ETV Bharat / state

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು - Horrific Road Accident

author img

By ETV Bharat Karnataka Team

Published : May 24, 2024, 5:45 PM IST

Updated : May 24, 2024, 6:07 PM IST

ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಮತ್ತು ಕೊಟ್ಟಿಗೆಹಾರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಮೃತರು ದೇವರ ದರ್ಶನಕ್ಕೆಂದು ಧರ್ಮಸ್ಥಳಕ್ಕೆ ತೆರಳಿದ್ದರು.

HORRIFIC ROAD ACCIDENT
ನಜ್ಜುಗುಜ್ಜಾದ ಕಾರು (ETV Bharat)

ಚಿಕ್ಕಮಗಳೂರು: ಲಾರಿಗೆ ಓಮಿನಿ ಮತ್ತು ಆಲ್ಟೋ ಕಾರುಗಳು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಮತ್ತು ಕೊಟ್ಟಿಗೆಹಾರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪ್ರೇಮಾ(58), ಹಂಪಯ್ಯ(65), ಮಂಜಯ್ಯ(60) ಪ್ರಭಾಕರ್(45) ಮೃತಪಟ್ಟವರು. ಮೃತರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಘಟನೆಯಲ್ಲಿ 12 ಮಂದಿಗೆ ಗಾಯವಾಗಿದ್ದು, ಗಾಯಳುಗಳಿಗೆ ಮೂಡಿಗೆರೆ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಓಮಿನಿ ಮತ್ತು ಆಲ್ಟೋ ಕಾರುಗಳು, ಮೂಡಿಗೆರೆ ಕಡೆಯಿಂದ ಬರುತ್ತಿದ್ದ ಮೆಸ್ಕಾಂ (ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ) ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 12 ಮಂದಿಗೆ ಗಾಯಗಳಾಗಿವೆ. ಮೃತರೆಲ್ಲರೂ ಚಿತ್ರದುರ್ಗ ಮತ್ತು ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದ್ದು, ಧರ್ಮಸ್ಥಳ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಕೊಟ್ಟಿಗೆಹಾರ ದಾಟಿ ಸ್ವಲ್ಪ ದೂರ ಬಂದಾಗ ವಾಹನವೊಂದನ್ನು ಓವರ್​ ಟೇಕ್​ ಮಾಡಿ ಸಾಗುವಾಗ ಎದುರಿನಿಂದ ಬರುತ್ತಿದ್ದ ಮೆಸ್ಕಾಂ ಲಾರಿಗೆ ಓಮಿನಿ ಡಿಕ್ಕಿ ಹೊಡೆದಿದ್ದು, ಹಿಂದಿನಿಂದ ಬರುತ್ತಿದ್ದ ಅದೇ ಕುಟುಂಬದ ಆಲ್ಟೋ ಕಾರು ಓಮಿನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಓಮಿನಿ ಕಾರು ನಜ್ಜು ಗುಜ್ಜಾಗಿದ್ದು ಓಮಿನಿಯಲ್ಲಿದ್ದ ಮೂವರು ಪುರುಷರು ಮತ್ತು ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ:

ಮಿನಿ ಬಸ್​ - ಟ್ರಕ್ ಮಧ್ಯೆ ಡಿಕ್ಕಿ: ವೈಷ್ಣೋದೇವಿಗೆ ಹೊರಟಿದ್ದ ಒಂದೇ ಕುಟುಂಬದ 7 ಜನ ಸಾವು - Mini Bus and Truck Collision

ಹಾವೇರಿ: ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬಿದ್ದ ಕಾರು, ನಾಲ್ವರು ಸಾವು, 6 ಮಂದಿಗೆ ಗಾಯ - Haveri Car Accident

Last Updated : May 24, 2024, 6:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.