ETV Bharat / state

ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರ ಸ್ವೀಕಾರ

author img

By ETV Bharat Karnataka Team

Published : Jan 28, 2024, 11:48 AM IST

ದಿವ್ಯಪ್ರಭು ಜಿ ಆರ್ ಜೆ  Divya Prabhu GRJ  ಧಾರವಾಡ  Dharwad  New District Collector
ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರ ಸ್ವೀಕಾರ

ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರ ಸ್ವೀಕರಿಸಿದ್ದಾರೆ.

ಧಾರವಾಡ: ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ನಿನ್ನೆ (ಶನಿವಾರ) ಸಂಜೆ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ ಬೆಂಗಳೂರಿಗೆ ವರ್ಗಾವಣೆ ಆಗಿದ್ದು, ಅವರ ಸ್ಥಳಕ್ಕೆ ಹಿರಿಯ ಐಎಎಸ್ ಅಧಿಕಾರಿ ದಿವ್ಯಪ್ರಭು ಜೆ.ಆರ್.ಜಿ ಅವರನ್ನು ನೇಮಕಗೊಳಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ತಮಿಳುನಾಡು ಮೂಲದ ದಿವ್ಯಪ್ರಭು 2014ನೇ ಸಾಲಿನ ಐಎಎಸ್ ಬ್ಯಾಚ್‌ನ ಅಧಿಕಾರಿ. ಈಗಾಗಲೇ ವಿವಿಧ ಆಡಳಿತಾತ್ಮಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಲಿಂಗಸಗೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಆರಂಭಿಸಿದ ಇವರು, ಬಳ್ಳಾರಿ ಮಹಾನಗರಪಾಲಿಕೆ ಆಯುಕ್ತರಾಗಿ, ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಾಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ದಿವ್ಯಪ್ರಭು ಜಿ ಆರ್ ಜೆ  Divya Prabhu GRJ  ಧಾರವಾಡ  Dharwad  New District Collector
ಕೇಂದ್ರ ಸರಕಾರದ ಸ್ವಚ್ಛ ಸರ್ವೇಕ್ಷಣಾ ರಾಷ್ಟ್ರೀಯ ಪ್ರಶಸ್ತಿ ಸ್ವೀಕಾರ ಮಾಡಿದ್ದ ದಿವ್ಯಪ್ರಭು ಜಿ.ಆರ್.ಜೆ

ಪ್ರಸ್ತುತ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ದಿವ್ಯಪ್ರಭು ಸರ್ಕಾರದ ಆದೇಶದಂತೆ ನಿನ್ನೆ ಸಂಜೆ ಧಾರವಾಡ ಜಿಲ್ಲಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ದಿವ್ಯಪ್ರಭು ಚಿತ್ರದುರ್ಗ ಜಿಲ್ಲಾಧಿಕಾರಿಗಳಾಗಿದ್ದಾಗ ಚುನಾವಣಾ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಿದ್ದಕ್ಕಾಗಿ ಭಾರತ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಪ್ರಶಸ್ತಿ ಮತ್ತು ರಾಷ್ಟ್ರೀಯ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಇವರ ನೇತೃತ್ವದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಉತ್ತಮ ಸಾಧನೆ ಮಾಡಿದ್ದು ಕೇಂದ್ರ ಸರಕಾರದ ಸ್ವಚ್ಛ ಸರ್ವೇಕ್ಷಣಾ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ.

ಜಿಲ್ಲಾಧಿಕಾರಿಗಳ ಮಾತು: ''ಆರೋಗ್ಯ, ಶಿಕ್ಷಣ, ಗ್ರಾಮೀಣ ಅಭಿವೃದ್ದಿ, ಮಹಿಳೆಯರು, ದುರ್ಬಲ ವರ್ಗದವರ ಏಳಿಗೆಯ ಜೊತೆಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಿ, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ, ನೌಕರರ, ಸಾರ್ವಜನಿಕರ ಸಹಕಾರದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯ ನಿರ್ವಹಿಸಲಾಗುವುದು'' ಎಂದು ಡಿಸಿ ತಿಳಿಸಿದ್ದಾರೆ.

ದಿವ್ಯಪ್ರಭು ಜಿ ಆರ್ ಜೆ  Divya Prabhu GRJ  ಧಾರವಾಡ  Dharwad  New District Collector
ಭಾರತ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಪ್ರಶಸ್ತಿಯನ್ನು ದಿವ್ಯಪ್ರಭು ಜಿ.ಆರ್.ಜೆ ಅಧಿಕಾರ ಸ್ವೀಕರಿಸಿದ್ದರು.

ಇದನ್ನೂ ಓದಿ: ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧಿಸಿದರೆ, ಅಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಪ್ರಮುಖವಾಗುತ್ತೆ: ಸತೀಶ್ ಜಾರಕಿಹೊಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.