ETV Bharat / state

ಸರ್ಕಾರ ಬೀಳಿಸುವುದು ಅಸಾಧ್ಯದ ಮಾತು, ಬಿಜೆಪಿ ಶಾಸಕರೇ ನಮ್ಮ ಜೊತೆಗಿದ್ದಾರೆ: ಸಚಿವ ಎಂ.ಬಿ. ಪಾಟೀಲ್ - MB Patil

author img

By ETV Bharat Karnataka Team

Published : May 11, 2024, 1:51 PM IST

ನಮ್ಮ ಜೊತೆ ಬಿಜೆಪಿ ಶಾಸಕರಿದ್ದಾರೆ. ಕೆಲ ಲೀಡರ್ಸ್​ಗಳು ನಮ್ಮನ್ನು ಸೇರಿಸಿಕೊಳ್ಳಿ ಅಂತಾ ಕೇಳುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

ಸಚಿವ ಎಂ.ಬಿ.ಪಾಟೀಲ್
ಸಚಿವ ಎಂ.ಬಿ.ಪಾಟೀಲ್ (ETV Bharat)

ಬೆಂಗಳೂರು: ಸರ್ಕಾರ ಬೀಳಿಸುವುದು ಅಸಾಧ್ಯವಾದ ಮಾತು. ಬಿಜೆಪಿಯ ಶಾಸಕರೇ ನಮ್ಮ‌ ಜೊತೆ ಇದ್ದಾರೆ. ಜೆಡಿಎಸ್​​ನಲ್ಲಿರುವವರು ಅತಂತ್ರರಾಗಿದ್ದಾರೆ. ಲೀಡರ್ಸ್​ಗಳು ನಮ್ಮನ್ನು ಸೇರಿಸಿಕೊಳ್ಳಿ ಅಂತ ಕೇಳುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದರು.

ಸದಾಶಿವ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಕೆಲವೇ ತಿಂಗಳುಗಳಲ್ಲಿ ಸರ್ಕಾರ ಬೀಳುತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ರಾಜಕೀಯ ಹೇಳಿಕೆ ಅಷ್ಟೇ. ಈ ಸರ್ಕಾರ ಬೀಳಿಸಬೇಕಾದ್ರೆ 60 ಶಾಸಕರು ಬೇಕು. ಇಬ್ಬರಿಂದ ನಾಲ್ಕು ಶಾಸಕರನ್ನ ಕರೆದುಕೊಂಡು ಬರಲಿ. ಬಿಜೆಪಿಯ ಶಾಸಕರೇ ನಮ್ಮೊಂದಿಗಿದ್ದಾರೆ. ಜೆಡಿಎಸ್​ನವರು ಅತಂತ್ರರಾಗಿದ್ದಾರೆ ಎಂದು ತಿಳಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೊಡ್ಡವರೇ ನಮ್ಮ ಹಿಂದೆ ಇದ್ದಾರೆ ಎಂಬ ದೇವರಾಜೇಗೌಡ ಹೇಳಿಕೆ‌ ವಿಚಾರವಾಗಿ ಪ್ರತಿಕ್ರಿಯಿಸಿ, ಈಗ ಎಸ್​​ಐಟಿ‌ ರಚನೆ ಆಗಿದೆ. ಸಚಿವನಾಗಿ ನಾನು ಏನನ್ನೂ ಮಾತನಾಡಲು ಬಯಸಲು ಒಪ್ಪಲ್ಲ. ಎಸ್​​ಐಟಿ ತನ್ನ ಕೆಲಸ ಮಾಡುತ್ತೆ ಎಂದರು.

ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಅಂತ ಹೆಚ್​ಡಿಕೆ ರಾಜ್ಯಪಾಲರ ಭೇಟಿ ವಿಚಾರವಾಗಿ ಮಾತನಾಡಿ, ಕ್ಲೀನ್ ಚೀಟ್ ಕೊಡೋಕಾ?. ವಾಷಿಂಗ್ ಮಷನ್​​ಗೆ ಹಾಕೋಕಾ? ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ನಾವು ಕನಿಷ್ಠ 20 ಸ್ಥಾನ ಗೆಲ್ಲಲಿದ್ದೇವೆ. ಊಹೆ ಮಾಡಲಾರದಷ್ಟು ಅಂಡರ್ ಕರೆಂಟ್ ಆಗಿದೆ. ಮಹಿಳೆಯರು, ಬಡ ಕುಟುಂಬದವರು ಕಾಂಗ್ರೆಸ್​ಗೆ ಒಲವು ತೋರಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ನಾವು ಗೆಲ್ಲುತ್ತೇವೆ. ಒಂದು ಲಕ್ಷ ಲೀಡ್​​ನಲ್ಲಿ ನಾವು ಜಯ ಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಜ್ವಲ್ ಹಾಗೂ ರೇವಣ್ಣ ಅವರನ್ನೇ ಟಾರ್ಗೆಟ್ ಮಾಡಿರುವುದು ಏಕೆ?: ಸರ್ಕಾರದ ವಿರುದ್ಧ ಹೆಚ್​ಡಿಕೆ ಕಿಡಿ - H D Kumaraswamy

ಕೇಂದ್ರ ಸರ್ಕಾರವನ್ನು ನಾವು 18 ಸಾವಿರ ಕೋಟಿ ರೂ. ಪರಿಹಾರ ಕೇಳಿದ್ದೆವು. ಅದರೆ ಅವರು 3,400 ಕೋಟಿ ರೂ. ಮಾತ್ರ ಕೊಟ್ಟಿದ್ದಾರೆ. ಈಗಾಗಲೇ ಬಂದ ಹಣ 3,000 ರೈತರ ಖಾತೆಗೆ ಹಾಕಲಾಗುತ್ತಿದೆ. ಉಳಿದ ಹಣವನ್ನು ಕೇಂದ್ರ ಕೊಡಬೇಕಿದೆ. ಇಲ್ಲದೇ ಹೋದ್ರೆ ನಾವು ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.

ಲೋಕಸಭೆ ಫಲಿತಾಂಶ ಬಳಿಕ ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದನ್ನು ಪಕ್ಷ ತೀರ್ಮಾನ ಮಾಡುತ್ತೆ. ಕಾಲ ಕಾಲಕ್ಕೆ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಏನೇನು ಮಾಡಬೇಕು ಅಂತ ಹೈಕಮಾಂಡ್ ನಿರ್ಧರಿಸಲಿದೆ ಎಂದರು.

ಇದನ್ನೂ ಓದಿ: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರೆಯುತ್ತೆ: ಬಿ ಎಸ್​ ಯಡಿಯೂರಪ್ಪ - JDS BJP Alliance Continue

ETV Bharat Logo

Copyright © 2024 Ushodaya Enterprises Pvt. Ltd., All Rights Reserved.