ETV Bharat / state

ಓಲಾ, ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಜೂನ್ 15ರ ವರೆಗೆ ವಿಸ್ತರಿಸಿದ ಹೈಕೋರ್ಟ್ - HIGH COURT ON TAXI SERVICES

ಓಲಾ, ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಪೀಠ, ಸೇವೆ ಮುಂದುವರಿಸಲು ಆದೇಶಿಸಿದೆ.

HIGH COURT
ಹೈಕೋರ್ಟ್ (ETV Bharat)
author img

By ETV Bharat Karnataka Team

Published : April 29, 2025 at 5:49 PM IST

1 Min Read

ಬೆಂಗಳೂರು: ಓಲಾ, ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ರಾಜ್ಯದಲ್ಲಿ ಜೂನ್‌ 15ರ ವರೆಗೂ ವಿಸ್ತರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಬೈಕ್‌ ಟ್ಯಾಕ್ಸಿ ಸೇವೆಯನ್ನುರಾಜ್ಯದಲ್ಲಿ ಮುಂದುವರೆಸಲು ನಿರ್ದೇಶನ ಕೋರಿ ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್‌ ಲಿಮಿಟೆಡ್, ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸ್‌ ಲಿಮಿಟೆಡ್(ರ‍್ಯಾಪಿಡೋ), ಎನ್‌ಐ ಟಕ್ನಾಲಜಿ ಪ್ರೈವೇಟ್‌ ಲಿಮಿಟೆಡ್(ಓಲಾ), ವರ್ಕುಟಿ ಮಹೇಂದ್ರ ರೆಡ್ಡಿ(ಬೈಕ್‌ ಟ್ಯಾಕ್ಸಿಗಳ ಮಾಲೀಕರು) ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಂಪ್ರಸಾದ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕರ್ನಾಟಕ ರಾಜ್ಯದಲ್ಲಿ ಸುಮಾರು ಆರು ಲಕ್ಷಕ್ಕೂ ಹೆಚ್ಚು ಮಂದಿ ಬೈಕ್ ಟ್ಯಾಕ್ಸಿಗಳ ಮೂಲಕ ಜೀವನ ರೂಪಿಸಿಕೊಂಡಿದ್ದಾರೆ. ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಿರುವುದರಿಂದ ಅವರ ಬದುಕು ಸಂಕಷ್ಟಕ್ಕೆ ಸಿಲುಕಿದೆ.

ಅಲ್ಲದೆ, ದೇಶದ ಹಲವು ರಾಜ್ಯ ಸರ್ಕಾರಗಳು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ನಿಯಮಗಳನ್ನು ರೂಪಿಸಿವೆ. ಆದರೆ, ರಾಜ್ಯದಲ್ಲಿ ಈವರೆಗೆ ಯಾವುದೇ ನಿಯಮಗಳನ್ನು ರೂಪಿಸಿಲ್ಲ. ಹೀಗಾಗಿ ಹೈಕೋರ್ಟ್ ಈ ಹಿಂದೆ ನೀಡಿದ್ದ ಕಾಲಾವಕಾಶ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಪೀಠ, ಬೈಕ್ ಟ್ಯಾಕ್ಸಿಗಳನ್ನು ಸೇವೆಯನ್ನು ಜೂನ್ 15ರ ವರೆಗೂ ನಡೆಸಲು ವಿಸ್ತರಣೆ ಮಾಡಿ ವಿಚಾರಣೆ ಮುಂದೂಡಿತು. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ನಿರ್ವಹಣೆಗೆ ಮಾರ್ಗಸೂಚಿಗಳನ್ನು ರಚನೆ ಮಾಡಿಲ್ಲದ ಪರಿಣಾಮ ಎಲ್ಲ ರೀತಿ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಹೈಕೋರ್ಟ್‌ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಇದೀಗ ಮತ್ತೆ ಹೈಕೋರ್ಟ್‌ಗೆ ಪ್ರಶ್ನೆ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ: ಮೋಟಾರು ವಾಹನ ಕಾಯ್ದೆಯ ನಿಯಮಗಳ ಪ್ರಕಾರವಾಗಿ ಹಳದಿ ನೋಂದಣಿ ಫಲಕ(ಎಲ್ಲೋ ಬೋರ್ಡ್) ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್ ಟ್ಯಾಕ್ಸಿಗೆ ಅನುತಿ ನೀಡಬೇಕು ಎಂಬುದಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಬೈಕ್‌ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು.

ಇದನ್ನೂ ಓದಿ: ಮುಂದಿನ 6 ವಾರಗಳಲ್ಲಿ ಓಲಾ, ಉಬರ್‌- ರ್‍ಯಾಪಿಡೋ ಬೈಕ್​ ಸೇವೆ ಸ್ಥಗಿತಗೊಳಿಸಲು ಹೈಕೋರ್ಟ್‌ ನಿರ್ದೇಶನ - HIGH COURT DIRECTS OLA UBER BIKE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.