ETV Bharat / state

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ: ಆರೋಪಿ ಸೆರೆಗೆ ಆಗ್ರಹಿಸಿ ಪ್ರತಿಭಟನೆ - GIRL CHILD KILLED

ದುರುಳನೊಬ್ಬ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

5 YEAR OLD GIRL MURDERED
ಕೊಲೆ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ (ETV Bharat)
author img

By ETV Bharat Karnataka Team

Published : April 13, 2025 at 6:21 PM IST

2 Min Read

ಹುಬ್ಬಳ್ಳಿ: ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ ಮಾಡಿರುವ ಘಟನೆ ಇಂದು ಇಲ್ಲಿನ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಶೆಡ್​ವೊಂದರಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು, ಪೊಲೀಸರು ಅಧಿಕೃತವಾಗಿ ದೃಢಪಡಿಸಿಲ್ಲ.

ಈ ಬಗ್ಗೆ ವೈದ್ಯಕೀಯ ಪರೀಕ್ಷೆ ಮತ್ತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ಅಶೋಕನಗರ ಪೊಲೀಸ್​ ಠಾಣೆ ಎದುರು ಜಮಾಯಿಸಿ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ (ETV Bharat)

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ, "ಮೃತ ಬಾಲಕಿಯ ಪೋಷಕರಿಂದ ದೂರು ಸ್ವೀಕರಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮೃತ ಬಾಲಕಿ ಕುಟುಂಬ ಕೊಪ್ಪಳ ಜಿಲ್ಲೆಯಿಂದ ಇಲ್ಲಿಗೆ ಬಂದಿದೆ. ಆಕೆಯ ತಾಯಿ ಮನೆಗೆಲಸ ಮತ್ತು ಬ್ಯೂಟಿ ಪಾರ್ಲರ್‌ನಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಆಕೆಯ ತಂದೆ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸ್ಥಳೀಯ ಮನೆಗಳಲ್ಲಿ ಕೆಲಸಕ್ಕೆ ಹೋಗುವಾಗ ತಾಯಿ, ಬಾಲಕಿಯನ್ನು ಜೊತೆಗೆ ಕರೆದುಕೊಂಡು ಹೋಗಿದ್ದರು. ತಾಯಿ ಅಕ್ಕಪಕ್ಕದ ಮನೆಯಲ್ಲಿ ಕೆಲಸ ಮಾಡುವಾಗ ಒಂದು ಮನೆಯಲ್ಲಿ ಮಗುವನ್ನು ಬಿಟ್ಟಿದ್ದರು" ಎಂದರು.

"ಬಳಿಕ ಅಪರಿಚಿತ ವ್ಯಕ್ತಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದ. ಆ ಮನೆಯ ಮುಂಭಾಗ ಇರುವ ಶೆಡ್​ವೊಂದರ ಶೌಚಾಲಯದಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ವೈದ್ಯರು ಬಾಲಕಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದರು.

"ಆರೋಪಿ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಯ ಗುರುತು ಪತ್ತೆಯಾದ ನಂತರ ಆತ ಎಲ್ಲಿದ್ದಾನೆ ಮತ್ತು ಇತರ ವಿವರಗಳನ್ನು ಪತ್ತೆ ಹಚ್ಚಬಹುದು. ಬಾಲಕಿಯ ಮೇಲೆ ಅತ್ಯಾಚಾರ ಯತ್ನ ನಡೆದಿದೆಯೇ ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ. ಸಾವಿಗೆ ಕಾರಣ ಏನು ಮತ್ತು ಬಾಲಕಿಯ ಮೇಲೆ ದೌರ್ಜನ್ಯ ನಡೆದಿದೆಯೇ ಎಂಬ ತನಿಖೆ ನಡೆಸಲಾಗುತ್ತದೆ" ಎಂದು ತಿಳಿಸಿದರು.

ಹುಬ್ಬಳ್ಳಿಯ ನೇಹಾ ಹಿರೇಮಠ ತಂದೆ ನಿರಂಜನ ಹಿರೇಮಠ ‌ಮಾತನಾಡಿ, "ಬಾಲಕಿ ಮೇಲೆ ಅತ್ಯಾಚಾರ ಯತ್ನ ಹಾಗೂ ಕೊಲೆ ಸಮಾಜವೇ ತಲೆ ತಗ್ಗಿಸುವ ಘಟನೆ. ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಾಡಹಗಲೇ ಕೊಲೆ, ದರೋಡೆಗಳು ಆಗುತ್ತಿವೆ. ಹುಬ್ಬಳ್ಳಿ ಮಿನಿ ಬಿಹಾರ ಆಗಿದೆ. ಕೊಲೆ ಆರೋಪಿಗೆ ತಕ್ಕ ಶಿಕ್ಷೆ ಆಗುತ್ತಿಲ್ಲ. ಹುಬ್ಬಳ್ಳಿ-ಧಾರವಾಡ ಕಮಿಷರ್​ಗೆ ಫ್ರೀ ಹ್ಯಾಂಡ್ ಕೊಡಬೇಕು. ಗೃಹ ಸಚಿವರು ಕೈ ಕಟ್ಟಿ ಕುಳಿತ್ತಿದ್ದಾರೆ. ಆರೋಪಿಯನ್ನು ಎನ್​ಕೌಂಟರ್​​ ಮಾಡಬೇಕು" ಎಂದು ಆಗ್ರಹಿಸಿದರು.

ಇದನ್ನೂ ಓದಿ: ಬೆಳಗಾವಿ: ಪ್ರೀತಿಸುತ್ತಿದ್ದ ಬಾಲಕಿಗೆ ಸಾರಾಯಿ ಕುಡಿಸಿ ಅತ್ಯಾಚಾರ

ಇದನ್ನೂ ಓದಿ: ಬೆಂಗಳೂರು: ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ; ಬ್ಯಾಡ್ಮಿಂಟನ್ ಕೋಚ್ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.