕಷ್ಟ, ಅವಮಾನ ಅನುಭವಿಸಬಾರದು ಎಂದು ಸಿಎಂ ಪತ್ರದಲ್ಲಿ ಬರೆದಿದ್ದಾರೆ.
ಇದನ್ನೂ ಓದಿ: ಶಿಕ್ಷಣದಿಂದ ಜಾತ್ಯತೀತ ಸಮಾಜ ನಿರ್ಮಾಣವಾಗಲು ಸಾಧ್ಯ: ಸಿಎಂ ಸಿದ್ದರಾಮಯ್ಯ
ಇದನ್ನೂ ಓದಿ: ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿಯನ್ನು ಯಾರೂ ವಿರೋಧಿಸಿಲ್ಲ: ಸಿಎಂ ಸಿದ್ದರಾಮಯ್ಯ