ETV Bharat / state

ಚಾರ್ಮಾಡಿ ಘಾಟ್​​ನಲ್ಲಿ ಕಾಡಾನೆ ಜೊತೆ ಸೆಲ್ಫಿ; ವಾಹನ ಸವಾರರ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಸೂಚನೆ - TRAVELERS SELFIE WITH ELEPHANT

ಚಾರ್ಮಾಡಿಯಲ್ಲಿ ಕಾಡಾನೆಯೊಂದಿಗೆ ಸೆಲ್ಫಿ ತೆಗೆಯುವ ಸಾಹಸಕ್ಕೆ ಮುಂದಾದ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

travelers-take-selfie-with-wild-elephant-in-charmadi
ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸಕ್ಕೆ ಮುಂದಾದ ಪ್ರಯಾಣಿಕರು (Viral Video)
author img

By ETV Bharat Karnataka Team

Published : May 23, 2025 at 10:09 AM IST

Updated : May 23, 2025 at 12:31 PM IST

1 Min Read

ಬೆಳ್ತಂಗಡಿ (ದಕ್ಷಿಣ ಕನ್ನಡ) : ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್​​ನ 4ನೇ ತಿರುವಿನಲ್ಲಿ ಮೇ 22ರ ಬೆಳಗ್ಗೆ ರಸ್ತೆಗೆ ಬಂದಿದ್ದ ಕಾಡಾನೆ ಜೊತೆ ವಾಹನ ಸವಾರರು ಸೆಲ್ಫಿ, ಫೋಟೋ ತೆಗೆಯುತ್ತಿದ್ದ ವಿಡಿಯೋವೊಂದು ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ಧಾರೆ.

ವಾಹನ ಸವಾರರು ಸೆಲ್ಫಿ, ಫೋಟೋ ತೆಗೆದುಕೊಳ್ಳುತ್ತಿದ್ದ ವೇಳೆ ಕಾಡಾನೆಯು ರೋಷ ತೋರಿದೆ. ಇದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸಂಚಾರ ಸ್ಥಗಿತಗೊಂಡಿತ್ತು. ಅದೃಷ್ಟವಶಾತ್ ಆನೆ ಯಾರಿಗೂ ತೊಂದರೆ ನೀಡಿಲ್ಲ. ಈ ವಿಡಿಯೋ ವೈರಲ್​ ಆದ ಬೆನ್ನಲ್ಲೇ, ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಮುಂದಾದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.

ಕಾಡಾನೆ ಜೊತೆ ಸೆಲ್ಫಿ, ಫೋಟೋ ತೆಗೆದುಕೊಳ್ಳುತ್ತಿರುವುದು (Viral Video)

ಕಾಡಾನೆಯೊಂದಿಗೆ ಸೆಲ್ಫಿ ತೆಗೆದುಕೊಂಡ ವಾಹನಗಳ ನಂಬರ್​ಗಳನ್ನು ಪತ್ತೆ ಮಾಡಿ, ಕಾನೂನು ಕ್ರಮ ಜರುಗಿಸಲು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಮೇ 22ರ ಸಂಜೆ ಸಚಿವರು ಸೂಚನಾ ಪತ್ರ ಹೊರಡಿಸಿದ್ದಾರೆ.

Notice issued by Forest Minister Eshwar Khandre
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಹೊರಡಿಸಿರುವ ಸೂಚನಾ ಪತ್ರ (ETV Bharat)

ಈ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಮತ್ತು ಅರಣ್ಯದ ಪ್ರವೇಶದ ಬಳಿ ಎಚ್ಚರಿಕೆ ಫಲಕ ಹಾಕಿ, ಅರಿವು ಮೂಡಿಸಲು ಸಂಬಂಧಪಟ್ಟವರಿಗೆ ಸ್ಪಷ್ಟ ಆದೇಶ ಹೊರಡಿಸುವಂತೆ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ : ಆನೆ ಸೇರಿದಂತೆ ವನ್ಯಜೀವಿಗಳ ರಕ್ಷಣೆಗೆ ಹೈಕೋರ್ಟ್ ನೀಡಿರುವ ನಿರ್ದೇಶನಗಳೇನು? - HIGH COURT GUIDELINES

Last Updated : May 23, 2025 at 12:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.