ETV Bharat / state

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರ್ಣ; ಸಚಿವರಿಗೆ ಔತಣಕೂಟ ಏರ್ಪಡಿಸಿದ ಡಿಸಿಎಂ ಡಿಕೆಶಿ - D K Shivakumar Dinner Party

author img

By ETV Bharat Karnataka Team

Published : May 22, 2024, 1:22 PM IST

ರಾಜ್ಯ ಕಾಂಗ್ರೆಸ್​ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಸಂತಸದಲ್ಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್​ ಸಂಪುಟದ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಸಚಿವರಿಗೆ ಔತಣಕೂಟ ಆಯೋಜಿಸಿದ್ದಾರೆ. ಸದಾಶಿವನಗರದಲ್ಲಿರುವ ಸಂಸದ ಡಿ.ಕೆ.ಸುರೇಶ್ ನಿವಾಸದಲ್ಲಿ ಸಂಜೆ 7 ಗಂಟೆಗೆ ಡಿನ್ನರ್ ಪಾರ್ಟಿ ಆಯೋಜಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಸಚಿವರಿಗೂ ಆಹ್ವಾನ ನೀಡಲಾಗಿದೆ.

ಸರ್ಕಾರ ವರ್ಷ ಪೂರೈಸಿರುವ ಜೊತೆಗೆ ಸಂಪುಟ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಡೆ ಇದು. ಶಿಕ್ಷಕರು, ಪದವೀಧರ ಕ್ಷೇತ್ರ ಚುನಾವಣೆ ಗೆಲುವಿಗಾಗಿ ತಂತ್ರಗಾರಿಕೆ ನಡೆಸುವ ಜೊತೆಗೆ ಬಿಬಿಎಂಪಿ ಸೇರಿದಂತೆ ಸ್ಥಳೀಯ ಚುನಾವಣೆ ತಯಾರಿ ಕುರಿತು ಚರ್ಚಿಸಲಿದ್ದಾರೆ. ಮುಖ್ಯವಾಗಿ ಲೋಕಸಭೆ ಚುನಾವಣೆಯ ಅವಲೋಕನವೂ ನಡೆಯಲಿದೆ.

ಈಗಾಗಲೇ ಡಿಕೆಶಿ ಕೆಪಿಸಿಸಿ ಅಧ್ಯಕ್ಷದ ಬದಲಾವಣೆ ಕುರಿತು ಸುಳಿವು ನೀಡಿದ್ದಾರೆ. ಇತ್ತ ಸಿಎಂ ಸ್ಥಾನದತ್ತ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್, ಸಚಿವರನ್ನು ವಿಶ್ವಾಸಕ್ಕೆ ಪಡೆಯುವ ಯತ್ನವನ್ನೂ ಮಾಡಲಿದ್ದಾರೆ.

ಇತ್ತ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ ಸೇರಿ ಸಮಾನಮನಸ್ಕರು ಈಗಾಗಲೇ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಆ ಮೂಲಕ ಪ್ರತ್ಯೇಕ ನಾಯಕತ್ವದ ಮಾತುಗಳು ಕೇಳಿ ಬರುತ್ತಿದೆ. ಹೀಗಾಗಿ ಎಲ್ಲಾ ಸಚಿವರನ್ನು ವಿಶ್ವಾಸಕ್ಕೆ ಪಡೆಯಲು ಡಿಸಿಎಂ ಮುಂದಾಗಿದ್ದಾರೆ ಎಂದು ವ್ಯಾಖ್ಯಾನಿಸಲಾಗಿದೆ. ಇನ್ನು ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತೂ ಒಂದಷ್ಟು ಮಾತುಕತೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಸಂಬಂಧಿ ಸಮಸ್ಯೆಗಳು: ಇಂದು ಸಿಎಂ ಸಿದ್ದರಾಮಯ್ಯ ನಗರ ಪ್ರದಕ್ಷಿಣೆ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.