ETV Bharat / state

ಮಹಿಳೆ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ ಮೊರೆ ಹೋದ ಹೆಚ್‌.ಡಿ.ರೇವಣ್ಣ - H D Revanna

author img

By ETV Bharat Karnataka Team

Published : May 3, 2024, 5:10 PM IST

H D Revanna
ಹೆಚ್​.ಡಿ.ರೇವಣ್ಣ (File Photo)

ಮಾಜಿ ಸಚಿವ ಹೆಚ್​.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದಲ್ಲಿ ದಾಖಲಾಗಿದ್ದ ಎಫ್​ಐಆರ್​ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ನಿರಾಳರಾಗಿದ್ದ ಮಾಜಿ ಸಚಿವ ಹೆಚ್​.ಡಿ.ರೇವಣ್ಣ, ಇದೀಗ ಮಹಿಳೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಕೆ.ಆರ್​.ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿರುವ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್​ ಗಜಾನನ ಭಟ್ ಅವರು​ ಮುಂದಿನ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದ್ದಾರೆ.

ಇದನ್ನೂ ಓದಿ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್​ ಡಿ ರೇವಣ್ಣ - HD Revanna Case

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಕೆ.ಆರ್.ನಗರ ಪೊಲೀಸ್​​ ಠಾಣೆಯ ಎಫ್ಐಆರ್​ ಅನ್ನು ಓದಿದರು. ಅಲ್ಲದೆ, ಈ ಎಫ್​ಐಆರ್​ನಲ್ಲಿ ಜಾಮೀನುರಹಿತ ಸೆಕ್ಷನ್​ಗಳಿವೆ. 364 A, ಅಪಹರಣ, 364 ಅಕ್ರಮ ಬಂಧನ ಜಾಮೀನು ರಹಿತವಾಗಿವೆ. ಆದರೆ, ದೂರಿನಲ್ಲಿ ನಾಪತ್ತೆಯಾಗಿರುವ ಮಹಿಳೆಯ ಹೆಸರನ್ನು ಉಲ್ಲೇಖಿಸಿಲ್ಲ. ಈ ಪ್ರಕರಣದಲ್ಲಿ ಬಂಧನ ಭೀತಿಯಿದೆ. ಅಲ್ಲದೆ, ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಶನಿವಾರ ವಿಚಾರಣೆಗೆ ಹಾಜರಾಗಲು ಅರ್ಜಿದಾರರು ಸಿದ್ಧರಿದ್ದಾರೆ. ಆದ್ದರಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು'' ಎಂದು ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಪೀಠ, ಎಸ್ಐಟಿ ಪರ ಎಸ್​​​ಪಿಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ: ಹೆಚ್​.ಡಿ.ರೇವಣ್ಣ ವಿರುದ್ಧ ಮತ್ತೊಂದು ಎಫ್​​ಐಆರ್: ಅಪಹರಣದ ದೂರು ದಾಖಲಿಸಿದ ಮಹಿಳೆಯೊಬ್ಬರ ಪುತ್ರ - Hassan Pen Drive Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.