ಚಿಕ್ಕೋಡಿ: ತಾಯಿ ಮತ್ತು ಮಗನನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಡಗಾನೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ತಾಯಿ ಚಂದ್ರವ್ವ ಅಪ್ಪಾರಾಯ ಇಚೇರಿ (62) ಹಾಗೂ ಅವರ ಮಗ ವಿಠ್ಠಲ್ ಅಪ್ಪರಾಯ ಇಚೇರಿ (42) ಕೊಲೆಗೀಡಾದವರು ಎಂದು ಗುರುತಿಸಲಾಗಿದೆ. ಅಪರಿಚಿತ ವ್ಯಕ್ತಿಗಳು ಇಬ್ಬರನ್ನು ಕೊಲೆ ಮಾಡಿ ಮನೆಯಿಂದ ಕಬ್ಬಿನ ಗದ್ದೆಯಲ್ಲಿ ಶವಗಳನ್ನು ಬಿಸಾಕಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈಟಿವಿ ಭಾರತ ಜೊತೆ ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್ ದೂರವಾಣಿ ಮುಖಾಂತರ ಮಾತನಾಡಿ, ತಾಯಿ-ಮಗನ ಸಾವು ದುರದೃಷ್ಟಕರ, ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ನಮ್ಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸಂಪೂರ್ಣ ತನಿಖೆಯಿಂದಲೇ ಸತ್ಯಾಸತ್ಯತೆ ಹೊರಬರುತ್ತದೆ, ಆದಷ್ಟು ಬೇಗನೆ ಆರೋಪಿಗಳನ್ನು ಬಂಧನ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಐದು ವರ್ಷದ ಮಗು ಕೊಂದ ಮಲತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದ ಚಿಕ್ಕೋಡಿ ಕೋರ್ಟ್