ETV Bharat / state

ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹಿಸಿ ಅರ್ಜಿ: ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್

author img

By ETV Bharat Karnataka Team

Published : Feb 1, 2024, 9:19 PM IST

high-court-notice-to-central-government-and-election-commission
ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹಿಸಿ ಅರ್ಜಿ: ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದ್ದು, ನ್ಯಾಯಾಲಯವು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ನಿಷ್ಪಕ್ಷಪಾತ ಚುನಾವಣೆ ನಡೆಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ನಟ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ಟಿ.ಜಿ. ಶಿವಶಂಕರೇಗೌಡ ಅವರಿದ್ದ ನ್ಯಾಯಪೀಠ, ಕೇಂದ್ರ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, 2023 ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ನೀಡಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಆದ್ದರಿಂದ ಮುಂದಿನ ಚುನಾವಣೆಗಳು ನಿಷ್ಪಕ್ಷಪಾತವಾಗಿ ನಡೆಯುವುದು ಸಾಧ್ಯವಿಲ್ಲ. ಆದ್ದರಿಂದ ಇದಕ್ಕೆ ಕಡಿವಾಣ ಹಾಕಬೇಕು. ಮುಂದಿನ ದಿನಗಳಲ್ಲಿ ಕರ್ನಾಟಕ ಮಾಡೆಲ್ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿದರು.

ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ, ವಿಚಾರಣೆ ಮುಂದೂಡಿದೆ.

ಇದನ್ನೂ ಓದಿ: 27 ವರ್ಷದ ಬಳಿಕ ಕರ್ನಾಟಕ ಹೈಕೋರ್ಟ್‌ಗೆ ಕನ್ನಡಿಗ​ ಮುಖ್ಯ ನ್ಯಾಯಮೂರ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.