ETV Bharat / state

ಹಂಪಿ ವಿರೂಪಾಕ್ಷ, ಪಂಪಾಂಬಿಕೆ ದೇವಿ ಮಹಾರಥೋತ್ಸವ; ಚಂದ್ರಮೌಳೇಶ್ವರ ಸಣ್ಣ ರಥೋತ್ಸವ - HAMPI RATHOTSAVA

ವಿಜಯನಗರದಲ್ಲಿ ಶನಿವಾರ ಸಂಜೆ ಚಂದ್ರಮೌಳೇಶ್ವರನ ಜೊತೆ ವಿದ್ಯಾರಣ್ಯ ಭಾರತಿ ಸ್ವಾಮೀಜಿ ರಥ ಏರಿದರು. ಏಕಕಾಲದಲ್ಲಿ ಹಂಪಿ ವಿರೂಪಾಕ್ಷೇಶ್ವರ ಮತ್ತು ಪಂಪಾಂಬಿಕಾ ದೇವಿ ಮಹಾರಥೋತ್ಸವ ಕೂಡ ಜರುಗಿತು.

HAMPI JATRE  VIJAYANAGARA  ಹಂಪಿ ವಿರೂಪಾಕ್ಷೇಶ್ವರ  ಚಂದ್ರಮೌಳೇಶ್ವರ ರಥೋತ್ಸವ
ಹಂಪಿ ಮಹಾರಥೋತ್ಸವ (ETV Bharat)
author img

By ETV Bharat Karnataka Team

Published : April 13, 2025 at 9:46 AM IST

1 Min Read

ವಿಜಯನಗರ: ಐತಿಹಾಸಿಕ ಹಂಪಿ ವಿರೂಪಾಕ್ಷೇಶ್ವರ ಮತ್ತು ಪಂಪಾಂಬಿಕಾ ದೇವಿಯರ ಭವ್ಯ ಮಹಾರಥೋತ್ಸವ ಮತ್ತು ಚಂದ್ರಮೌಳೇಶ್ವರ ಸಹಿತ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರಿದ್ದ ಸಣ್ಣ ರಥೋತ್ಸವವು ಶನಿವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ಹೈದರಾಬಾದ್‌ನ ನಿಜಾಮ ಕಾಣಿಕೆಯಾಗಿ ನೀಡಿದ ಕಿರೀಟ ತೊಟ್ಟು, ಗೌನು ಧರಿಸಿ ಚಂದ್ರಮೌಳೇಶ್ವರನ ಜೊತೆಗೆ ಚಿಕ್ಕ ರಥ ಏರಿದರೆ, ವಿರೂಪಾಕ್ಷ-ಪಂಪಾಂಬಿಕೆಯರ ಉತ್ಸವ ಮೂರ್ತಿಗಳು ದೊಡ್ಡ ರಥದಲ್ಲಿ ರಾರಾಜಿಸಿದವು.

ಹಂಪಿ ವಿರೂಪಾಕ್ಷ, ಪಂಪಾಂಬಿಕೆ ದೇವಿ ಮಹಾರಥೋತ್ಸವ (ETV Bharat)

ದೇವಸ್ಥಾನದ ಪಟ್ಟದ ಆನೆಯ ಮುಂದಾಳತ್ವದಲ್ಲಿ ಜೋಡಿ ರಥಗಳು ಒಂದರ ಹಿಂದೆ ಮತ್ತೊಂದರಂತೆ ಸಾಗಿದಾಗ ಭಕ್ತರು ಹರ್ಷೋದ್ಗಾರ ಮುಗಿಲು ಮುಟ್ಟಿತು. ರಥಗಳಿಗೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಭಾವದಿಂದ ಪ್ರಾರ್ಥಿಸಿದರು.

HAMPI JATRE  VIJAYANAGARA  ಹಂಪಿ ವಿರೂಪಾಕ್ಷೇಶ್ವರ  ಚಂದ್ರಮೌಳೇಶ್ವರ ರಥೋತ್ಸವ
ಚಂದ್ರಮೌಳೇಶ್ವರನ ಜೊತೆ ಚಿಕ್ಕ ರಥೋತ್ಸವ (ETV Bharat)

ವಿಜಯನಗರ ಸಾಮ್ರಾಜ್ಯದ ಪತನದ ನಂತರವೂ ಆನೆಗುಂದಿಯಲ್ಲಿ ಸಾಮಂತ ಅರಸರ ಆಳ್ವಿಕೆ ಮುಂದುವರೆದಿತ್ತು. ಆ ಮನೆತನದವರು ಈಗಲೂ ಇರುವ ಕಾರಣ ರಥೋತ್ಸವದ ದಿನ ಬೆಳಗ್ಗೆ ವಿರೂಪಾಕ್ಷ ದೇವಸ್ಥಾನಕ್ಕೆ ಪೂರ್ವಾಭಿಮುಖವಾಗಿ ಪ್ರವೇಶಿಸಿ, ವಿದ್ಯಾರಣ್ಯ ಗುರುಗಳಿಗೆ ಕಿರೀಟ ತೊಡಿಸುವ ಹಾಗೂ ಮಡಿ ತೇರು ಎಳೆಯುವ ಸಂಪ್ರದಾಯ ನಡೆಯುತ್ತಿದೆ.

ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿದ ಭವ್ಯ ಮಹಾರಥೋತ್ಸವ (ETV Bharat)

ಬೆಳಗ್ಗೆ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ಬುಕ್ಕದೇವರಾಯ ಕೊಟ್ಟಂತಹ ಕಿರೀಟ ಧರಿಸಿ ಬ್ರಹ್ಮರಥೋತ್ಸವ ಶಾಸ್ತ್ರ ನೆರವೇರಿಸಿದ್ದರು. ಮ್ಯಾಸಕೇರಿಯವರಿಗೆ ರಥದ ಸನ್ನೆ ಹಿಡಿಯುವ ಹೊಣೆ ಸಿಕ್ಕಿತ್ತು. ಹೀಗಾಗಿ, ಹತ್ತಾರು ಸಂಖ್ಯೆಯಲ್ಲಿದ್ದ ಕೇರಿಯ ಯುವಕರು ತಮಟೆ ಸದ್ದಿಗೆ ಹೆಜ್ಜೆ ಹಾಕುತ್ತ ಸಂಭ್ರಮಿಸಿದರು.

ದೊಡ್ಡ ರಥದಲ್ಲಿ ರಾರಾಜಿಸಿದ ಉತ್ಸವ ಮೂರ್ತಿಗಳು (ETV Bharat)

ಚಿನ್ನದ ಮುಖವಾಡ, ಕಿರೀಟ: ವಿರೂಪಾಕ್ಷನಿಗೆ ವಿಶೇಷ ಸಂದರ್ಭಗಳಲ್ಲಿ ಮಾತ್ರ ತೊಡಿಸುವ ಚಿನ್ನದ ಮುಖವಾಡ, ಕಿರೀಟ ಕಂಡು ಭಕ್ತರು ಪುಳಕಿತಗೊಂಡರು. ವಿಜಯನಗರದ ಅರಸ ಕೃಷ್ಣದೇವರಾಯ ಮಾಡಿಸಿದ್ದೆನ್ನಲಾದ ಈ ಕಿರೀಟ 6 ಕೆ.ಜಿ. ತೂಕವಿದ್ದು, ಮಹಾಶಿವರಾತ್ರಿ, ರಥೋತ್ಸವ ಸಹಿತ ವಿಶೇಷ ಸಂದರ್ಭಗಳಲ್ಲಿ ಮಾತ್ರ ತೊಡಿಸಲಾಗುತ್ತದೆ. ಇತರ ದಿನಗಳಲ್ಲಿ ಇದು ಲಾಕರ್‌ನಲ್ಲಿರುತ್ತದೆ. ಹಂಪಿಯ ವಿದ್ಯಾರಣ್ಯ ಮಹಾಸ್ವಾಮೀಜಿ ಅವರು ಶಿವನಿಗೆ ಅಭಿಷೇಕ ಮಾಡಿ ಚಿನ್ನದ ಕವಚ ತೊಡಿಸಿದರು.

ಜಾತ್ರೆಗೆ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಕೇರಳದಿಂದಲೂ ಭಕ್ತರು ಆಗಮಿಸಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಭಕ್ತಸಾಗರದ ಮಧ್ಯೆ ಜೋಡಿ ರಥೋತ್ಸವ ನೆರವೇರಿತು. ಜಾತ್ರೆಗೆ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.

ಹರಕೆ ಹೊತ್ತವರು ಭಕ್ತರಿಗೆ ಅಲ್ಲಲ್ಲಿ ಮಜ್ಜಿಗೆ, ಪಾನಕ, ಕಬ್ಬಿನ ಹಾಲು ವಿತರಣೆಗೆ ವ್ಯವಸ್ಥೆ ಮಾಡಿದ್ದರು. ಜಾತ್ರೆಗೆ ಬಂದವರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಕೂಡ ಇತ್ತು.

ಇದನ್ನೂ ಓದಿ: ಬೀದರ್​​ ಜಿಲ್ಲೆಯಾದ್ಯಂತ ಹನುಮ ಜಯಂತಿ ಸಂಭ್ರಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.