ETV Bharat / state

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಕ್ಷಮೆ ಕೇಳಲು ಹಿಂಜರಿಯಲ್ಲ: ಪ್ರಹ್ಲಾದ್ ಜೋಶಿ - DHARWAD LOK SABHA CONSTITUENCY

author img

By ETV Bharat Karnataka Team

Published : Mar 28, 2024, 2:00 PM IST

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಕ್ಷಮೆ ಕೇಳಲು ಹಿಂಜರಿಯಲ್ಲ: ಪ್ರಹ್ಲಾದ್ ಜೋಶಿ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಕ್ಷಮೆ ಕೇಳಲು ಹಿಂಜರಿಯಲ್ಲ: ಪ್ರಹ್ಲಾದ್ ಜೋಶಿ

ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಕ್ಷಮೆ ಕೇಳಲು ಹಿಂಜರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿ: ನಾನು ಲೋಕಸಭಾ ಸದಸ್ಯನಾದ ಮೇಲೆ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಏಳು ಜನ ಲಿಂಗಾಯತರಿಗೆ ಟಿಕೆಟ್ ಕೊಡಲಾಗಿದೆ.‌ ಎಲ್ಲಾ ಸಮುದಾಯಕ್ಕೂ ನಾವು ಅವಕಾಶ ಕೊಟ್ಟಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿಗಳ ಬಗ್ಗೆ ನನಗೆ ಗೌರವ, ಶ್ರದ್ಧೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿಂದು ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಭೆಗೂ ಮುನ್ನ ಮಾತನಾಡಿದ ಅವರು, ಜೋಶಿ ಲಿಂಗಾಯತರನ್ನು ತುಳಿದಿದ್ದಾರೆ ಎನ್ನುವ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿ, ಸ್ವಾಮೀಜಿ ಹಾಗೂ ಶಿರಹಟ್ಟಿ ಪೀಠ ನನಗೆ ಸದಾಕಾಲ ಆಶೀರ್ವಾದ ಮಾಡಿದೆ. ಸ್ವಾಮೀಜಿಗಳಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ. ತಪ್ಪಾಗಿದ್ದರೆ ಕ್ಷಮೆ ಕೇಳಲು ನಾನು ಹಿಂಜರಿಯಲ್ಲ. ಏನಾದರೂ ತಪ್ಪು ಮಾಡಿದ್ದರೆ ನೇರವಾಗಿ ಹೇಳಲಿ ಕ್ಷಮೆ ಕೇಳುತ್ತೇನೆ. ಸ್ವಾಮೀಜಿ ಏನು ಹೇಳಿದರೂ ನನಗೆ ಆಶೀರ್ವಾದ. ಈ ಸಂದರ್ಭದಲ್ಲಿ ನಾನು ಹೆಚ್ಚೇನೂ ಮಾತಾಡಲ್ಲ, ಸಮಯ ಕೊಟ್ಟರೆ ಅವರ ಜೊತೆ ಮಾತನಾಡಲು ನಾನು ತಯಾರಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಮುಂದುವರೆದು ಮಾತನಾಡಿ, ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪದಾಧಿಕಾರಿಗಳು, ಪ್ರಮುಖರ ಸಭೆಯನ್ನು ಕರೆಯಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಪ್ರಮುಖರು, ಕಾರ್ಯಕರ್ತರು ಸೇರಿ ಚುನಾವಣೆ ಮಾಡುತ್ತಿದ್ದೇವೆ. ಕ್ಷೇತ್ರದಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಮತದಾರರನ್ನು ಭೇಟಿಯಾಗುತ್ತೇವೆ. ದೊಡ್ಡ ಬಹುಮತದಿಂದ ಬಿಜೆಪಿ ಗೆಲ್ಲಲಿದೆ. ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್ ಪಾರ್ಟಿಯವರು ಹತಾಶರಾಗಿ ಅತ್ಯಂತ ಕ್ಷುಲ್ಲಕ ಭಾಷೆಯಿಂದ ಮಾತನಾಡಲು ಪ್ರಾರಂಭಿಸಿದ್ದಾರೆ. ‌ಮೋದಿಯವರ ಬಗ್ಗೆ ಎಷ್ಟು ಕ್ಷುಲ್ಲಕ ಭಾಷೆ ಬಳಸುತ್ತಾರೋ ಅಷ್ಟು ಮೋದಿಯವರ ಜನಪ್ರಿಯತೆ ಹೆಚ್ಚುತ್ತದೆ. ಬಿಜೆಪಿಯ ಕಾರ್ಯಕರ್ತರು ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡುತ್ತಾರೆ. ಬಿಜೆಪಿಯಲ್ಲಿ ಕೆಲವು ಕ್ಷೇತ್ರಗಳಲ್ಲಿ ದುಃಖ, ದುಮ್ಮಾನ, ಬಂಡಾಯ ಇದೆ. ಎಲ್ಲಾ ಕಡೆ ಮಾತುಕತೆ ನಡೆಸಲಾಗಿದೆ. ದಾವಣಗೆರೆಯಲ್ಲಿ ಮಾತುಕತೆಯಾಗಿದೆ, ರಾಯಚೂರು ಬಾಕಿ ಉಳಿದಿದೆ ಅದನ್ನೂ ಸರಿ ಮಾಡುತ್ತೇವೆ ಎಂದು ಇದೇ ವೇಳೆ ಕೇಂದ್ರ ಸಚಿವ ಜೋಶಿ ತಿಳಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿಎಂ, ಡಿಸಿಎಂ ಖುದ್ದು ಹಾಜರಿಗೆ ಕೋರ್ಟ್ ಸೂಚಿಸಿದೆ: ಮಾಳವಿಕಾ ಅವಿನಾಶ್ - Malavika Avinash

ETV Bharat Logo

Copyright © 2024 Ushodaya Enterprises Pvt. Ltd., All Rights Reserved.