ETV Bharat / state

ಮನೋಹರ್ ತಹಶೀಲ್ದಾರ್ ಬಿಜೆಪಿ ಸೇರ್ಪಡೆಯಿಂದ ಜಿಲ್ಲಾ ಬಿಜೆಪಿಗೆ ದೊಡ್ಡ ಶಕ್ತಿ ಬಂದಿದೆ: ಬಸವರಾಜ ಬೊಮ್ಮಾಯಿ

author img

By ETV Bharat Karnataka Team

Published : Mar 2, 2024, 4:34 PM IST

Updated : Mar 2, 2024, 5:13 PM IST

former-c-m-basavaraja-bommai-reaction-on-manohar-tehsildar
ಮನೋಹರ್ ತಹಶೀಲ್ದಾರ್ ಬಿಜೆಪಿ ಸೇರ್ಪಡೆಯಿಂದ ಜಿಲ್ಲಾ ಬಿಜೆಪಿಗೆ ದೊಡ್ಡ ಶಕ್ತಿ ಬಂದಿದೆ : ಬಸವರಾಜ ಬೊಮ್ಮಾಯಿ

ಮನೋಹರ್ ತಹಶೀಲ್ದಾರ್ ಅವರು ಪಕ್ಷಕ್ಕೆ ಬಂದಿದ್ದರಿಂದ ಹಾವೇರಿ ಜಿಲ್ಲೆಯ ಬಿಜೆಪಿ ರಾಜಕಾರಣಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮನೋಹರ್ ತಹಶೀಲ್ದಾರ್ ಬಿಜೆಪಿ ಸೇರ್ಪಡೆಯಿಂದ ಜಿಲ್ಲಾ ಬಿಜೆಪಿಗೆ ದೊಡ್ಡ ಶಕ್ತಿ ಬಂದಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವರಾದ ಮನೋಹರ್ ತಹಶೀಲ್ದಾರ್ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಅವರ ಈ ಸೇರ್ಪಡೆ ಹಾವೇರಿ ಜಿಲ್ಲಾ ಬಿಜೆಪಿಗೆ ದೊಡ್ಡ ಶಕ್ತಿ ತಂದಿದೆ. ಸಾಮಾಜಿಕವಾಗಿ ಬಿಜೆಪಿಗೆ ಶಕ್ತಿ ಬಂದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮನೋಹರ್ ತಹಶೀಲ್ದಾರ್ ಹಾನಗಲ್​​​ನಲ್ಲಿ ಸುದೀರ್ಘ ರಾಜಕಾರಣ ಮಾಡಿದ್ದಾರೆ. 1986 ರಲ್ಲಿ ಸಿಎಂ ಉದಾಸಿಯವರು ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿ ಬಂದ ಮೇಲೆ ಹಾನಗಲ್ ತಾಲೂಕಿನ ರಾಜಕಾರಣ ಇಬ್ಬರ ನಡುವೆಯೇ ನಡೆಯಿತು. ಆದರೆ, ಇಬ್ಬರ ನಡುವೆ ಯಾವತ್ತೂ ವೈರತ್ವ ಇರಲಿಲ್ಲ. ಇಬ್ಬರೂ ಒಬ್ಬರಿಗೊಬ್ಬರು ಗೌರವಿಸುತ್ತಿದ್ದರು. ಆದರೆ, ಇತ್ತೀಚಿನ ರಾಜಕಾರಣ ಕಲುಷಿತಗೊಂಡಿದೆ. ಹಾನಗಲ್ ತಾಲೂಕಿನಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ಹಾನಗಲ್​ನಲ್ಲಿ ಯಾವತ್ತೂ ಪೊಲೀಸ್​ ಸ್ಟೇಷನ್ ರಾಜಕಾರಣ ಇರಲಿಲ್ಲ ಎಂದರು.

ಹಾನಗಲ್ ನಲ್ಲಿ ಕಾಂಗ್ರೆಸ್ ಪಕ್ಷವನ್ಬು ಕಟ್ಡಿದವರು ಮನೋಹರ್ ತಹಶೀಲ್ದಾರ್. ಆದರೆ, ಅಲ್ಲಿ ಅವರ ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಬೇಸರಗೊಂಡು, ರಾಜ್ಯದಲ್ಲಿ ಬಡವರ ವಿರೋಧಿ ಪಕ್ಷ ಇರುವುದರಿಂದ, ಪ್ರಧಾನಮಂತ್ರಿ ನರೇಂದ್ರ ಮೋದಿ ಆಡಳಿತ ಮೆಚ್ಚಿ ಬಿಜೆಪಿಗೆ ಬಂದಿದ್ದಾರೆ. ಅವರು ಪಕ್ಷಕ್ಕೆ ಬಂದಿದ್ದರಿಂದ ಜಿಲ್ಲೆಯ ಬಿಜೆಪಿಗೆ ದೊಡ್ಡ ಶಕ್ತಿ ಬಂದಂತಾಗಿದೆ. ಅಲ್ಲದೇ ಸಾಮಾಜಿಕವಾಗಿ ನಮಗೆ ದೊಡ್ಡ ಶಕ್ತಿ ಬಂದಿದೆ. ಮಹೋಹರ್ ತಹಶೀಲ್ದಾರ್​ ಅವರು ಪ್ರೀತಿಯ ರಾಜಕಾರಣ ಮಾಡಿದ್ದಾರೆ. ನಮ್ಮ ನಾಯಕರಾದ ಯಡಿಯೂರಪ್ಪ ಅವರು ಮುಕ್ತ ಮನಸಿನಿಂದ ಅವರನ್ನು ಸ್ವಾಗತಿಸಿದ್ದಾರೆ. ನಾನು ಗೌರವ ಪೂರ್ವಕವಾಗಿ ಅವರನ್ನು ಸ್ವಾಗತಿಸುತ್ತಿದ್ದೇನೆ. ಅವರ ಹಿರಿತನಕ್ಕೆ ಪಕ್ಷದಲ್ಲಿ ಎಲ್ಲ ರೀತಿಯ ಗೌರವ ಸಲ್ಲುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್ ಅಶೋಶ್​ ಹಾಜರಿದ್ದರು.

ಇದನ್ನೂ ಓದಿ: 10 ವರ್ಷದ ಹಿಂದೆ ಕಸದ ಬುಟ್ಟಿಯಲ್ಲಿ ಬಿದ್ದಿದ್ದ ವರದಿಯನ್ನು ಈಗ ಸರ್ಕಾರಕ್ಕೆ ಸಲ್ಲಿಸಿದ್ದಾರೆ: ಶಾಮನೂರು ಶಿವಶಂಕರಪ್ಪ

ಬಿಜೆಪಿಯಿಂದ ನಮ್ಮ​ ಶಾಸಕರಿಗೆ 50 ಕೋಟಿ ರೂ. ಆಫರ್ - ಸಿಎಂ ಸಿದ್ದರಾಮಯ್ಯ(ಮೈಸೂರು): ಮತ್ತೊಂದೆಡೆ, "ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ಮಾಡುತ್ತಿದೆ. ನಮ್ಮ ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂ. ಆಫರ್ ಕೊಡುತ್ತಿದ್ದಾರೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರು ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಬಿಜೆಪಿಯವರು ಯಾವಾಗಲೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಎರಡು ಸಲ ಅಧಿಕಾರಕ್ಕೆ ಬಂದಿದ್ದಾರೆ. ಈಗಲೂ ಸರ್ಕಾರವನ್ನು ಬೀಳಿಸಲು ಪ್ರಯತ್ನ ಮಾಡುತ್ತಿದ್ದು, ಕಾಂಗ್ರೆಸ್‌ನ ಪ್ರತಿಯೊಬ್ಬ ಶಾಸಕರಿಗೆ ಬಿಜೆಪಿಯವರು 50 ಕೋಟಿ ರೂಪಾಯಿ ಆಫರ್ ನೀಡುತ್ತಿದ್ದಾರೆ. ಆದರೆ, ಕಾಂಗ್ರೆಸ್​ನ ಯಾವ ಶಾಸಕರೂ ಇದಕ್ಕೆ ಮಣಿದಿಲ್ಲ'' ಎಂದು ಹೇಳಿದ್ದಾರೆ.

Last Updated :Mar 2, 2024, 5:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.