ETV Bharat / state

ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಆರೋಪ: ತಹಶೀಲ್ದಾರ್​ ನೋಟಿಸ್​ ಪ್ರಶ್ನಿಸಿ ಹೈಕೋರ್ಟ್​ಗೆ ಹೆಚ್​ಡಿಕೆ ಅರ್ಜಿ - KUMARASWAMY LAND ENCROACHMENT CASE

ಕೇತಗಾನಹಳ್ಳಿ ಬಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಸಂಬಂಧ ತಹಶೀಲ್ದಾರ್​ ನೀಡಿರುವ ನೋಟಿಸ್ ಪ್ರಶ್ನಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೈಕೋಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : March 24, 2025 at 8:48 PM IST

2 Min Read

ಬೆಂಗಳೂರು: ಬಿಡದಿಯ ಕೇತಗಾನಹಳ್ಳಿ ಬಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಸಂಬಂಧ ತಹಶೀಲ್ದಾರ್​ ನೀಡಿರುವ ನೋಟಿಸ್ ಪ್ರಶ್ನಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೈಕೋಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಸುಮಾರು 6 ಎಕರೆ ಒತ್ತುವರಿ ಸಂಬಂಧ ಸ್ಥಳೀಯ ತಹಶೀಲ್ದಾರ್ ನೀಡಿರುವ ನೋಟಿಸ್ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂತಿ ಎನ್.ಎಸ್. ಸಂಜಯಗೌಡ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಅಧಿಕಾರ ವ್ಯಾಪ್ತಿ ಇಲ್ಲದಿದ್ದರೂ ತಹಶೀಲ್ದಾರ್ ಅರ್ಜಿದಾರರಿಗೆ ನೋಟಿಸ್ ನೀಡಿದ್ದಾರೆ. 1985ರಲ್ಲಿಯೇ ಕ್ರಯ ಪತ್ರವಾಗಿರುವ ಜಮೀನಿಗೆ ಈಗ ನೋಟಿಸ್ ನೀಡಲಾಗಿದೆ. ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಲಾಗಿದೆ. ಹಾಗಾಗಿ ತಹಶೀಲ್ದಾರ್ ನೋಟಿಸ್​ಗೆ ತಡೆ ನೀಡಬೇಕು ಎಂದು ಕೋರಿದರು.

ಇದಕ್ಕೆ ಸರ್ಕಾರದ ಪರ ವಕೀಲರು, ಆಕ್ಷೇಪ ವ್ಯಕ್ತಪಡಿಸಿ 2025ರ ತಿದ್ದುಪಡಿಯನ್ವಯ ತಹಶೀಲ್ದಾರ್​ಗೆ ಅಧಿಕಾರವಿದೆ, ಹಾಗಾಗಿಯೇ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ವಾದ ಮಂಡಿಸಿದರು. ಅಲ್ಲದೇ, ಆ ಕುರಿತು ದಾಖಲೆ ಸಲ್ಲಿಸಲು ಕಾಲಾವಕಾಶ ಕೋರಿದರು.

ಇದಕ್ಕೆ ಕುಮಾರಸ್ವಾಮಿ ಪರ ವಕೀಲರು, ತಹಶೀಲ್ದಾರ್ ನೋಟಿಸ್ ಆಧರಿಸಿ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸುವ ಸಾಧ್ಯತೆ ಇದೆ. ಹಾಗಾಗಿ ಮಧ್ಯಂತರ ರಕ್ಷಣೆ ನೀಡಬೇಕೆಂದು ಕೋರಿದರು.

ಅದಕ್ಕೆ ಸರ್ಕಾರದ ಪರ ವಕೀಲರು, ಮಾರ್ಚ್ 27ರವರೆಗೂ ಅರ್ಜಿದಾರರ ವಿರುದ್ಧ ಯಾವುದೇ ವಿಧವಾದ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿದರು. ಆ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಮಾ.27ಕ್ಕೆ ನಿಗದಿಪಡಿಸಿತು.

ಪ್ರಕರಣದ ಹಿನ್ನೆಲೆ: ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿ ಡಿ.ಸಿ.ತಮ್ಮಣ್ಣ ಮತ್ತಿತರರು ಕೇತಗಾನಹಳ್ಳಿಯಲ್ಲಿ 14 ಎಕರೆ ಭೂಮಿಯನ್ನು ಒತ್ತುವರಿ ಮಾಡಿದ್ದಾರೆಂಬ ಆರೋಪವಿದೆ.

ಈ ಸಂಬಂಧ ಲೋಕಾಯುಕ್ತ ನೀಡಿದ್ದ ವರದಿಯನ್ನು ಜಾರಿಗೊಳಿಸಲು ಹೈಕೋರ್ಟ್ ಆದೇಶ ನೀಡಿದ್ದರೂ ಅದನ್ನು ಪಾಲನೆ ಮಾಡಿಲ್ಲವೆಂದು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ್ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಆಲಿಸಿದ ಹೈಕೋರ್ಟ್ ವಿಭಾಗೀಯಪೀಠ ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು. ಆ ನಂತರ ಜಮೀನಿನ ಸರ್ವೇ ಕಾರ್ಯ ನಡೆಸಿದ ಸ್ಥಳೀಯ ತಹಶೀಲ್ದಾರ್, ಹೆಚ್​ಡಿಕೆ ಮತ್ತಿತರರಿಗೆ ಕಾನೂನಿನ್ವಯ ನೋಟಿಸ್ ಜಾರಿಗೊಳಿಸಿದ್ದಾರೆ. ಅದನ್ನು ಪ್ರಶ್ನಿಸಿ ಹೆಚ್​ಡಿಕೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: ಬಿಡದಿಯಲ್ಲಿ ಹೆಚ್​ ಡಿ ಕುಮಾರಸ್ವಾಮಿ ತೋಟದ ಮನೆ ಸುತ್ತ ಮುಂದುವರೆದ ಸರ್ವೇ ಕಾರ್ಯ

ಇದನ್ನೂ ಓದಿ: ಕೇತಗಾನಹಳ್ಳಿ ಗ್ರಾಮದಲ್ಲಿನ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಎಸ್ಐಟಿ ರಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.