ETV Bharat / state

ರಾಜಕೀಯ ಪಕ್ಷಗಳ ವಿರುದ್ಧವೂ ಮಾನಹಾನಿ ಪ್ರಕರಣ ದಾಖಲಿಸಬಹುದು; ಹೈಕೋರ್ಟ್

author img

By ETV Bharat Karnataka Team

Published : Feb 24, 2024, 7:10 PM IST

ಪ್ರಕರಣವೊಂದರ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠ, ರಾಜಕೀಯ ಪಕ್ಷಗಳ ವಿರುದ್ಧವೂ ಮಾನಹಾನಿ ಪ್ರಕರಣ ದಾಖಲಿಸಬಹುದು ಎಂದು ತಿಳಿಸಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಶಿವಾಜಿನಗರದ ಶಾಸಕ ರಿಜ್ವಾನ್‌ ಅರ್ಷದ್‌ ಅವರು ಬಿಜೆಪಿ ವಿರುದ್ಧ ಹೂಡಿದ್ದ ಮಾನಹಾನಿ ಕೇಸ್‌ ರದ್ದುಗೊಳಿಸಲು ನಿರಾಕರಿಸಿರುವ ಹೈಕೋರ್ಟ್, ರಾಜಕೀಯ ಪಕ್ಷದ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಅವಕಾಶವಿದೆ ಎಂದು ಹೈಕೋರ್ಟ್‌ ತಿಳಿಸಿದೆ.

ಬಿಜೆಪಿ ವಿರುದ್ಧ 2019ರಲ್ಲಿ ರಿಜ್ವಾನ್‌ ಅರ್ಷದ್‌ ಹೂಡಿದ್ದ ಮಾನಹಾನಿ ಪ್ರಕರಣ ಕೋರಿ ಬಿಜೆಪಿ ರಾಜ್ಯ ಘಟಕ ಹಾಗೂ ಅದರ ಹಿಂದಿನ ಅಧ್ಯಕ್ಷರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್​. ದೀಕ್ಷಿತ್‌ ಅವರಿದ್ದ ಏಕ ಸದಸ್ಯಪೀಠ ವಜಾಗೊಳಿಸಿ ಆದೇಶಿಸಿದೆ.

ಅಪರಾಧ ದಂಡ ಸಂಹಿತೆ ಸೆಕ್ಷನ್‌ 499 ಹಾಗೂ 500 ರ ಅನ್ವಯ ಅರ್ಜಿದಾರರಂತಹ ವ್ಯಕ್ತಿಗಳ ಒಕ್ಕೂಟವನ್ನು ಇಂತಹ ಕ್ರಿಮಿನಲ್‌ ಪ್ರಕ್ರಿಯೆಯಲ್ಲಿ ಪಕ್ಷಗಾರರನ್ನಾಗಿ ಮಾಡಬಹುದು ಎಂದು ತಿಳಿಸಿದೆ.

ನಮ್ಮ ದೇಶದಲ್ಲಿರುವಂತಹ ಸಕ್ರಿಯ ಪ್ರಜಾ ಪ್ರಭುತ್ವದಲ್ಲಿ ರಾಜಕೀಯ ಪಕ್ಷಗಳು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಸೂಕ್ತ ರಕ್ಷಣೆ ಅಗತ್ಯವಿದೆ. ಆದ್ದರಿಂದ ಮಾನಹಾನಿ ಅಪರಾಧ ಅಷ್ಟೊಂದು ಕಠಿಣವಲ್ಲ ಎನ್ನುವ ಕಾರಣಕ್ಕೆ ಅದನ್ನು ಲಘುವಾಗಿ ಪರಿಗಣಿಸುವಂತಿಲ್ಲ ಎಂದು ಪೀಠ ತಿಳಿಸಿದೆ.

ಅರ್ಜಿಯನ್ನು ವಿಲೇವಾರಿ ಮಾಡಿರುವ ನ್ಯಾಯಪೀಠ, ಈ ಸಂಬಂಧ ನ್ಯಾಯಾಲಯ ವ್ಯಕ್ತಪಡಿಸಿರುವ ಅಭಿಪ್ರಾಯಗಳು ವಿಶೇಷ ನ್ಯಾಯಾಲಯದ ಮುಂದೆ ಇರುವ ಮಾನಹಾನಿ ಪ್ರಕರಣದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ವಿಚಾರಣೆ ವೇಳೆ ಬಿಜೆಪಿ ಪರ ವಕೀಲರು, ಅಪರಾಧ ದಂಡ ಸಂಹಿತೆ ಸೆಕ್ಷನ್‌ 499 ಹಾಗೂ 500 ರ ಅನ್ವಯ ಪಕ್ಷವನ್ನು ವ್ಯಕ್ತಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ವಾದ ಮಂಡಿಸಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ರಿಜ್ವಾನ್‌ ಪರ ವಕೀಲರು, ಐಪಿಸಿ ಸೆಕ್ಷನ್‌ 11ರಲ್ಲಿ ವ್ಯಕ್ತಿ ಎಂಬುದನ್ನು ವ್ಯಾಖ್ಯಾನಿಸಿರುವಂತೆ, ಪಕ್ಷವೂ ಸಹ ಹಲವು ವ್ಯಕ್ತಿಗಳನ್ನು ಒಳಗೊಂಡ ಸಂಸ್ಥೆಯಾಗಿದೆ. ಅದು ನೋಂದಾಯಿಸಿರಬಹುದು ಅಥವಾ ಇಲ್ಲದೆ ಇರಬಹುದು. ಆದರೂ ಸರ್ಕಾರಗಳು, ಕಂಪನಿಗಳು, ಟ್ರೇಡ್‌ ಯುನಿಯನ್‌ಗಳು ಸೇರಿ ಎಲ್ಲ ವ್ಯಕ್ತಿಗಳಿಗೂ ತಮ್ಮದೇ ಆದ ಗೌರವವಿದೆ. ಹಾಗಾಗಿ ಈ ಪ್ರಕರಣದಲ್ಲಿ ಮೂಲ ದೂರುದಾರರ ಘನತೆಗೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಮಾನಹಾನಿ ಹೂಡಲಾಗಿದೆ. ಅದರ ವಿರುದ್ಧ ವಿಶೇಷ ನ್ಯಾಯಾಲಯ ಕ್ರಮ ಜರುಗಿಸುತ್ತಿರುವುದು ಸರಿಯಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

ಪ್ರಕರಣದ ಹಿನ್ನೆಲೆ: ವಿಧಾನಪರಿಷತ್‌ ಸದಸ್ಯರಾಗಿದ್ದ ರಿಜ್ವಾನ್‌ ಅರ್ಷದ್‌ ಅವರು ಹಲವು ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು 2019ರಲ್ಲಿ ಬಿಜೆಪಿ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ರಿಜ್ವಾನ್‌ ಅರ್ಷದ್‌, ಬಿಜೆಪಿ ಪೋಸ್ಟ್‌ಗಳಿಂದ ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಆಗಿದೆ ಎಂದು ಬಿಜೆಪಿ ಮತ್ತು ಬಾಲಾಜಿ ಅಶ್ವಿನ್‌ ಎಂಬ ವ್ಯಕ್ತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ಆಧರಿಸಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಗ್ನಿಜೆನ್ಸ್‌ ಪಡೆದು ಪಕ್ಷ ಹಾಗೂ ಅದರ ಅಧ್ಯಕ್ಷರಿಗೆ ಸಮನ್ಸ್‌ ಜಾರಿಗೊಳಿಸಿತ್ತು. ಅದನ್ನು ಬಿಜೆಪಿ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: ಲಂಚ ಪಡೆದು ಬಿಟಿಸಿ ಸ್ಟೀವರ್ಡ್‌ ನೇಮಕ ಆರೋಪ: ಬಿ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.