ETV Bharat / state

ಬಳ್ಳಾರಿ: ಮಲಗಿರುವಾಗ ನಾಗರ ಹಾವು ಕಡಿದು 10ನೇ ತರಗತಿ ಬಾಲಕಿ ಸಾವು - GIRL DIES OF SNAKE BITE

ರಾತ್ರಿ ಮಲಗಿದ್ದಾಗ ಹಾವು ಕಡಿದು 15 ವರ್ಷದ ಬಾಲಕಿ ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನಲ್ಲಿ ನಡೆದಿದೆ.

girl-dies-after-being-bitten-by-cobra-while-sleeping-in-ballari
ಬಾಲಕಿಯ ಪೋಷಕರ ಆಕ್ರಂದನ, ಕೊಲ್ಲಲ್ಪಟ್ಟ ಹಾವು (ETV Bharat)
author img

By ETV Bharat Karnataka Team

Published : April 13, 2025 at 11:24 AM IST

1 Min Read

ಬಳ್ಳಾರಿ: ಮಲಗಿದ್ದಾಗ ನಾಗರ ಹಾವು ಕಡಿದು 10ನೇ ತರಗತಿ ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಬಳ್ಳಾರಿ ತಾಲೂಕಿನ ಹೊಸ ಮೋಕಾ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

15 ವರ್ಷದ ಬಾಲಕಿ ಶ್ರಾವಣಿ ಹಾವು ಕಡಿತದಿಂದ ಮೃತಪಟ್ಟವಳು. ಬಾಲಕಿಯು ಹೊಸ ಮೋಕಾ ಗ್ರಾಮದ ಲಕ್ಷ್ಮಣ ಹಾಗೂ ಶೇಕಮ್ಮ ದಂಪತಿಯ ಮಗಳಾಗಿದ್ದಳು. ಶ್ರಾವಣಿ ಮೋಕಾ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ರಾತ್ರಿ ಮಲಗಿರುವಾಗ ಬಾಲಕಿಗೆ ಮೂರು ಸಲ ನಾಗರ ಹಾವು ಕಚ್ಚಿದೆ. ಕೈ ಮತ್ತು ಕಾಲಿಗೆ ನಾಗರ ಹಾವು ಕಡಿದರೂ ಬಾಲಕಿಗೆ ಎಚ್ಚರವಾಗಿರಲಿಲ್ಲ. ಬಳಿಕ ನಿದ್ರೆಯಲ್ಲಿಯೇ ವಿಷವೇರಿ ಬಾಲಕಿ ಮೃತಪಟ್ಟಿದ್ದಾಳೆ. ಬೆಳಗ್ಗೆ ಪೋಷಕರು ಎದ್ದು, ಮಗಳನ್ನು ಎಬ್ಬಿಸಲು ಮುಂದಾದಾಗ ಆಕೆ ಸಾವನ್ನಪ್ಪಿರುವುದು ಗೊತ್ತಾಗಿದೆ.

ಈ ವೇಳೆ, ಪೋಷಕರು ಹುಡುಕಾಡಿದಾಗ ನಾಗರ ಹಾವು ಕೂಡ ಮನೆಯಲ್ಲಿ ಇರುವುದು ಕಂಡುಬಂದಿದೆ. ಬಳಿಕ ಅದನ್ನು ಹೊಡೆದು ಕೊಲ್ಲಲಾಗಿದೆ. ತೀವ್ರ ಬಡತನ ಹಿನ್ನೆಲೆಯಲ್ಲಿ ಹಳೆ ಮನೆಯಲ್ಲಿಯೇ ದಂಪತಿ ವಾಸವಿದ್ದರು. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಮೋಕಾ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ ಯತ್ನ : ಅವ್ವ ಗುಣಮುಖ, ಮಕ್ಕಳ ಸ್ಥಿತಿ ಗಂಭೀರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.