ETV Bharat / state

ರಾಹುಲ್ ಗಾಂಧಿ ವಿರುದ್ಧ ನಿಂದನಾತ್ಮಕ ಹೇಳಿಕೆ ಆರೋಪ; ಶಾಸಕ ಭರತ್ ಶೆಟ್ಟಿಗೆ ಮಧ್ಯಂತರ ಜಾಮೀನು - Interim Bail to Bharath Shetty

author img

By ETV Bharat Karnataka Team

Published : Jul 11, 2024, 10:59 PM IST

ರಾಹುಲ್ ಗಾಂಧಿ ವಿರುದ್ದ ನಿಂದನಾತ್ಮಕ ಹೇಳಿಕೆ ಆರೋಪ ಸಂಬಂಧ ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಅವರಿಗೆ ಬೆಂಗಳೂರಿನ ವಿಶೇಷ ಸತ್ರ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

court
ನ್ಯಾಯಾಲಯ (ETV Bharat)

ಬೆಂಗಳೂರು : ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ನಿಂದನಾತ್ಮಕ ಭಾಷಣ ಮಾಡಿರುವ ಆರೋಪದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ವೈ. ಭರತ್ ಶೆಟ್ಟಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಶಾಸಕ ಭರತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಯ ಪೊಲೀಸರು ಭರತ್ ಶೆಟ್ಟಿ ಅವರನ್ನು ಬಂಧಿಸಿದರೆ, ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು. ಭರತ್‌ಶೆಟ್ಟಿ ಅವರು ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್, ಒಬ್ಬರ ಭದ್ರತೆ ಒದಗಿಸಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಸಾಕ್ಷಿ ತಿರುಚಬಾರದು, ತನಿಖಾಧಿಕಾರಿ ವಿಚಾರಣೆಗೆ ಸೂಚಿಸಿದಾಗ ಹಾಜರಾಗಬೇಕು ಎಂದು ನ್ಯಾಯಾಲಯವು ಷರತ್ತುಗಳನ್ನು ವಿಧಿಸಿದೆ.

ಪ್ರಧಾನ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಲಯ ಆದೇಶಿಸಿದ್ದು, ವಿಚಾರಣೆಯನ್ನು ಜುಲೈ 16 ಕ್ಕೆ ಮುಂದೂಡಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದರು.

ಪ್ರಕರಣದ ಹಿನ್ನೆಲೆ : ಜುಲೈ 8ರ ಬೆಳಗ್ಗೆ ಕಾವೂರು ಜಂಕ್ಷನ್​ನಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಭರತ್ ಶೆಟ್ಟಿ ಅವರು ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಹೊರಹಾಕಬೇಕು, ಅವನು ಮಾತನಾಡುವ ಶೈಲಿ ನೋಡಿದರೆ ಹಿಂದೂ ಆದ ನಾನು ಲೋಕಸಭೆಗೆ ಹೋಗಿ ಅವರ ಕೆನ್ನೆಗೆ ಎರಡು ಹೊಡೆಯಬೇಕು ಎನಿಸುತ್ತದೆ. ಆಗ ಮಾತ್ರ ಆತನಿಗೆ ಬುದ್ದಿ ಬರುವುದು. ನಾನೊಬ್ಬ ಹಿಂದೂವಾಗಿದ್ದು, ಯಾರಾದರೂ ಹಿಂದೂ ವಿಚಾರದಲ್ಲಿ ಮಾತನಾಡಿದರೆ ಅವರಿಗೆ ತಕ್ಕ ಬುದ್ದಿ ಕಲಿಸಲು ನಾವೆಲ್ಲಾ ಒಂದಾಗಬೇಕು. ಅಗತ್ಯಬಿದ್ದರೆ ಶಸ್ತ್ರಾಸ್ತ್ರ ಹಿಡಿದು ಹೋರಾಟ ಮಾಡಲು ನಾವೆಲ್ಲಾ ಸಿದ್ಧರಾಗಬೇಕು ಎಂದು ಹೇಳಿದ್ದಾರೆ.

ಅಲ್ಲದೇ, ಬಿಜೆಪಿ ಕಾರ್ಯಕರ್ತರು ಮನಸ್ಸು ಮಾಡಿದರೆ ಕಾಂಗ್ರೆಸ್ ಅನ್ನು ನಾಶ ಮಾಡಲು ಸಿದ್ಧರಿದ್ದೇವೆ. ಹಿಂದುತ್ವದ ವಿಚಾರ ಮಾತನಾಡಿದರೆ ಶಸ್ತ್ರಾಸ್ತ್ರ ಉಪಯೋಗಿಸಿ ಯಾವುದೇ ಹೋರಾಟಕ್ಕೂ ಸಿದ್ಧರಿದ್ದೇವೆ. ನಮ್ಮ ಮೇಲೆ ಪ್ರಕರಣದ ದಾಖಲಿಸಿದ ಮಾತ್ರಕ್ಕೆ ಹೆದರಲ್ಲ ಎಂದಿದ್ದರು.

ಈ ಸಂಬಂಧ ಮಂಗಳೂರಿನ ಅನಿಲ್ ಕುಮಾರ್ ಎಂಬುವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದರು. ಇದರ ಸಂಬಂಧ ಭರತ್ ಶೆಟ್ಟಿ ಮತ್ತಿತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನೂ ಓದಿ : ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಬೇಕು ಹೇಳಿಕೆ: ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್‌ - FIR against MLA Bharat Shetty

ETV Bharat Logo

Copyright © 2024 Ushodaya Enterprises Pvt. Ltd., All Rights Reserved.