ETV Bharat / state

ಸೋನಿಯಾ, ರಾಹುಲ್​ ಗಾಂಧಿ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ: ನಲಪಾಡ್​ ವಿರುದ್ಧದ ಪ್ರಕರಣ ರದ್ದು ಪಡಿಸಿದ ಹೈಕೋರ್ಟ್

author img

By ETV Bharat Karnataka Team

Published : Feb 23, 2024, 8:29 PM IST

ಕಾಂಗ್ರೆಸ್​ ಪಕ್ಷದ ಯುವ ಮುಖಂಡ ಮೊಹಮ್ಮದ್​ ಹ್ಯಾರಿಸ್ ನಲಪಾಡ್​ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ನ್ಯಾಷನಲ್​ ಹೆರಾಲ್ಡ್​ ಪತ್ರಿಕೆ ಹಗರಣ ಆರೋಪದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮುಖಂಡರಾದ ಸೋನಿಯಾ ಗಾಂಧಿ ಹಾಗೂ ರಾಹಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆ ನಡೆಸಿದ್ದರು. ಇದನ್ನು ಖಂಡಿಸಿ ನಗರದ ಕ್ವೀನ್ಸ್​ ರಸ್ತೆಯಿಂದ ರಾಜಭವನದ ವರೆಗೂ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಕಾಂಗ್ರೆಸ್​ ಪಕ್ಷದ ಯುವ ಮುಖಂಡ ಮೊಹಮ್ಮದ್​ ಹ್ಯಾರಿಸ್ ನಲಪಾಡ್​ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯಲ್ಲಿ ದಾಖಲಾಗಿದ್ದ ಖಾಸಗಿ ದೂರು ಮತ್ತು ಆದರ ಸಂಬಂಧ ನಡೆಯುತ್ತಿದ್ದ ವಿಚಾರಣೆ ರದ್ದು ಕೋರಿ ನಲಪಾಡ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್​ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ಪುರಸ್ಕರಿಸಿದ್ದು, ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರತಿಭಟನೆ ನಡೆದಿರುವ ಸಂಬಂಧ ಕೊರೊನಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಆದರೆ, ಇದೇ ಪ್ರಕರಣ ಸಂಬಂಧ ಐಪಿಸಿ 188ರ (ಸರ್ಕಾರಿ ಅಧಿಕಾರಿಯ ಆದೇಶ ಉಲ್ಲಂಘನೆ) ಮತ್ತು ಪೊಲೀಸ್​ ಕಾಯಿದೆಯ 103 ಅಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ. ಐಪಿಸಿ ಸೆಕ್ಷನ್​ 188ರ ಉಲ್ಲಂಘನೆಯಾಗಬೇಕು ಎಂದರೆ ಜಿಲ್ಲಾಧಿಕಾರಿಗಳ ಹಂತದ ಅಧಿಕಾರಿ ಆದೇಶ ಉಲ್ಲಂಘನೆ ಮಾಡಿರಬೇಕು ಎಂಬ ನಿಯಮವಿದೆ. ಆದರೆ, ವಿಚಾರಣಾ ನ್ಯಾಯಾಲಯ ಈ ಎಲ್ಲ ಅಂಶಗಳನ್ನು ಗಮನಿಸಿದೆ ಕಾಗ್ನಿಜೆನ್ಸ್​ ಪಡೆದುಕೊಂಡಿದೆ. ಆದ್ದರಿಂದ ಪ್ರಕರಣ ರದ್ದುಮಾಡಬೇಕು ಎಂದು ಕೋರಿದ್ದರು. ಈ ಅಂಶವನ್ನು ಪುರಸ್ಕರಿಸಿದ ನ್ಯಾಯಪೀಠ, ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ ಏನು ? : ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್​ ಗಾಂಧಿಯನ್ನು ವಿಚಾರಣೆಗೆ ಒಳಪಡಿಸಿದ್ದನ್ನು ಖಂಡಿಸಿ ಅರ್ಜಿದಾರರು ಸೇರಿದಂತೆ 800ಕ್ಕೂ ಹೆಚ್ಚು ಕಾರ್ಯಕರ್ತರು ಕ್ವೀನ್ಸ್​ ರಸ್ತೆಯಿಂದ ರಾಜಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಇದರಿಂದಾಗಿ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಆರೋಪಿಸಿ ಶಿವಾಜಿನಗರ ಪೊಲೀಸ್​ ಠಾಣೆಯ ಇನ್ಸ್ಪೆಕ್ಟ್ರರ್​ ಅವರು ವಿಚಾರಣಾ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣಾ ನ್ಯಾಯಾಲಯ ಕಾಗ್ನಿಜೆನ್ಸ್​ ತೆಗೆದುಕೊಂಡು ಎಫ್​ಐಆರ್​ ದಾಖಲಿಸಲು ನಿರ್ದೇಶನ ನೀಡಿತ್ತು. ತನಿಖೆ ನಡೆಸಿದ್ದ ಪೊಲೀಸರು ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಇದನ್ನು ಪ್ರಶ್ನಿಸಿದ್ದ ಅರ್ಜಿದಾರ ನಲಪಾಡ್​ ಇದೇ ಆರೋಪ ಸಂಬಂಧಿಸಿದಂತೆ ಮೊದಲ ಆರೋಪಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಇತರೆ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಪುರಸ್ಕರಿಸಿದೆ. ಹೈಕೋರ್ಟ್​ ಪ್ರಕರಣವನ್ನು ರದ್ದುಪಡಿಸಿದೆ. ಆದ್ದರಿಂದ ತಮ್ಮ ವಿರುದ್ಧ ಪ್ರಕರಣ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಇದನ್ನೂ ಓದಿ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದು ಕೋರಿ ಶ್ರೀರಾಮುಲು ಸಲ್ಲಿಸಿದ್ದ ಅರ್ಜಿ ವಜಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.