ETV Bharat / state

ಮುಡಾ ಕೇಸ್​​ ಸಿಬಿಐಗೆ ಕೋರಿ ಸ್ನೇಹಿಮಯಿ ಕೃಷ್ಣ ಮೇಲ್ಮನವಿ: ಸಿದ್ದರಾಮಯ್ಯ, ಇತರರಿಗೆ ಹೈಕೋರ್ಟ್‌ ನೋಟಿಸ್ - NOTICE TO SIDDARAMAIAH AND OTHERS

ಮುಡಾ ಪ್ರಕರಣದ ಸಿಬಿಐ ತನಿಖೆಗೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ಸಿಎಂ ಸಿದ್ದರಾಮಯ್ಯ, ಮತ್ತಿತರರಿಗೆ ಹೈಕೋರ್ಟ್‌ ನೋಟಿಸ್ ಜಾರಿಗೊಳಿಸಿದೆ.

high-court-issues-notice-to-cm-siddaramaiah-and-others-in-muda-case
ಹೈಕೋರ್ಟ್‌, ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : April 16, 2025 at 2:01 PM IST

2 Min Read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ಸಂಬಂಧ ಹೈಕೋರ್ಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರಿಗೆ ನೋಟಿಸ್‌ ಜಾರಿ ಮಾಡಿದೆ.

ಮುಡಾ ಹಗರಣವನ್ನು ಸಿಬಿಐ ಇಲ್ಲವೇ, ಇತರ ಸ್ವತಂತ್ರ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.

ಅಲ್ಲದೇ, ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಕೇಂದ್ರ ಸರ್ಕಾರ, ಸಿಬಿಐ, ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ ದೇವರಾಜು ಅವರಿಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 28ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಸಿಎಂ ಪತ್ನಿಗೆ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್ 464ರ 3 ಎಕರೆ 16 ಗುಂಟೆ ಜಮೀನಿನ ಬದಲಿಗೆ ಸುಮಾರು 56 ಕೋಟಿ ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಿ, ಈ ಸಂಬಂಧ ತನಿಖೆ/ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸೇರಿದಂತೆ ಮೂವರು ಸಾಮಾಜಿಕ ಕಾರ್ಯಕರ್ತರು 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ಪರಿಶೀಲನೆ ನಡೆಸಿ, ಪ್ರಕರಣದ ತನಿಖೆ/ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿ ರಾಜ್ಯಪಾಲರು ಆಗಸ್ಟ್​​​ 17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆಗಸ್ಟ್​​ 19ರಂದು ಸಲ್ಲಿಸಿದ್ದ ತಕರಾರು ಅರ್ಜಿ ತಿರಸ್ಕರಿಸಿದ ಹೈಕೋರ್ಟ್, ಸೆಪ್ಟೆಂಬರ್​​ 24ರಂದು ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು.

ಈ ಆದೇಶ ಹೊರಬಿದ್ದ ಬೆನ್ನಲ್ಲೇ ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಎಫ್ಐಆರ್ ದಾಖಲಾದ ದಿನವೇ ಅಂದರೆ ಸೆಪ್ಟೆಂಬರ್ 27ರಂದು ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್​ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಅದನ್ನು ವಜಾಗೊಳಿಸಿ ಆದೇಶಿಸಿತ್ತು. ಈ ಕ್ರಮ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಮುಡಾ: ಜನಪ್ರತಿನಿಧಿಗಳ ನ್ಯಾಯಾಲಯ ಲೋಕಾಯುಕ್ತ ವರದಿ ತಿರಸ್ಕರಿಸುವ ವಿಶ್ವಾಸವಿದೆ- ಸ್ನೇಹಮಯಿ ಕೃಷ್ಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.