ETV Bharat / state

ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಹೆಚ್.ಡಿ.ದೇವೇಗೌಡ ನಿರ್ಧಾರ: ಇದ್ದಲ್ಲಿಂದಲೇ ಹಾರೈಸುವಂತೆ ಮನವಿ - HD Deve Gowda Birthday

author img

By ETV Bharat Karnataka Team

Published : May 16, 2024, 3:14 PM IST

ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿರುವ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಇದ್ದಲ್ಲಿಂದಲೇ ಎಲ್ಲರೂ ಹಾರೈಸುವಂತೆ ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.

HD DEVE GOWDA BIRTHDAY
ಹೆಚ್.ಡಿ.ದೇವೇಗೌಡ (ETV Bharat)

ಬೆಂಗಳೂರು: ಮೇ 18 ರಂದು 92ನೇ ವರ್ಷಕ್ಕೆ ಕಾಲಿಡುತ್ತಿರುವ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ಈ ಬಾರಿ ತಮ್ಮ ಹುಟ್ಟಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಶುಭ ಕೋರಲು ಯಾರೂ ತಮ್ಮ ನಿವಾಸಕ್ಕೆ ಆಗಮಿಸದಂತೆ ಕಾರ್ಯಕರ್ತರು, ಹಿತೈಷಿಗಳಿಗೆ ಮನವಿ ಮಾಡಿದ್ದಾರೆ. ಪ್ರಸಕ್ತ ವಿದ್ಯಮಾನಗಳಿಂದಾಗಿ ನೊಂದಿರುವ ದೇವೇಗೌಡರು, ಈ ಬಾರಿಯ ಹುಟ್ಟುಹಬ್ಬದ ಸಂಭ್ರಮದಿಂದ ದೂರ ಉಳಿಯುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ದೇವೇಗೌಡರು, ಇದೇ ತಿಂಗಳ 18 ರಂದು 91 ವರ್ಷ ಪೂರೈಸಿ 92ನೇ ವಸಂತಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ, ಎಲ್ಲರೂ ಇದ್ದಲ್ಲಿಂದಲೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಹ ಕೋರಿದ್ದಾರೆ.

HD DEVE GOWDA BIRTHDAY
ಪತ್ರಿಕಾ ಪ್ರಕಟಣೆ (ETV Bharat)

ಇದನ್ನೂ ಓದಿ: ರಾಜ್ಯದಲ್ಲಿ ಬರಗಾಲವಿದೆ, ಯಾರೂ ಕೂಡಾ ನನ್ನ ಜನ್ಮದಿನ ಆಚರಿಸಬೇಡಿ: ಡಿಕೆಶಿ ಮನವಿ - D K Shivakumar

ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡ ಕೆಲವು ಕಾರಣ ನೀಡಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದಿದ್ದರು. ನನ್ನ ಜನ್ಮದಿನವಾದ ಮೇ 15ರಂದು ಚುನಾವಣಾ ಪ್ರಚಾರ, ಖಾಸಗಿ ಕಾರ್ಯಕ್ರಮಗಳ ನಿಮಿತ್ತ ಉತ್ತರ ಭಾರತ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಅಂದು ನಾನು ಯಾರಿಗೂ ಸಿಗುವುದಿಲ್ಲ. ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಬಂಧುಗಳು ಅಂದು ನನ್ನನ್ನು ಭೇಟಿ ಮಾಡಲು ಪ್ರಯತ್ನಿಸುವುದು ಬೇಡ. ದಯವಿಟ್ಟು ಯಾರೂ ತಪ್ಪು ತಿಳಿಯಬಾರದು. ತಾವು ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ ಎಂದು ಮನವಿ ಮಾಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.