ತುಮಕೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ತುಮಕೂರು ಎಫ್.ಟಿ.ಎಸ್.ಸಿ-1 ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 3 ಲಕ್ಷ ರೂ.ಗಳ ದಂಡ ವಿಧಿಸಿ ಆದೇಶಿಸಿದೆ.
2023ರ ನವೆಂಬರ್ 11ರಂದು ನೊಂದ ಬಾಲಕಿಯ ತಾಯಿ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ಐಪಿಸಿ ಮತ್ತು ಕಲಂ: 06 ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಮಹಿಳಾ ಪೊಲೀಸ್ ಠಾಣಾಧಿಕಾರಿ ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಇದನ್ನೂ ಓದಿ: 2025ರ ಭಾರತದ ನ್ಯಾಯ ವರದಿ ಬಿಡುಗಡೆ: ಅಗ್ರಸ್ಥಾನದಲ್ಲಿ ಕರ್ನಾಟಕ; ದಕ್ಷಿಣ ಭಾರತದ್ದೇ ಪ್ರಾಬಲ್ಯ, ಸಂಪೂರ್ಣ ವಿವರ ಇಲ್ಲಿದೆ ನೋಡಿ!
ಪ್ರಕರಣದ ವಿಚಾರಣೆ ಕೈಗೊಂಡ ಎಫ್.ಟಿ.ಎಸ್.ಸಿ-1 ನ್ಯಾಯಾಲಯದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು 3 ಲಕ್ಷ ರೂ. ದಂಡ ವಿಧಿಸಿದ್ದಾರೆ.
ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕಿ ಆಶಾ ಕೆ.ಎಸ್. ವಾದ ಮಂಡಿಸಿದ್ದರು.
ಇದನ್ನೂ ಓದಿ: ವ್ಯಕ್ತಿಯೊಬ್ಬರಿಗೆ 'ಹೋಗಿ ಸಾಯಿ' ಎಂದರೆ ಅದು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗಲ್ಲ: ಹೈಕೋರ್ಟ್