ಬೆಂಗಳೂರು: ಶಿವಮೊಗ್ಗದ ಜಿಲ್ಲಾ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥಗೌಡ ವಿರುದ್ಧ ಜಾರಿ ನಿರ್ದೇಶಾಲಯ (ಇ.ಡಿ) ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆ 2002ರ ಅಡಿಯಲ್ಲಿ ಈ ಸಂಬಂಧ ಜೂನ್ 6ರಂದು ವಿಶೇಷ ನ್ಯಾಯಾಲಯಕ್ಕೆ ಇ.ಡಿ ಅಧಿಕಾರಿಗಳು ಪ್ರಾಸಿಕ್ಯೂಷನ್ ದೂರು ಸಲ್ಲಿಸಿದ್ದರು. ಇದರಂತೆ ತನಿಖೆ ನಡೆಸಲಾಗುತ್ತಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡವಿಟ್ಟು 62.77 ಕೋಟಿ ರೂಪಾಯಿ ಹಣ ವಂಚಿಸಿದ್ದರು. ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಅಲ್ಲದೆ, ಮಂಜುನಾಥ್ ಗೌಡ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದಾಗ 3.95 ಕೋಟಿ ರೂ. ಅಸಮತೋಲನ ಆಸ್ತಿ ಪತ್ತೆಯಾಗಿತ್ತು. ಇದರ ಆಧಾರದ ಮೇರೆಗೆ ಪಿಎಂಎಲ್ಎ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.
ED, Bengaluru has filed a Prosecution Complaint (PC) under the PMLA, 2002 against R.M. Manjunatha Gowda, Former President of SDCC Bank & Karnataka State Co-operative Apex Bank, before the Hon’ble Special Court (PMLA) on 06.06.2025 in a case related to siphoning of funds from…
— ED (@dir_ed) June 9, 2025
ಆರೋಪ ಸಂಬಂಧ ಮಂಜುನಾಥ್ ಗೌಡ ಅವರನ್ನು ಏ.9ರಂದು ಇ.ಡಿ ಬಂಧಿಸಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಹಾಗೂ ಅವರ ಪತ್ನಿಗೆ ಸೇರಿದ ಅಂದಾಜು 13.91 ಕೋಟಿ ರೂ.ಮೌಲ್ಯದ ಚರ ಹಾಗೂ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅಲ್ಲದೇ ಹೆಚ್ಚಿನ ತನಿಖೆ ಮುಂದುವರೆಸಲಾಗಿದೆ ಎಂದು ಜಾರಿ ನಿರ್ದೇಶಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.