ETV Bharat / state

ಎಸ್​ಎಸ್​ಎಲ್​ಸಿ ಟಾಪರ್​ ಅಂಕಿತಾಗೆ ಕರೆ ಮಾಡಿ ಶುಭ ಹಾರೈಸಿದ ಡಿಸಿಎಂ ಡಿ ಕೆ ಶಿವಕುಮಾರ್ - dcm congratulated SSLC topper

author img

By ETV Bharat Karnataka Team

Published : May 11, 2024, 9:12 AM IST

Updated : May 11, 2024, 10:00 AM IST

ಎಸ್​ಎಸ್​ಎಲ್​ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ವಿದ್ಯಾರ್ಥಿನಿ ಅಂಕಿತಾಗೆ ಡಿ.ಕೆ ಶಿವಕುಮಾರ್​ ಕರೆ ಮಾಡಿ ಶುಭಹಾರೈಸಿದ್ದಾರೆ.

ಅಂಕಿತಾಗೆ ಕರೆ ಮಾಡಿ ಶುಭ ಹಾರೈಸಿದ ಡಿಸಿಎಂ ಡಿ ಕೆ ಶಿವಕುಮಾರ್
ಅಂಕಿತಾಗೆ ಕರೆ ಮಾಡಿ ಶುಭ ಹಾರೈಸಿದ ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)

ಎಸ್​ಎಸ್​ಎಲ್​ಸಿ ಟಾಪರ್ ಶುಭ ಹಾರೈಸಿದ ಡಿಸಿಎಂ (ETV Bharat)

ಬೆಂಗಳೂರು: ಸರಕಾರಿ ಶಾಲೆಯಲ್ಲಿ ಓದಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ಮೊದಲ ಸ್ಥಾನ ಗಳಿಸಿದ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊಣ್ಣೂರ ಅವರನ್ನು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಶುಕ್ರವಾರ ಮೊಬೈಲ್ ಮೂಲಕ ಸಂಪರ್ಕಿಸಿ ಶುಭ ಹಾರೈಸಿದರು.

ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದ್ದು, ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬರಬೇಕೆಂದು ಶಿವಕುಮಾರ್ ಅವರು ಅಂಕಿತಾಗೆ ಆಹ್ವಾನ ನೀಡಿದರು. ಅಲ್ಲದೆ ಅಂಕಿತಾ ತಂದೆ ಬಸಪ್ಪ ಅವರ ಜತೆಯೂ ಮಾತನಾಡಿ ಮಗಳ ಸಾಧನೆಗೆ ಶುಭಾಶಯ ತಿಳಿಸಿದರು.

ಮೇ 9ರಂದು 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಿಲಿತಾಂಶ ಪ್ರಕಟವಾಗಿತ್ತು. ಇದರಲ್ಲಿ ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ಆದ ಅಂಕಿತಾ ಬಸಪ್ಪ ಕೊಣ್ಣೂರು 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅಂಕಿತಾ ಹೊರತುಪಡಿಸಿ 7 ವಿದ್ಯಾರ್ಥಿಗಳು 625ಕ್ಕೆ 624ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 625ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿನಿ; ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಫಸ್ಟ್​ - SSLC TOPPER

Last Updated : May 11, 2024, 10:00 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.