ETV Bharat / state

12 ಅಮೃತ ಭಾರತ ನಿಲ್ದಾಣಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಪ್ರಧಾನಿ ಮೋದಿ

author img

By ETV Bharat Karnataka Team

Published : Feb 22, 2024, 10:35 AM IST

ಪಿಎಂ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೈಸೂರು ವಿಭಾಗದಲ್ಲಿ 12 ಅಮೃತ ಭಾರತ ನಿಲ್ದಾಣಗಳ ಶಂಕುಸ್ಥಾಪನೆ ಮಾಡಲಿದ್ದಾರೆ.

foundation stone laying ceremony of Amrit Bharat Stations
12 ಅಮೃತ ಭಾರತ ನಿಲ್ದಾಣಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಪ್ರಧಾನಿ ಮೋದಿ

ಕಡಬ (ದಕ್ಷಿಣ ಕನ್ನಡ)/ಮೈಸೂರು: ರಾಜ್ಯದಲ್ಲಿ ರೈಲು ಮೂಲಸೌಕರ್ಯವನ್ನು ನವೀಕರಿಸುವ ಸಲುವಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ದಾಖಲೆಯ 7,524 ಕೋಟಿ ರೂಪಾಯಿ ಹಣವನ್ನು ಬಿಡುಗಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇದೇ ಫೆಬ್ರವರಿ 26ರಂದು ಮಧ್ಯಾಹ್ನ 12:30 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೈಸೂರು ವಿಭಾಗದಲ್ಲಿ ಸುಮಾರು 12 ಅಮೃತ ಭಾರತ ನಿಲ್ದಾಣಗಳ ಶಂಕುಸ್ಥಾಪನೆ ಮಾಡಲಿದ್ದಾರೆ.

foundation stone laying ceremony of Amrit Bharat Stations
12 ಅಮೃತ ಭಾರತ ನಿಲ್ದಾಣಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಪ್ರಧಾನಿ ಮೋದಿ

ಫೆಬ್ರವರಿ 26, 2024 ರಂದು ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ರೋಡ್​ ರೈಲ್ವೆ ನಿಲ್ದಾಣ ಸೇರಿದಂತೆ ಇತರ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಬಿಎಸ್‌ಎಸ್ ಅಡಿ ಬಂಟ್ವಾಳ ರೈಲು ನಿಲ್ದಾಣ, ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ಬಳಿ ಶಂಕುಸ್ಥಾಪನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್ ಫಾರ್ಮ್ ಉನ್ನತೀಕರಣ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಜಿಲ್ಲೆಯ ಬಜೆಕೆರೆ ಹಾಲ್ಟ್ ರೈಲ್ವೆ ನಿಲ್ದಾಣದಲ್ಲಿ ಈ ಕೆಲಸಗಳ ಶಿಲಾನ್ಯಾಸ ಕಾರ್ಯ ನಡೆಯಲಿದೆ.

ಇದನ್ನೂ ಓದಿ: ಬಿಜೆಪಿ‌ ಕೇಂದ್ರ ನಾಯಕರ ಕಲಬುರಗಿ ಭೇಟಿ: ಎಂದೂ ಇಲ್ಲದ ಪ್ರೀತಿ ಈಗೇಕೆ ಎಂದು ಖರ್ಗೆ ಪ್ರಶ್ನೆ

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ, ಜಿಲ್ಲಾ ಉಸ್ತುವಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಕು. ಭಾಗೀರಥಿ ಮುರುಳ್ಯ, ಎಮ್​​ಎಲ್‌ಸಿ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ, ಎಸ್.ಎಲ್ ಭೋಜೇಗೌಡ, ಬಿ.ಎಂ ಫಾರೂಕ್, ಪ್ರತಾಪ್ ಸಿಂಹ ನಾಯಕ್ ಕೆ, ಕೆ ಹರೀಶ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಶ್ಯಂತ್, ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಇಒ ಭವಾನಿ ಶಂಕರ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮಿತಿ ಅಧ್ಯಕ್ಷ ಮೋಹನ್ ರಾಮ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿ ಡಾ. ನಿಂಗಯ್ಯ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಮೈಸೂರು ವಿಭಾಗದ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ತಾಯಿ - ಮಕ್ಕಳ ಆರೋಗ್ಯ ರಕ್ಷಣೆಗೆ 2 ನೂತನ ತಂತ್ರಜ್ಞಾನ ಅನುಷ್ಠಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.