ETV Bharat / state

ಬೆಂಗಳೂರಿನಲ್ಲಿ ತಡರಾತ್ರಿ ಅಗ್ನಿ ಅವಘಡ: ಕೂಲಿ ಕಾರ್ಮಿಕರು ವಾಸವಿದ್ದ ಶೆಡ್‌ಗಳು ಬೆಂಕಿಗಾಹುತಿ - FIRE ACCIDENT

ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ 20 ಶೆಡ್​ಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Fire Accident in Bengaluru
ಬೆಂಗಳೂರಿನಲ್ಲಿ ಅಗ್ನಿ ಅವಘಡ (ETV Bharat)
author img

By ETV Bharat Karnataka Team

Published : April 13, 2025 at 1:18 PM IST

Updated : April 13, 2025 at 3:21 PM IST

1 Min Read

ಬೆಂಗಳೂರು: ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಿಂದ ಕೂಲಿ ಕಾರ್ಮಿಕರು ವಾಸವಿದ್ದ 20ಕ್ಕೂ ಅಧಿಕ ಶೆಡ್​ಗಳು ಸುಟ್ಟು ಕರಕಲಾದ ಘಟನೆ ತಡರಾತ್ರಿ ಬೆಂಗಳೂರಿನ ಗೋವಿಂದಪುರ ಠಾಣಾ ವ್ಯಾಪ್ತಿಯ ವೀರಣ್ಣಪಾಳ್ಯ ಮುಖ್ಯರಸ್ತೆಯಲ್ಲಿ ನಡೆಯಿತು.

ಆಟಿಕೆ ತಯಾರಿಕಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ 20 ಶೆಡ್​ಗಳು ಸಂಪೂರ್ಣವಾಗಿ ಕರಕಲಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.

ಬೆಂಗಳೂರಿನಲ್ಲಿ ಅಗ್ನಿ ಅವಘಡ (ETV Bharat)

ಮೊದಲಿಗೆ ಒಂದು ಶೆಡ್​ನಲ್ಲಿ ಕಾಣಿಸಿಕೊಂಡ ಬೆಂಕಿ ನೋಡ ನೋಡುತ್ತಿದ್ದಂತೆ ಇತರೆ ಶೆಡ್‌ಗಳಿಗೂ ಹಬ್ಬಿದೆ. ಟೆಂಟ್ ಒಳಗಿದ್ದವರು ಹೊರಗೆ ಓಡಿ ಬಂದಿದ್ದರಿಂದ ಪ್ರಾಣಹಾನಿ ಸಂಭವಿಸಿಲ್ಲ.

ಶೆಡ್‌ನಲ್ಲಿ ಬಹುತೇಕ ರಾಯಚೂರು ಮೂಲದ ಕೂಲಿ ಕಾರ್ಮಿಕರು ವಾಸವಿದ್ದು, ಅವಘಡದಿಂದ ಕಂಗಾಲಾಗಿದ್ದಾರೆ‌. ರಾತ್ರಿಯಿಡೀ ಅವರು ಸ್ಥಳೀಯ ದೇಗುಲದ ಅಂಗಳದಲ್ಲಿ ವಿಶ್ರಾಂತಿ ಪಡೆದಿದ್ದಾರೆ. ಇತ್ತ ಜಾಗದ ಮಾಲೀಕ‌ ಸಹ ಶೆಡ್​ಗಳಲ್ಲಿದ್ದವರಿಗೆ ಮನೆ ಖಾಲಿ ಮಾಡಲು ಸೂಚಿಸಿದ್ದು, ಕಾರ್ಮಿಕರ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಗಂಗಾವತಿ: ಮನೆಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಮಹಿಳೆ: ಸಿಡಿಲಿಗೆ 4 ಜಾನುವಾರು ಬಲಿ

Last Updated : April 13, 2025 at 3:21 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.