ETV Bharat / state

ಸರ್ಕಾರಿ ನೌಕರರನ್ನ ಬೆದರಿಸಿ ಹಣ ವಸೂಲಿ ಆರೋಪ: ಜೂನ್ 16ರ ವರೆಗೆ ಮಾಜಿ ಕಾನ್​ಸ್ಟೇಬಲ್ ಲೋಕಾಯುಕ್ತ ವಶಕ್ಕೆ - LOKAYUKTA CUSTODY

ಸರ್ಕಾರಿ ನೌಕರರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಲ್ಪಟ್ಟಿರುವ ಕಾನ್​ಸ್ಟೇಬಲ್​ನನ್ನು ಜೂ. 16ರ ವರೆಗೆ ಲೋಕಾಯುಕ್ತ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ
ಲೋಕಾಯುಕ್ತ (ETV Bharat File)
author img

By ETV Bharat Karnataka Team

Published : June 14, 2025 at 10:35 PM IST

1 Min Read

ಬೆಂಗಳೂರು: ಸರ್ಕಾರಿ ನೌಕರರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಮಾಜಿ ಹೆಡ್ ಕಾನ್​ಸ್ಟೇಬಲ್ ಬಂಧಿಸಿರುವ ಲೋಕಾಯುಕ್ತ ಪೊಲೀಸರು ಜೂನ್ 16ರ ವರೆಗೆ ವಶಕ್ಕೆ ಪಡೆದು ವಿಚಾರಣೆ ಬಿಗಿಗೊಳಿಸಿದ್ದಾರೆ.

ನಿಂಗಪ್ಪ ಅಲಿಯಾಸ್ ಸಾವಂತ್ ಬಂಧಿತ ಆರೋಪಿ. ಅಬಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳನ್ನು ಲೋಕಾಯುಕ್ತ ದಾಳಿ ಹೆಸರಿನಲ್ಲಿ ಬೆದರಿಸಿ ಅವರಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ವಸೂಲಿ ಮಾಡುತ್ತಿದ್ದ ಆರೋಪ ಕೇಳಿಬಂದಿತ್ತು.‌ ಈತನ ವಿಚಾರಣೆ ವೇಳೆ ಲೋಕಾಯುಕ್ತ ಕೆಲ ಅಧಿಕಾರಿಗಳ ಕೈವಾಡ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ವರದಿಯಾಗಿದೆ.

ಲೋಕಾಯುಕ್ತ, ಎಡಿಜಿಪಿ ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳ ಮೊಬೈಲ್ ನಂಬರ್ ಸೇವ್ ಮಾಡಿಕೊಂಡಿದ್ದ ಆರೋಪಿಯು ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ದಾಳಿ ಸೋಗಿನಲ್ಲಿ ಬೆದರಿಸುತ್ತಿದ್ದ.‌ ಕೈವಾಡದ ಹಿಂದೆ ಕೆಲ ಅಧಿಕಾರಿಗಳ ಪಾತ್ರ ಬಗ್ಗೆ ಹೇಳಿದ್ದಾನೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ಅವರ ನೇತೃತ್ವದ ತಂಡವು ಜೂನ್ 16ರ ವರೆಗೆ ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ನಿಂಗಪ್ಪನಿಂದ ಮೊಬೈಲ್ ಜಪ್ತಿ ಮಾಡಿಕೊಂಡಿರುವ ಅಧಿಕಾರಿಗಳು ದೂರವಾಣಿ‌ ಕರೆಗಳ ವಿವರಗಳನ್ನು ಸಂಗ್ರಹಿಸಿದ್ದಾರೆ. ಯಾರ್ಯಾರ ಜೊತೆ ಸಂಪರ್ಕ ಹೊಂದಿದ್ದಾನೆ. ಸರ್ಕಾರಿ ಅಧಿಕಾರಿಗಳಿಂದ ಹೇಗೆ ಹಣ ವಸೂಲಿ ಮಾಡುತ್ತಿದ್ದ ಎಂಬುದರ ಬಗ್ಗೆ ತನಿಖೆ‌ ನಡೆಸುತ್ತಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳ‌ ಹೆಸರು ದುರ್ಬಳಕೆ‌ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ತನಿಖೆ ನಡೆಸಿದಾಗ ಬಳಿಕ‌ ಸತ್ಯಾಸತ್ಯತೆ ಗೊತ್ತಾಗಲಿದೆ. ತನಿಖೆಯಲ್ಲಿ ಅಧಿಕಾರಿಗಳು ಶಾಮೀಲಾಗಿರುವುದು ತಿಳಿದುಬಂದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ಕಚೇರಿಗೆ ಬಂದು ನಮ್ಮ ಮೇಲೆ ದಾಳಿ ಮಾಡದಂತೆ ಲಂಚದ ಆಮಿಷ ಆರೋಪ: ಅಧಿಕಾರಿ ಅರೆಸ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.