ETV Bharat / state

ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್ ಹೋರಾಟ; ಬಿಜೆಪಿ ನಾಯಕರು ತಮ್ಮ ಹೋರಾಟದ ಬೋರ್ಡ್ ಬದಲಿಸಿಕೊಳ್ಳಲಿ: ಶಿವಕುಮಾರ್ ವ್ಯಂಗ್ಯ - D K SHIVAKUMAR SARCASM

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಡೆಸಲಿರುವ ಹೋರಾಟದ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಇಂದು ಪೂರ್ವಸಿದ್ಧತಾ ಸಭೆ ನಡೆಸಿದರು.

DCM D K Shivakumar
ಡಿಸಿಎಂ ಡಿ ಕೆ ಶಿವಕುಮಾರ್​ (ETV Bharat)
author img

By ETV Bharat Karnataka Team

Published : April 12, 2025 at 5:52 PM IST

Updated : April 12, 2025 at 7:53 PM IST

2 Min Read

ಬೆಂಗಳೂರು: "ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ 'ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ' ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ ಮನವಿ ಮಾಡುತ್ತಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ಏ.17ರಂದು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಡೆಸಲಿರುವ ಹೋರಾಟದ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಇಂದು ಪೂರ್ವಸಿದ್ಧತಾ ಸಭೆ ನಡೆಸಿ, ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಡಿಸಿಎಂ ಡಿ ಕೆ ಶಿವಕುಮಾರ್​ (ETV Bharat)

"ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲ ವಸ್ತುಗಳ ಬೆಲೆ ಏನಿತ್ತು, ಈಗ ಏನಾಗಿದೆ ಎಂದು ನೋಡಬೇಕು. ಈ ಬೆಲೆ ಏರಿಕೆ ಬಿಸಿ ತಡೆಯಲು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡಲು ಅನೇಕ ನಾಯಕರು ಇಂದು ಚರ್ಚೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಈ ಹೋರಾಟವನ್ನು ಜಿಲ್ಲಾ ಮಟ್ಟದಲ್ಲಿ ಮಾಡಲಾಗುವುದು" ಎಂದು ಮಾಹಿತಿ ನೀಡಿದರು.

ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್ ಹೋರಾಟ: ಜೆಡಿಎಸ್ ಪಕ್ಷವೂ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ, "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಮಾಡಬಾರದು ಎಂದು ಹೇಳಲು ಸಾಧ್ಯವಿಲ್ಲ. ಜೆಡಿಎಸ್ ಪಕ್ಷದವರು 'ಸಾಕಪ್ಪಾ ಸಾಕು ಬಿಜೆಪಿ ಸರ್ಕಾರ' ಎಂದು ಹೋರಾಟ ಮಾಡಲು ಸಲಹೆ ನೀಡುತ್ತೇನೆ. ಅವರು ಸಿದ್ಧಾಂತವನ್ನು ಬಳಸಿಕೊಂಡಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ. ಅವರಿಗೆ ಅಭಿನಂದನೆಗಳು" ಎಂದು ತಿಳಿಸಿದರು.

ಕರಗ ಉತ್ಸವಕ್ಕೆ ಅನುದಾನ ನೀಡಿಲ್ಲ ಎಂಬ ಆರೋಪದ ಬಗ್ಗೆ ಕೇಳಿದಾಗ, "ನಮಗೆ ಯಾರು ಬಂದು ಅರ್ಜಿ ನೀಡಿದ್ದಾರೋ ಅವರಿಗೆ ನೆರವು ನೀಡಲಿದ್ದೇವೆ. ಇದಕ್ಕೆ ಬಜೆಟ್ ನಲ್ಲೂ ಅನುದಾನ ಮೀಸಲಿಡಲಾಗಿದೆ. ಅವರು 2-3 ಭಾಗಗಳಾಗಿರಬೇಕು. ಎಲ್ಲರೂ ಒಗ್ಗಟ್ಟಾಗಿ ಬಂದರೆ, ಕರಗ ಉತ್ಸವಕ್ಕೆ ಮೊದಲಿನಿಂದಲೂ ಯಾವ ರೀತಿ ನೆರವು ನೀಡುತ್ತಿದ್ದೆವೋ ಅದನ್ನೇ ನೀಡುತ್ತೇವೆ. ನಾವು ಅನುದಾನ ನೀಡದಿದ್ದರೆ ನಮಗೆ ಆಹ್ವಾನ ಯಾಕೆ ನೀಡಿದ್ದಾರೆ?"ಎಂದು ಹೇಳಿದರು.

ಜಾತಿ ಗಣತಿಯು ಜನಗಣತಿಯಲ್ಲ: ಜಾತಿ ಗಣತಿ ವರದಿ ವಿಚಾರದಲ್ಲಿ ತಮ್ಮ ನಿಲುವೇನು ಎಂದು ಕೇಳಿದಾಗ, "ಜಾತಿ ಗಣತಿಯು ಜನಗಣತಿಯಲ್ಲ, ಅದು ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ. ನಮ್ಮ ಪಕ್ಷ ಸರ್ವರಿಗೂ ಸಮಬಾಳು, ಸಮಪಾಲು ಎಂಬ ನಿಲುವು ಹೊಂದಿದೆ. ಮುಖ್ಯಮಂತ್ರಿಗಳು ಹಾಗೂ ನಾನು ಇನ್ನು ವರದಿ ನೋಡಿಲ್ಲ. ನಾವು ಇದನ್ನು ಪರಿಶೀಲನೆ ಮಾಡುತ್ತೇವೆ. ಏನಾದರೂ ಹೆಚ್ಚು ಕಮ್ಮಿ ಇದ್ದರೆ ಎಲ್ಲರೂ ಚರ್ಚೆ ಮಾಡಿ ಅದನ್ನು ಸರಿಪಡಿಸುತ್ತೇವೆ" ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕರ್ನಾಟಕ‌ದ ಈಗಿನ ಸರ್ಕಾರ ಭ್ರಷ್ಟಾಚಾರದಲ್ಲಿ‌ ದೇಶದಲ್ಲಿಯೇ ನಂಬರ್ ಒನ್‌: ವಿಜಯೇಂದ್ರ ಆರೋಪ

Last Updated : April 12, 2025 at 7:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.