ಬೆಂಗಳೂರು: ರೋಹಿತ್ ವೆಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಶಿಕ್ಷಣ ಸಂಸ್ಥೆಗಳಲ್ಲಿ ತಾರತಮ್ಯ ನಿಯಂತ್ರಿಸಲು ಸಹಕಾರಿಯಾಗಲಿರುವ ರೋಹಿತ್ ವೆಮುಲಾ ಕಾಯ್ದೆ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿರುವ ಮುಖ್ಯಮಂತ್ರಿ, ಸಿದ್ದರಾಮಯ್ಯ, ರೋಹಿತ್ ವೆಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ. ಅಲ್ಲದೇ, ಈ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಪತ್ರ ಕೂಡ ಬರೆದಿದ್ದೇನೆ. ಸಾಧ್ಯತೆಗಳನ್ನು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ.
ರೋಹಿತ್ ವೆಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ, ಈ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಪತ್ರ ಕೂಡ ಬರೆದಿದ್ದೇನೆ. ಸಾಧ್ಯತೆಗಳನ್ನು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ.
— Siddaramaiah (@siddaramaiah) April 21, 2025
ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ… pic.twitter.com/6Bz2LnhCWd
ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರವಾದದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನಾವಶ್ಯಕವಾಗಿ ಇತರರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದ ನಿಯಮ ಹೇರಿಕೆ ಮಾಡಬಾರದು. ಇಂಥದ್ದನ್ನು ನಾವು ಸಹಿಸುವುದಿಲ್ಲ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.