ಬೆಂಗಳೂರು: ರಾಜಕೀಯ ಒತ್ತಡದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಐಪಿಎಲ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಿ ಸಂಭ್ರಮಿಸಿದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಅವರು ವೀಕ್ಷಿಸಿದರು.
ಸಿಎಂ ಜೊತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಮತ್ತಿತರರು ಇದ್ದರು.

ಬೆಲೆ ಏರಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರತಿಪಕ್ಷಗಳು ಮಾಡುತ್ತಿರುವ ಆರೋಪಗಳಿಗೆ ತಲೆಕೆಡಿಸಿಕೊಳ್ಳದ ಸಿಎಂ, ಕ್ರಿಕೆಟ್ ವೀಕ್ಷಿಸಿದ್ದು ವಿಶೇಷವಾಗಿತ್ತು.