ETV Bharat / state

ಕೋವಿಡ್ ಅಕ್ರಮ: ವಿಚಾರಣಾ ಆಯೋಗದ ಅವಧಿ ಒಂದು ತಿಂಗಳು ವಿಸ್ತರಣೆ - COVID SCAM COMMISSION INQUIRY

ಬೆಂಗಳೂರು ಕಾಲ್ತುಳಿತದ ಪ್ರಕರಣಕ್ಕೆ ಆದ್ಯತೆ ನೀಡಿ, ಕೋವಿಡ್​ ಅಕ್ರಮಗಳ ಸಂಬಂಧ ಹೈಕೋರ್ಟ್​​ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ವಿಚಾರಣಾ ಆಯೋಗದ ಅವಧಿಯನ್ನು ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.

covid-inquiry-commission-report-extended-for-one-month
ಜಾನ್ ಮೈಕಲ್ ಕುನ್ಹಾ, ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : June 7, 2025 at 11:59 AM IST

1 Min Read

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಜನರು ಮೃತಪಟ್ಟ ಘಟನೆ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ವಿಚಾರಣಾ ಆಯೋಗದ ವರದಿಯನ್ನು ಆಗಸ್ಟ್ 1ರಿಂದ ಆಗಸ್ಟ್ 31ಕ್ಕೆ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಪ್ರಕರಣಕ್ಕೆ ಆದ್ಯತೆ ನೀಡಿ, ಒಂದು ತಿಂಗಳೊಳಗಾಗಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕಾಗಿರುವ ಕಾರಣ ಸರ್ಕಾರದಿಂದ ಈ ಆದೇಶ ಹೊರಡಿಸಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ-ಆಗಸ್ಟ್​​ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ತನಿಖೆಯನ್ನು ನಡೆಸಲು ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಿ 3 ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ 2023, ಆಗಸ್ಟ್ 25ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

ಈ ಮಧ್ಯೆ, ಜೂನ್ 4ರಂದು ಆರ್​ಸಿಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಂಭವಿಸಿದ ಸಾವು ಹಾಗೂ ಗಾಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ಜೂನ್ 5ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಅಲ್ಲದೆ, ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ನಡೆದ ಪ್ರಕರಣದ ವಿಚಾರಣಾ ಆಯೋಗದ ವರದಿಯನ್ನು ಒಂದು ತಿಂಗಳ ಅವಧಿಗೆ (ಆಗಸ್ಟ್​​ 31ರವರೆಗೆ) ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಸಿಐಡಿ ವಿಶೇಷ ತಂಡದಿಂದ ತನಿಖೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.