ETV Bharat / state

ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳದ ಜೊತೆಗೆ ಬಿಸಿಗಾಳಿ ಬೀಸುವ ಆತಂಕ: ಈ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಉಷ್ಣಾಂಶ

author img

By ETV Bharat Karnataka Team

Published : Mar 4, 2024, 7:30 PM IST

ಉತ್ತರ ಕನ್ನಡ, ದಕ್ಷಿಣ ಕನ್ನಡ, ಮತ್ತು ವಿಜಯಪುರ, ಯಾದಗಿರಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳದ ಜೊತೆಗೆ ಬಿಸಿಗಾಳಿ ಬೀಸುವ ಆತಂಕ: ಈ ಜಿಲ್ಲೆಗಳಲ್ಲಿ ವಾಡಿಕೆಕ್ಕಿಂತ ಹೆಚ್ಚು ಉಷ್ಣಾಂಶ
heatwaves-alert-in-these-districts-of-karnataka

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿರುವ ನಡುವೆ ಪ್ರಸಕ್ತ ತಿಂಗಳು ಅಥವಾ ಏಪ್ರಿಲ್‌ನಲ್ಲಿಯೇ ಬಿಸಿಗಾಳಿ ಬೀಸುವ ಆಂತಕ ಎದುರಾಗಿದೆ. ಸಾಮಾನ್ಯವಾಗಿ ಬೇಸಿಗೆಗಾಲ ಮಾರ್ಚ್‌ನಿಂದ ಆರಂಭವಾಗಿ ಮೇ ತಿಂಗಳವರೆಗೆ ಇರುತ್ತದೆ. ಆದರೆ ಈ ಬಾರಿ ವಾಡಿಕೆಗಿಂತ ಮುನ್ನವೇ ಬೇಸಿಗೆ ಶುರುವಾಗಿದೆ. ಏಪ್ರಿಲ್‌ನಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್‌ನಲ್ಲಿಯೇ ಅಧಿಕವಾಗಿದೆ. ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲಿನ ಬೇಗೆ ಹೆಚ್ಚಾಗುತ್ತಿತ್ತು. ಆದರೆ ಫೆಬ್ರವರಿಯಲ್ಲೇ ಸುಡು ಬಿಸಿಲು ಕಾಣಿಸಿಕೊಂಡಿತ್ತು.

ಕರ್ನಾಟಕದ ಹೆಚ್ಚಿನ ಪ್ರದೇಶಗಳು ಶುಷ್ಕ ಮತ್ತು ಅರೆ ಶುಷ್ಕ ಸ್ಥಿತಿಯಲ್ಲಿ ಇರುವ ಕಾರಣ ಹೆಚ್ಚು ಬಿಸಿಲು ಕಾಣಿಸಿಕೊಂಡಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಉಷ್ಣಾಂಶ ಉಂಟಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಬೀಸಿಗಾಳಿ ಬೀಸುವ ಸಾಧ್ಯತೆ ಕಡಿಮೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಬಿಸಿಲ ಬೇಗೆಯಿಂದ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ: ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ವಾಡಿಕೆಗಿಂತ ಹೆಚ್ಚು ಉಷ್ಣಾಂಶ ದಾಖಲಾಗುತ್ತಿರುವುದರಿಂದ ಜನರ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ತಾಪಮಾನ ಹೆಚ್ಚಿದಂತೆ ಜನರಿಗೆ ಊತ, ತಲೆನೋವು, ವಾಕರಿಕೆ, ನಿರ್ಜಲೀಕರಣ, ಸುಸ್ತು, ವಾಂತಿ ಮತ್ತು ಬೆವರು ಸೇರಿ ಇತರ ಆರೋಗ್ಯ ಸಮಸ್ಯೆಗಳು ಕಾಡಲಿವೆ. ಜ್ವರ (102 ಡಿಗ್ರಿ) ಕಾಣಿಸಿಕೊಳ್ಳಬಹುದು. ತೀವ್ರವಾದ ಜ್ವರ (104 ಡಿಗ್ರಿ) ಬಂದರೆ ಪ್ರಜ್ಞೆ ತಪ್ಪಿ ಬೀಳುವ ಅಪಾಯ ಜತೆಗೆ ಕೋಮಾಕ್ಕೂ ಹೋಗಬಹುದು. ಆದ್ದರಿಂದ, ಬಿಸಿಲಿನಲ್ಲಿ ಹೆಚ್ಚು ಓಡಾಡ ಬಾರದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮನೆ ಇಲ್ಲದೇ ಬೀದಿಯಲ್ಲಿ ಮಲಗುವ ನಿರಾಶ್ರಿತರು. ಆಟೋ ಚಾಲಕರು, ಸಂಚಾರ ಪೊಲೀಸರು. ರೈತರು, ಕಟ್ಟಡ ಮತ್ತು ರಸ್ತೆ ನಿರ್ಮಾಣ ಕಾರ್ಮಿಕರು ಎಚ್ಚರವಹಿಸಬೇಕಿದೆ. ಬಿಸಿಲಿನ ಪ್ರಖರತೆ ಹೆಚ್ಚಾಗಿ ಇದ್ದಾಗ ವಯಸ್ಸಾದವರು ಹೊರಗಡೆ ಓಡಾಡಬಾರದು. ಹೊರಗಡೆ ತೆರಳುವಾಗ ಛತ್ರಿ, ನೀರಿನ ಬಾಟಲ್ ತೆಗೆದುಕೊಂಡು ಹೋಗಬೇಕು. ವಿಶೇಷವಾಗಿ ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ನಿರ್ಮಾಣ ಹಂತದ ಕಾಮಗಾರಿ ನಡೆಸುವುದನ್ನು ನಿಲ್ಲಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Explained: ಹವಾಮಾನ ಬದಲಾವಣೆ, ಸಂಭಾವ್ಯ ಪರಿಹಾರೋಪಾಯಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.