ETV Bharat / state

ಜಾತಿ ಗಣತಿ ಬಗ್ಗೆ ಪಕ್ಷದ ಒಕ್ಕಲಿಗ ಶಾಸಕರ ಜೊತೆ ನಾಳೆ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್ - CASTE CENSUS

ಜಾತಿ ಗಣತಿ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಜೊತೆ ಚರ್ಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ಸಭೆ ಕರೆದಿದ್ದಾರೆ.

BENGALURU, DCMDKSHIVAKUMAR,ಜಾತಿ ಗಣತಿ,ಒಕ್ಕಲಿಗ ಶಾಸಕರ ಸಭೆ
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : April 14, 2025 at 8:18 PM IST

2 Min Read

ಬೆಂಗಳೂರು: ಜಾತಿ ಗಣತಿ ವಿಚಾರವಾಗಿ ನಾಳೆ (ಮಂಗಳವಾರ) ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜೊತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಇಂದು ಕೆಪಿಸಿಸಿ ಕಚೇರಿ ಬಳಿ ಜಾತಿ ಗಣತಿ ವರದಿ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, "ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜೊತೆ ಚರ್ಚೆ ಮಾಡಿ, ಯಾರ ಮನಸ್ಸಿಗೂ ನೋಯಿಸದೇ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ" ಎಂದು ತಿಳಿಸಿದರು.

ಎಲ್ಲರಿಗೂ ನ್ಯಾಯ ಒದಗಿಸುವ ಪಕ್ಷ ಕಾಂಗ್ರೆಸ್: ಧರ್ಮದ ಆಧಾರದಲ್ಲಿ ಟೆಂಡರ್ ನೀಡಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹಕ್ಕುಗಳನ್ನು ಕಾಂಗ್ರೆಸ್ ಸರ್ಕಾರ ಕಸಿಯುತ್ತಿದೆ ಎನ್ನುವ ಆರೋಪದ ಬಗ್ಗೆ ಮಾತನಾಡಿದ ಡಿಕೆಶಿ, "ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೂ ಮೀಸಲಾತಿ ನೀಡಲಾಗಿದೆ. ಸಮಾಜದಲ್ಲಿ ಯಾರು ಆರ್ಥಿಕವಾಗಿ ಹಿಂದುಳಿದಿದ್ದಾರೋ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮ ಆದ್ಯತೆ. ಕಾಂಗ್ರೆಸ್ ಪಕ್ಷ ಸಮಾಜದ ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸುವ ಪಕ್ಷ" ಎಂದರು.

ಒಬಿಸಿಗಳ ಮೀಸಲಾತಿಯನ್ನು ಕಾಂಗ್ರೆಸ್ ಕಿತ್ತುಕೊಂಡಿದೆ ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, "ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಬೆಂಗಳೂರಿನ ಸಂಸದರೊಬ್ಬರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಎದೆ ಸೀಳಿದರೆ ಅಕ್ಷರವಿಲ್ಲ, ಪಂಕ್ಚರ್ ಹಾಕಲು ಮಾತ್ರ ಸೀಮಿತ ಎಂದು ದ್ವೇಷ ಕಾರಿದ್ದರು. ಆದರೆ ನಾವು ಆ ಸಮುದಾಯ ಇತರೇ ಕೆಲಸಗಳನ್ನು ಮಾಡಲು ಸಾಮರ್ಥ್ಯ ಹೊಂದಿದೆ ಎಂದು ತೋರಿಸಬೇಕಾಗಿದೆ" ಎಂದು ಹೇಳಿದರು.

ಬೆಂಗಳೂರಿನ ಕುಮಾರ ಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಡಿಸಿಎಂ ಅವರ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಸಂಜೆ 6 ಗಂಟೆಗೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಸಭೆ ಕರೆಯಲಾಗಿದೆ.

ಜಾತಿ ಗಣತಿ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಕುರಿತು ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿವೆ. ಆದರೆ ಸರ್ಕಾರ ಮಾತ್ರ ಜಾತಿ ಗಣತಿಯನ್ನು ಸಮರ್ಥಿಸಿಕೊಳ್ಳುತ್ತಿದೆ. ಜೊತೆಗೆ ಜಾತಿ ಗಣತಿ ಕುರಿತು ಚರ್ಚಿಸಲು ಏ 17 ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ. ಈ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ಕುರಿತು ತೀರ್ಮಾನಿಸಲಿದೆ ಎನ್ನಲಾಗುತ್ತಿದೆ.

ಸಿಎಂ ಈಗಾಗಲೇ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಜಾತಿ ಗಣತಿ ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿ ಬಳಿಕ ಸದನದಲ್ಲಿ ಚರ್ಚೆಗೆ ತರುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಸರ್ಕಾರದ ಮೂಗಿನ ನೇರಕ್ಕೆ ಜಾತಿ ಗಣತಿ ವರದಿ ತಯಾರಾಗಿದೆ: ರಂಭಾಪುರಿ ಶ್ರೀ

ಇದನ್ನೂ ಓದಿ: ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿದೆ, ಜಾರಿಯಾಗುವ ವಿಶ್ವಾಸವಿದೆ : ಕಾಂತರಾಜು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.