ETV Bharat / state

ನಾಳೆ ಟ್ರಿನಿಟಿ ಮತ್ತು ಎಂಜಿ ರಸ್ತೆ ನಡುವೆ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ

author img

By ETV Bharat Karnataka Team

Published : Feb 10, 2024, 1:50 PM IST

Disruption of Metro train services btw Trinity MG Road tomorrow
ನಾಳೆ ಟ್ರಿನಿಟಿ ಮತ್ತು ಎಂಜಿ ರಸ್ತೆ ನಡುವೆ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ

ನಿರ್ವಹಣೆ ಕಾಮಗಾರಿ ನಿಮಿತ್ತ ಬೆಳಗ್ಗೆ 7 ರಿಂದ ಎರಡು ಗಂಟೆಗಳ ಕಾಲ ಮೆಟ್ರೋ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು: ನಗರದ ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಫೆ.11ರಂದು ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿದ್ದು, ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ.

ಶುಕ್ರವಾರ ಬಿಎಂಆರ್​ಸಿಎಲ್​ ಪ್ರಕಟಣೆ ಹೊರಡಿಸಿದ್ದು, ಕಾಮಗಾರಿ ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ವಾಣಿಜ್ಯ ಸೇವೆಯನ್ನು ಬೆಳಗ್ಗೆ 7 ರಿಂದ 9ರವರೆಗೆ (ಎರಡು ಗಂಟೆಗಳ ಅವಧಿಗೆ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದೆ.

ಈ ಅವಧಿಯಲ್ಲಿ ರೈಲುಗಳು ಎಂ.ಜಿ. ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ ಮತ್ತು ಕಾಡುಗೋಡಿ ನಡುವೆ ಮಾತ್ರ ಬೆಳಗ್ಗೆ 7 ಗಂಟೆಯಿಂದ ಚಲಿಸುತ್ತವೆ. ಬೆಳಗ್ಗೆ 9 ಗಂಟೆಯ ನಂತರ ಕಾಡುಗೋಡಿ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ವೇಳಾಪಟ್ಟಿಯಂತೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತವೆ. ಹಸಿರು ಮಾರ್ಗದಲ್ಲಿ ರೈಲುಗಳ ಸೇವೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದೆ.

ಇದನ್ನೂ ಓದಿ: ಕಾಳೇನ ಅಗ್ರಹಾರದಿಂದ ನಾಗವಾರವರೆಗಿನ ಮೆಟ್ರೋ ಕಾಮಗಾರಿ 2025ಕ್ಕೆ ಪೂರ್ಣ: ಬಿಎಂಆರ್‌ಸಿಎಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.